ಮೈಸೂರಿನಲ್ಲಿ ಹೊಸ ವರ್ಷಾಚರಣೆ: ಪೊಲೀಸ್ ಬಿಗಿ ಬಂದೋಬಸ್ತ್..ಚಾಮುಂಡಿ ಪಡೆ ಸಕ್ರಿಯ
ಮೈಸೂರು, ಡಿಸೆಂಬರ್ 31: ಹೊಸ ವರ್ಷಾಚರಣೆಗೆ ಸಾಂಸ್ಕೃತಿಕ ನಗರಿಗೆ ಜನಸಾಗರವೇ ಹರಿದು ಬರಲಿರುವ ಕಾರಣದಿಂದಾಗಿ ಜಿಲ್ಲಾಡಳಿತ ಸರ್ವಸಿದ್ದತೆಯನ್ನು ಮಾಡಿಕೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಎಲ್ಲರೂ ಸಡಗರ ಸಂಭ್ರಮದಿಂದ ಹೊಸವರ್ಷಾಚರಣೆ ಮಾಡಲು ಅನುಕೂಲವಾಗುವಂತೆ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನೊಳಗೊಂಡ ಎಂಟು ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ಫೀಲ್ಡ್ ಗೆ ಇಳಿಯಲಿದೆ.
ವರ್ಷಾಚರಣೆ ವೇಳೆ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಜತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಂಡಿದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಹೊಸ ವರ್ಷಾಚರಣೆ ನೆಪದಲ್ಲಿ ಅಸಭ್ಯ ವರ್ತನೆಯನ್ನು ಯಾರೂ ಮಾಡದಂತೆ ಎಚ್ಚರಿಕೆ ವಹಿಸಲಾಗುತ್ತಿದ್ದು, ಒಂದು ವೇಳೆ ಅದನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಹೊಸ ವರ್ಷದ ಸಂಭಮಾಚರಣೆ ಸಂದರ್ಭ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ಭದ್ರತೆಗೆ 1600 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 4 ಡಿಸಿಪಿ, 12 ಎಸಿಪಿ, 32 ಪಿಐ, 53ಎಸ್‌ಐ, 112 ಎಎಸ್‌ಐ, 895ಪೇದೆಗಳು, 79ಮಹಿಳಾ ಸಿಬ್ಬಂದಿ, 12ಸಿಎಆರ್ ಮತ್ತು ಕೆಎಸ್‌ಆರ್‌ಪಿ ತುಕಡಿ, 2 ಕಮಾಂಡೋ ಪಡೆ, 1ಶ್ವಾನ ದಳ ಹಾಗೂ 2 ಬಾಂಬ್ ಪತ್ತೆ ತಂಡವನ್ನು ಡಿ.31ರ ರಾತ್ರಿಗೆ ನಿಯೋಜನೆ ಮಾಡಲಾಗಿದೆ.
ಮಹಿಳೆಯರ ರಕ್ಷಣೆಗಾಗಿ ಚಾಮುಂಡಿ ಪಡೆ
ಮಹಿಳೆಯರ ರಕ್ಷಣೆಗಾಗಿ ಸುರಕ್ಷತಾ ಪಿಂಕ್ ಗರುಡ (ಚಾಮುಂಡಿ ಪಡೆ) ರಚನೆ ಮಾಡಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆಗಾಗಿ ರಚನೆ ಮಾಡಲಾಗಿದೆ. ನಗರದಲ್ಲಿರುವ ಸಿಸಿ ಕ್ಯಾಮರಾಗಳ ಜತೆಗೆ ಹೆಚ್ಚುವರಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವೀಲ್ಹಿಂಗ್, ಓವರ್ ಸ್ಪೀಡ್, ಕರ್ಕಶ ಶಬ್ದ, ಕುಡಿದು ವಾಹನ ಚಾಲನೆ ತಡೆಗಾಗಿ ಸಂಚಾರ ಪೊಲೀಸರು, ತಜ್ಞರನ್ನೊಳಗೊಂಡ ಕ್ಷಿಪ್ರ ಪಡೆ ರಚನೆ ಮಾಡಲಾಗಿದೆ.

ರಿಂಗ್ ರಸ್ತೆಯಲ್ಲಿ 112 ಹೈವೇ ಪೆಟ್ರೋಲಿಂಗ್ ವಾಹನಗಳನ್ನು ನಿಯೋಜನೆ ಮಾಡಲಾಗುತ್ತದೆ. ಗರುಡ ವಾಹನಗಳು ಗಸ್ತು ತಿರುಗಲಿದ್ದು, ನಗರದ ಹೊರವಲಯದಲ್ಲಿ ವಿವಿಧೆಡೆ ಚೆಕ್‌ಪೋಸ್ಟ್ ಸ್ಥಾಪನೆ ಮಾಡಲಾಗುತ್ತದೆ. ನಗರದ ಒಳ ಭಾಗದಲ್ಲೂ ಚೆಕ್ ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ.
ಡಿ.31ರ ರಾತ್ರಿ ಹೊಸ ವರ್ಷ ಆಚರಣೆ ನೆಪದಲ್ಲಿ ವಿದ್ಯಾರ್ಥಿಗಳು, ಯುವಕರು ಯಾವುದೇ ಕಾರಣಕ್ಕೂ ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸಬಾರದು. ವರ್ತಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಜೂಟಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆ ಸಂಭಮದಲ್ಲಿ ಮಹಿಳೆಯರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಅವರ ಸುರಕ್ಷತೆ ದೃಷ್ಟಿಯಿಂದ ಚಾಮುಂಡಿ ಹೆಸರಿನ ಮಹಿಳಾ ಪೊಲೀಸ್ ಅಧಿಕಾರಿಗಳಿರುವ ವಿಶೇಷ ಪಡೆ ರಚಿಸಲಾಗಿದೆ.

ಚಾಮುಂಡಿಪಡೆಯಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡವಿದ್ದು ಇದು ರಾತ್ರಿ ನಗರದಲ್ಲಿ ಓಡಾಟ ನಡೆಸಲಿದೆ. ಒಂದು ವೇಳೆ ಯುವತಿಯರಿಗೆ ಕೀಟಲೆ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ. ಮಹಿಳೆಯರು ಹೆಚ್ಚಾಗಿ ಸೇರುವ ಕಡೆ ಚಾಮುಂಡಿ ಪಡೆ ವಾಹನ ಸಂಚರಿಸಿ ಪುಂಡರ ಮೇಲೆ ನಿಗಾವಹಿಸಲಿದೆ.
ಸಂತೋಷ ಕೂಟ ನಡೆಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವೀಸ್ ಅಪಾರ್ಟ್‌ಮೆಂಟ್, ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘ ಸಂಸ್ಥೆಗಳು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಹೊಸ ವರ್ಷಾಚರಣೆಗೆ ರಾತ್ರಿ 1ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಭದ್ರತೆ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಡಿ.31ರ ರಾತ್ರಿ 7 ಗಂಟೆಯಿಂದ ಜ.1ರ ಬುಧವಾರ ಮುಂಜಾನೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಚಾಮುಂಡಿ ಬೆಟ್ಟದ ನಿವಾಸಿಗಳಿಗೆ ಇದು ಅನ್ವಯವಾಗುವುದಿಲ್ಲ. ಬೆಟ್ಟಕ್ಕೆ ತೆರಳಿದವರು ರಾತ್ರಿ 9ಗಂಟೆಯೊಳಗೆ ಬೆಟ್ಟದಿಂದ ವಾಪಾಸ್ ಬರಲು ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರಿಗೆ ಪೊಲೀಸರ ಸೂಚನೆಗಳೇನು?
ಸಾರ್ವಜನಿಕರು ತಮ್ಮ ಅಂಗಡಿ, ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಧ್ವನಿವರ್ದಕ ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ, ಮಾದಕ ವಸ್ತುಗಳ ಸೇವನೆ, ಜೂಜಾಟ ನಡೆಸುವುದು ನಿಷೇಧ ಮಾಡಲಾಗಿದೆ.
ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಚೆಗೆ ವಿರುದ್ದವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಉಂಟು ಮಾಡಬಾರದು. ರಸ್ತೆ, ಪಾರ್ಕ್, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡಬಾರದು. ಸೋಷಿಯಲ್ ಮೀಡಿಯಾ ಮೂಲಕ ಹೊಸ ವರ್ಷಾಚರಣೆ ಸಂಬಂಧ ಅಪಪ್ರಚಾರ ಪೋಸ್ಟ್ ಗಳನ್ನು ಹಾಕಬಾರದು. ಹೊಸ ವರ್ಷದ ಸಂಬಂಧ ಸಾಮಾಜಿಕ ಜಾಲಾತಾಣಗಳ ಮೂಲಕ ಉಡುಗೊರೆ ನೀಡುವ, ಉಡುಗೊರೆ ಬಂದಿರುವ ನೆಪದಲ್ಲಿ ಕಳುಹಿಸುವ ಯಾವುದೇ ಅಪರಿಚಿತ ಲಿಂಕ್‌ಗಳಿಗೆ ಮರುಳಾಗಿ ಡಿಜಿಟಲ್ ಮೋಸಕ್ಕೆ ಒಳಗಾಗಬಾರದು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾತನಾಡಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಹೊಸ ವರ್ಷ ಆಚರಣೆ ವೇಳೆ ಅಸಭವಾಗಿ ವರ್ತಿಸುವುದು, ಯಾರಿಗಾದರೂ ತೊಂದರೆ ನೀಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ












Click it and Unblock the Notifications