ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಟೀ ಅಂಗಡಿ ಮುಚ್ಚುವ ಆದೇಶಕ್ಕೆ ವ್ಯಾಪಾರಿಗಳು ಗರಂ

|
Google Oneindia Kannada News

ಮೈಸೂರು, ಜುಲೈ.17: ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕಾಗಿ ಪರದಾಡುವಂತಾ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ.

Recommended Video

Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

ಮೈಸೂರು ನಗರದಲ್ಲಿ ಕೊರೊನಾವೈರಸ್ ಹರಡುವಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಟೀ ಅಂಗಡಿಗಳನ್ನು ಅನಿರ್ದಿಷ್ಟಾವಧಿವರೆಗೂ ಬಂದ್ ಮಾಡುವಂತೆ ಮಹಾನಗರ ಪಾಲಿಕೆಯು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ.

ಜುಲೈ 20ರಂದು ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನವಿಲ್ಲಜುಲೈ 20ರಂದು ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನವಿಲ್ಲ

ಮಹಾನಗರ ಪಾಲಿಕೆ ಆದೇಶಕ್ಕೆ ನಗರದ ಟೀ ಅಂಗಡಿ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು ಲಾಕ್ ಡೌನ್ ಗೆ ನಾವೂ ಕೂಡಾ ಬೆಂಬಲ ನೀಡುತ್ತೇವೆ. ಆದರೆ ದಿಢೀರನೇ ಹೀಗೆ ಟೀ ಅಂಗಡಿ ಬಂದ್ ಮಾಡುವಂತೆ ಆದೇಶಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

Mysore Metropolis Has Ordered The Closure Of Tea Shops In The City

ಕಳೆದ 24 ಗಂಟೆಗಳಲ್ಲೇ 130 ಮಂದಿಗೆ ಸೋಂಕು:

ಮೈಸೂರು ಜಿಲ್ಲೆಯಲ್ಲಿ ಕೊರೊನಾವೈರಸ್ ಸೋಂಕು ಕಡಿವಾಣಕ್ಕೆ ಬಂತು ಎನ್ನುವಷ್ಟರಲ್ಲೇ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲೇ ಜಿಲ್ಲೆಯಲ್ಲಿ 130 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1320ಕ್ಕೆ ಏರಿಕೆಯಾಗಿದೆ. ಈ ಪೈಕಿ 531 ಸೋಂಕಿತರು ಗುಣಮುಖರಾಗಿದ್ದರೆ, 739 ಸಕ್ರಿಯ ಪ್ರಕರಣಗಳಿವೆ. ಇನ್ನು, ಮಹಾಮಾರಿಗೆ ಜಿಲ್ಲೆಯಲ್ಲಿ ಇದುವರೆಗೂ 50 ಮಂದಿ ಪ್ರಾಣ ಬಿಟ್ಟಿದ್ದಾರೆ.

English summary
Mysore Metropolis Has Ordered The Closure Of Tea Shops In The City.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X