ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಕೊಲೆ ಬೆದರಿಕೆ
ಮೈಸೂರು, ನವೆಂಬರ್ 11 : ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಈ ಕುರಿತು ಸಂಸದರು ಮೈಸೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಒಂದು ಸಂಘಟನೆಯ ಫೇಸ್‌ಬುಕ್ ಖಾತೆಯಿಂದ ಜೀವ ಬೆದರಿಕೆ ಹಾಕಲಾಗಿದೆ. ಮಡಿಕೇರಿಯಲ್ಲಿ ಮಂಗಳವಾರ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಕುಟ್ಟಪ್ಪ ಅವರ ಮೃತದೇಹದ ಫೋಟೋ ಜೊತೆಗೆ ಪ್ರತಾಪ್ ಸಿಂಹ ಅವರ ಫೋಟೋ ವಿಟ್ಟು ಅವಹೇಳನಕಾರಿಯಾಗಿ ನಿಂದನೆ ಮಾಡಲಾಗಿದೆ. [ಕುಟ್ಟಪ್ಪ ಸಾವು: ಆಕಸ್ಮಿಕವೋ, ಪೂರ್ವ ನಿಯೋಜಿತವೋ?]

'ಕುಟ್ಟಪ್ಪ ಅವರಂತೆಯೇ ನಿನಗೂ ಸಾವು ಬರುತ್ತದೆ ಎಂದು ಬೆದರಿಕೆ ಹಾಕಲಾಗಿದೆ' ಎಂದು ಪ್ರತಾಪ್ ಸಿಂಹ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜೀವ ಬೆದರಿಕೆ ಕುರಿತು ವಿಜಯನಗರ ಪೊಲೀಸರಿಗೆ ಅವರು ದೂರು ನೀಡಿದ್ದಾರೆ ಹಾಗೂ ಮೈಸೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೂ ಈ ಕುರಿತು ಮಾಹಿತಿ ನೀಡಿದ್ದಾರೆ. [ಕೊಡಗಿನಲ್ಲಿ ಬೂದಿಮುಚ್ಚಿದ ಕೆಂಡದಂಥ ವಾತಾವರಣ]
ಮಂಗಳವಾರ ಮಡಿಕೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಪರ, ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಕುಟ್ಟಪ್ಪ ಅವರು ಕಲ್ಲು ತೂರಾಟದಲ್ಲಿ ಸಾವನ್ನಪ್ಪಿದ್ದರು.ಈ ಘಟನೆ ಬಳಿಕ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.












Click it and Unblock the Notifications