ಇಂದು (ಫೆ.9) ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಅದ್ಧೂರಿ ಸಮಾರೋಪ
ಮೈಸೂರು, ಫೆಬ್ರವರಿ 8 : ಬೆಂಗಳೂರು ಮತ್ತು ಮೈಸೂರಿನಲ್ಲಿ ಏಕಕಾಲದಲ್ಲಿ ಆಯೋಜಿಸಿದ್ದ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭ ಮೈಸೂರು ಅರಮನೆ ಮುಂದೆ ಇಂದು(ಫೆ. 9) ಸಂಜೆ 6.30 ನಡೆಯಲಿದ್ದು ಸಾಂಸ್ಕೃತಿಕ ನಗರಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಮನೋರಂಜನಾ ಕಾರ್ಯಕ್ರಮಗಳಿಗಾಗಿ ವಿಶಾಲ ವೇದಿಕೆಯನ್ನು ಸಜ್ಜುಗೊಳಿಸಿದ್ದು, ವಿವಿಧ ಕಲಾತಂಡಗಳಿಂದ ನೃತ್ಯ ರೂಪಕ, ಹೆಸರಾಂತ ಕಲಾವಿದರಿಂದ ವಿಶೇಷ ಕಾರ್ಯಕ್ರಮ ಜರುಗಲಿದೆ. ಅಂತಾರಾಷ್ಟ್ರೀಯ ಸಿನಿಮೋತ್ಸವದ ಉದ್ಘಾಟನೆಯು ಬೆಂಗಳೂರಿನ ವಿಧಾನಸೌಧದ ಮುಂದೆ ನಡೆಸಲಾಗಿತ್ತು. ಸಮಾರೋಪವನ್ನು ಮೈಸೂರಿನಲ್ಲಿ ಆಚರಿಸಲಾಗುತ್ತಿದೆ.[9ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು(ಫೆ.2) ಚಾಲನೆ]
ರಾಜ್ಯಪಾಲರಾದ ವಜುಭಾಯಿ ರುಡಾಭಾಯಿ ವಾಲಾ ಅವರು ಸಿನಿಮೋತ್ಸವದ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಚಿವರಾದ ತನ್ವೀರ್ ಸೇಠ್, ಪ್ರಿಯಾಂಕ್ ಖರ್ಗೆ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಎಂ.ಜೆ. ರವಿಕುಮಾರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಕೆ.ಸೋಮಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಭಾಗವಹಿಸುವರು.

ಮನರಂಜನಾ ಕಾರ್ಯಕ್ರಮ
ಖ್ಯಾತ ನೃತ್ಯ ಕಲಾವಿದರಾದ ನಿರುಪಮಾ ರಾಜೇಂದ್ರ ಹಾಗೂ ತಂಡದವರಿಂದ ಸಿನಿಮೋತ್ಸವದ ಅಂಗವಾಗಿ ನೃತ್ಯ ರೂಪಕ ಹಾಗೂ ಹೆಸರಾಂತ ಚಲನಚಿತ್ರ ಕಲಾವಿದರ ತಂಡಗಳಿಂದ ಮನರಂಜನಾ ಕಾರ್ಯಕ್ರಮಗಳನ್ನು ಸಿನಿಮೋತ್ಸವದ ಅಂಗವಾಗಿ ಏರ್ಪಡಿಸಲಾಗಿದೆ.

ಸಮಾರೋಪದಲ್ಲಿ ಸಿಲಿಕಾನ್ ಸಂಭ್ರಮ
ಕಳೆದ ವರ್ಷ ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಸಿನಿಮೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕದ ಇತಿಹಾಸ ಹಾಗೂ ಪರಂಪರೆ ಬಿಂಬಿಸುವ ನೃತ್ಯ ರೂಪಕ ಪ್ರದರ್ಶಿಸಿದ್ದ ನಿರುಪಮಾ ರಾಜೇಂದ್ರ ಅವರು, ಈ ಸಮಾರೋಪ ಕಾರ್ಯಕ್ರಮದಲ್ಲಿ 'ಸಿಲ್ವರ್ ಟು ಸಿಲಿಕಾನ್' ಹಾಗೂ 'ಸಂಭ್ರಮ' ನೃತ್ಯ ರೂಪಕ ಪ್ರಸ್ತುತಿ ಪಡಿಸುವರು. ಇದಲ್ಲದೆ, ಚಲನಚಿತ್ರ ನಾಯಕ ನಟ ನಟಿಯರು ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ.

