ಮೈಸೂರು: ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಲೇಖನ ಸಾಮಾಗ್ರಿ, ನೋಟ್ ಪುಸ್ತಕ, ಸಮವಸ್ತ್ರ, ಬಟ್ಟೆ ಸೋಪು, ಮೈಸೋಪು, ಕೊಬ್ಬರಿ ಎಣ್ಣೆ, ಟೂತ್ ಪೇಸ್ಟ್ ನೀಡಲಾಗುವುದು. ಪ್ರವೇಶ ಪಡೆಯಲು 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಪ್ರವರ್ಗ ೨ಎ, ೨ಬಿ, ೩ಎ, ೩ಬಿ ವರ್ಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 44,500 ರೂ, ಪ್ರವರ್ಗ-೧ಕ್ಕೆ ಸೇರಿದ ವಿದ್ಯಾರ್ಥಿಗಳ ೧ ಲಕ್ಷ ರೂ. ಹಾಗೂ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 2 ಲಕ್ಷ ರೂ. ಒಳಗಿರಬೇಕು.
ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿನಿಲಯಗಳಿಂದ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ 2014ರ ರ ಜೂನ್ 12 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪಿರಿಯಾಪಟ್ಟಣ ತಾಲ್ಲೂಕು ಇವರನ್ನು ಸಂಪರ್ಕಿಸಬಹುದು. (ಕರ್ನಾಟಕ ವಾರ್ತೆ)












Click it and Unblock the Notifications