ಪಾಲಿಕೆ ಸಭೆಗೆ ಸಹೋದರನ ಕರೆತಂದು ವಿವಾದ ಸೃಷ್ಟಿಸಿದ ಮೈಸೂರು ಮೇಯರ್
ಮೈಸೂರು, ಜೂನ್ 3: ಇಂದಿನ ಆಡಳಿತದಲ್ಲಿ ಕೆಲವೆಡೆ ಮಹಿಳಾ ರಾಜಕಾರಣಿಗಳು ತಮ್ಮ ಗಂಡನನ್ನೋ, ಸಹೋದರನನ್ನೋ ತಾವು ನಿರ್ವಹಿಸುವ ಕರ್ತವ್ಯದ ಸ್ಥಳಕ್ಕೆ ಕರೆದುಕೊಂಡು ಹೋಗುವುದು ಆಗಾಗ ವರದಿ ಆಗುತ್ತವೆ. ಸರ್ಕಾರ ಮಹಿಳೆಯರಿಗೂ ಆಡಳಿತದಲ್ಲಿ ಸೂಕ್ತ ಪ್ರಾತಿನಿಧ್ಯ ಕೊಡಬೇಕೆಂದು ಮಾಡಿದ ಮಹಿಳಾ ಮೀಸಲಾತಿಯನ್ನು, ಮಹಿಳೆಯರೇ ಪುರುಷರನ್ನು ಕರೆತರುವ ಮೂಲಕ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತಿದ್ದಾರೆ.
ಮಹಿಳಾ ರಾಜಕಾರಣಿಗಳು ಕರೆತರುವ ಆ ಪುರುಷರು ಅಧಿಕಾರಿಗಳ ಮೇಲೆ ದರ್ಬಾರ್ ತೋರಿಸಿಕೊಂಡು ಮಹಿಳೆಯರ ಪರವಾಗಿ ತಾವೇ ಸಭೆಗಳಲ್ಲಿ ಭಾಗವಹಿಸಿ ಮಾತನಾಡುವುದು ಇದೆ. ಆ ಸಾಲಿಗೆ ಇದೀಗ ಮೈಸೂರು ಮಹಾ ಪೌರರಾದ ತಸ್ನೀಂ ಅವರು ಸೇರ್ಪಡೆಯಾಗಿರುವುದು ನಗರದ ಜನತೆಯಲ್ಲಿ ಅಸಮಾಧಾನ ಸೃಷ್ಟಿಸಿದೆ. ಮೇಯರ್ ರಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅನಗತ್ಯವಾಗಿ ತಮ್ಮ ಸಂಬಂಧಿಯನ್ನು ಸಭೆಗೆ ಕರೆತರುವ ಮೂಲಕ ನಿಯಮವನ್ನು ಉಲ್ಲಂಘಿಸಿದ್ದಾರೆ. ಮಹಾಪೌರರ ವರ್ತನೆಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಕಂದಾಯ ಅಧಿಕಾರಿಗಳು ಹಾಗೂ ನಗರ ಪಾಲಿಕೆ ಸದಸ್ಯರು ಭಾಗಿ
ಲಾಕ್ ಡೌನ್ ಸಡಿಲಗೊಂಡ ಕಾರಣ ನಗರ ಪಾಲಿಕೆಯ ಕೆಲಸಗಳಿಗೆ ಚಾಲನೆ ದೊರಕಿದೆ. ಅದರಂತೆ ಮೈಸೂರು ಮಹಾಪೌರರಾದ ತಸ್ನೀಂ ಅವರು ಆಯುಕ್ತ ಗುರುದತ್ ಹೆಗಡೆ ಅವರ ಜೊತೆಗೂಡಿ ವಲಯವಾರು ನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ವಾರ್ಡ್ ಗಳ ಅಭಿವೃದ್ಧಿ ಸಂಬಂಧ ಸಭೆ ನಡೆಸಲು ತೀರ್ಮಾನಿಸಿದ್ದರು.