ಹಂಪಿ ವಿಜಯವಿಠಲ ಮಾದರಿ ವೇದಿಕೆ
ಅಂತಾರಾಷ್ಟ್ರೀಯ ಸಿನಿಮೋತ್ಸವದ ಸಮಾರೋಪವನ್ನು ಹೆಚ್ಚು ಅವಿಸ್ಮರಣೀಯವಾಗಿಸಲು ವಿಶ್ವಸಂಸ್ಥೆಯ ಪಾರಂಪರಿಕ ಸ್ಮಾರಕವಾಗಿರುವ ಹಂಪಿಯ 'ವಿಜಯ ವಿಠಲ' ದೇವಸ್ಥಾನದ ಮಾದರಿಯಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ವೇದಿಕೆಯು 72x64 ಅಡಿ ವಿಸ್ತಾರ, 4 ಅಡಿ ಎತ್ತರವಿದ್ದು, ಅರಮನೆಯ ಹಿನ್ನೋಟದಲ್ಲಿ ಅತ್ಯಂತ ಸುಂದರವಾಗಿ ಮೂಡಿ ಬಂದಿದೆ. ಒಟ್ಟು 8000 ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ.

4 ವಿಭಾಗಗಳಲ್ಲಿ 10 ಪ್ರಶಸ್ತಿಗಳು
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಒಟ್ಟು 18 ವಿಭಾಗಗಲ್ಲಿ 240 ಚಿತ್ರಗಳು ಪ್ರದರ್ಶನ ಕಂಡಿದ್ದು, ಕನ್ನಡದ 40 ಚಿತ್ರಗಳೂ ಸೇರಿವೆ. ಈ ಪೈಕಿ 4 ನಾಲ್ಕು ವಿಭಾಗಗಳಲ್ಲಿ ಒಟ್ಟು 10 ಪ್ರಶಸ್ತಿಗಳನ್ನು ತೀರ್ಪುಗಾರರು ಸಮಾರೋಪ ಸಮಾರಂಭದಲ್ಲಿ ಪ್ರಕಟಿಸಲಿದ್ದು, ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜ್ಯೂರಿ ಪ್ರಶಸ್ತಿ, ವಿಮರ್ಶಕ ಪ್ರಶಸ್ತಿ
ಕನ್ನಡ ಸಿನಿಮಾಗಳ ವಿಭಾಗ ಹಾಗೂ ಕನ್ನಡ ಜನಪ್ರಿಯ ಸಿನಿಮಾಗಳ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡ ಸಿನಿಮಾಗಳ ವಿಭಾಗದಲ್ಲಿ ಅತ್ಯುತ್ತಮ ಮೊದಲ, ದ್ವಿತೀಯ ಹಾಗೂ ತೃತೀಯ ಚಿತ್ರಗಳ ಜೊತೆಗೆ 1 ಅಂತಾರಾಷ್ಟ್ರೀಯ ಜ್ಯೂರಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕನ್ನಡ ಜನಪ್ರಿಯ ಸಿನಿಮಾಗಳಲ್ಲಿ ಅತ್ಯುತ್ತಮ ಪ್ರಥಮ, ದ್ವಿತೀಯ ಹಾಗೂ ತೃತೀಯ ಸಿನಿಮಾ ಪ್ರಶಸ್ತಿ ನೀಡಲಾಗುತ್ತದೆ. ಭಾರತೀಯ ಸಿನಿಮಾ ವಿಭಾಗದಲ್ಲಿ 2 ಅತ್ಯುತ್ತಮ ಜ್ಯೂರಿ ಪ್ರಶಸ್ತಿ ಹಾಗು 1 ವಿಮರ್ಶಕರ ಪ್ರಶಸ್ತಿ ನೀಡಲಾಗುತ್ತದೆ. ಇದಲ್ಲದೆ ಏಷ್ಯಾ ವಿಭಾಗದಲ್ಲಿ 1 ಅತ್ಯುತ್ತಮ ಸಿನಿಮಾ ಪ್ರಶಸ್ತಿ ನೀಡಲಾಗುತ್ತದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..











Click it and Unblock the Notifications