ಸೋಮವಾರ ಸಂಜೆ 7 ಕ್ಕೆ ವಲಯ ಕಚೇರಿ ಸಂಬಂಧಿಸಿದಂತೆ ನಗರ ಪಾಲಿಕೆಯ ನವೀಕೃತ ಸಭಾಂಗಣದಲ್ಲಿ ಆಯುಕ್ತರು, ಮಹಾಪೌರರು, ಕಂದಾಯ ಅಧಿಕಾರಿಗಳು ಹಾಗೂ ನಗರ ಪಾಲಿಕೆ ಸದಸ್ಯರು ಪಾಲ್ಗೊಂಡಿದ್ದರು.

ಅಧಿಕಾರಿಗಳು ಸದಸ್ಯರ ಮಾತುಗಳನ್ನು ಕೇಳುತ್ತಿಲ್ಲ
ಸಭೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು ತಮ್ಮ ವಾರ್ಡ್ ಗಳ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದರು. ಈ ನಡುವೆ ತಸ್ನೀಂ ಅವರ ಸಹೋದರನೆಂದು ಹೇಳಿಕೊಂಡ ಸಲೀಂ ಎಂಬುವರು ಸದಸ್ಯರಲ್ಲದಿದ್ದರೂ ಸಭೆಯಲ್ಲಿ ಭಾಗವಹಿಸಿದ್ದರು. ಸದಸ್ಯರು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ಎದ್ದು ನಿಂತ ಸಲೀಂ, ಅಧಿಕಾರಿಗಳು ಸದಸ್ಯರ ಮಾತುಗಳನ್ನು ಕೇಳುತ್ತಿಲ್ಲ. ಅವರ ವರ್ತನೆ ಸರಿ ಇಲ್ಲ ಎಂದು ಆರೋಪಿಸಿದ್ದಾರೆ.

ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತಿಲ್ಲ
ಮುಂದುವರೆದು ಮಾತನಾಡಿ, ನಗರ ಪಾಲಿಕೆ ಆಯುಕ್ತರು ಕೂಡಾ ಇಂತಹ ಅಧಿಕಾರಿಗಳ ಕಡೆಗೆ ಗಮನ ಹರಿಸುತ್ತಿಲ್ಲ ಎಂದೂ ಹೇಳಿದ್ದಾರೆ. ಇದನ್ನು ಗಮನಿಸಿದ ಆಯುಕ್ತರು, ನೀವು ಸಭೆಗೆ ಬಂದಿದ್ದಾದರೂ ಹೇಗೆ ಎಂದು ತಿಳಿಯುತ್ತಿಲ್ಲ. ಇದು ಅಧಿಕಾರಿಗಳು ಮತ್ತು ಸದಸ್ಯರಿಗೆ ಸೀಮಿತವಾಗಿರುವ ಸಭೆ. ಸಾರ್ವಜನಿಕರು ಭಾಗವಹಿಸುವಂತಿಲ್ಲ. ಹೀಗಾಗಿ ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಮಾತ್ರ ಅವಕಾಶ
ಮುಂದಿನ ದಿನಗಳಲ್ಲಿ ಸಂಬಂಧಪಡದ ವ್ಯಕ್ತಿಗಳನ್ನು ಸಭೆಗೆ ಸೇರಿಸಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಈ ಕುರಿತು ಒನ್ಇಂಡಿಯಾ ಕನ್ನಡದೊಂದಿಗೆ ಮಾತನಾಡಿದ ಆಯುಕ್ತ ಗುರುದತ್ ಅವರು, ""ನಗರ ಪಾಲಿಕೆಯ ಯಾವುದೇ ಸಭೆಗಳಿಗೆ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸರ್ಕಾರವೇ ನಿಷೇಧಿಸಿದ್ದು, ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಮಾತ್ರ ಅವಕಾಶವಿದೆ. ಮೇಯರ್ ಅವರಿಗೆ ಈಗಾಗಲೇ ಈ ಕುರಿತು ತಿಳಿಸಲಾಗಿದೆ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications