ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಬ್ರಹ್ಮಣ್ಯ ಜಾತ್ರೆ ಹಿನ್ನೆಲೆ: ಬೆಂಗಳೂರು – ಮೈಸೂರು ರಸ್ತೆ ಬಂದ್

|
Google Oneindia Kannada News

ಮೈಸೂರು, ಡಿಸೆಂಬರ್ 12 : ಷಷ್ಠಿ ಹಬ್ಬದ ಪ್ರಯುಕ್ತ ಡಿಸೆಂಬರ್ 13 ರಂದು ಗುರುವಾರ ಮೈಸೂರು - ಬೆಂಗಳೂರು ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಹೀಗಾಗಿ ಆ ರಸ್ತೆಯ ಸಂಚಾರ ಬಂದ್ ಮಾಡಲಾಗಿದೆ.

ಇಂದು ರಾತ್ರಿ 12 ರಿಂದ ನಾಳೆ ರಾತ್ರಿ 12 ರವರೆಗೆ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಕಾರ್ಯ ಚುರುಕುಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಕಾರ್ಯ ಚುರುಕು

ಮೈಸೂರಿನಿಂದ ಬೆಂಗಳೂರು ರಸ್ತೆಯ ಮೂಲಕ ಸಿದ್ದಲಿಂಗಪುರ ಗ್ರಾಮದ ಬಳಿ ಶ್ರೀಸುಬ್ರಹ್ಮಣ್ಣೆಶ್ವರಸ್ವಾಮಿ ದೇವಸ್ಥಾನದ ನಂತರದ ಹೊರ ಊರುಗಳಿಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳು ಬೆಂಗಳೂರು ರಸ್ತೆ-ರಿಂಗ್ ರಸ್ತೆ ಜಂಕ್ಷನ್ ನಲ್ಲಿ ಪಶ್ಚಿಮಕ್ಕೆ ರಿಂಗ್ ರಸ್ತೆಯ ಮೂಲಕ ಸಾಗಿರಾಯಲ್- ಇನ್ ಜಂಕ್ಷನ್ ಬಳಿ ಉತ್ತರಕ್ಕೆ ತಿರುಗಿ ಮೈಸೂರು-ಕೆ.ಆರ್.ಎಸ್. ರಸ್ತೆಯಲ್ಲಿ ಚಲಿಸಿ ಪಂಪ್ ಹೌಸ್ ಮೂಲಕ ಬೆಂಗಳೂರು ರಸ್ತೆಯನ್ನು ಸೇರುವುದು.

Mysore Road Bandh on tomarrow for Jathra

ಮೈಸೂರಿನಿಂದ ಬೆಂಗಳೂರು ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುವ ಕೆಎಸ್ ಆರ್‌ಟಿಸಿ ಸಂಸ್ಥೆಯ ಬಸ್ಸುಗಳು ಗ್ರಾಮಾಂತರ ಬಸ್ ನಿಲ್ದಾಣದಿಂದ ಮಲೆ ಮಹದೇಶ್ವರ ರಸ್ತೆಯ ಮೂಲಕ ಬನ್ನೂರು ರಸ್ತೆ ಮೂಲಕ ಸಾಗಿ ಬೆಂಗಳೂರು ಸೇರಲಿವೆ.

ಬೆಂಗಳೂರು ಏರ್‌ಶೋ: ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಯೋಜನೆಬೆಂಗಳೂರು ಏರ್‌ಶೋ: ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಯೋಜನೆ

ಶ್ರೀ ಸುಬ್ರಹ್ಮಣ್ಣೆಶ್ವರಸ್ವಾಮಿ ಷಷ್ಠಿ ಜಾತ್ರೆ ಸಂದರ್ಭದಲ್ಲಿಮೈಸೂರು-ಬೆಂಗಳೂರು ರಸ್ತೆಯಲ್ಲಿ ಬೆಂಗಳೂರಿಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಿ ಬದಲಿ ಮಾರ್ಗದಲ್ಲಿಸಂಚರಿಸಲು ಕ್ರಮ ಕೈಗೊಂಡು ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಬಳಿಯಲ್ಲಿನ ಶ್ರೀಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನದಲ್ಲಿ ಷಷ್ಠಿಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಈ ಭಾಗದ ರಸ್ತೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ವಾಹನಸಂಚಾರದ ಮೇಲೆ ನಿರ್ಬಂಧ ವಿಧಿಸಿದೆ.

5 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಟೆಂಡರ್ ಅಂತಿಮ5 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಟೆಂಡರ್ ಅಂತಿಮ

ವಾಹನ ಸಂಚಾರವನ್ನುನಿಯಂತ್ರಿಸಿ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮಕೈಗೊಳ್ಳಲು ಮೈಸೂರು ನಗರ ಪೊಲೀಸ್ ಆಯುಕ್ತಡಾ,ಸುಬ್ರಹ್ಮಣ್ಯೇಶ್ವರರಾವ್ ಸೂಚನೆ ನೀಡಿದ್ದಾರೆ.

ಮೈಸೂರು-ಬೆಂಗಳೂರು ಜೋಡಿ ರಸ್ತೆಯ ಪಶ್ಚಿಮಾರ್ಧ ಭಾಗದ ರಸ್ತೆಯಲ್ಲಿ ಮೈಸೂರಿನಿಂದ ಸಿದ್ದಲಿಂಗಪುರ ಗ್ರಾಮದ ನಂತರ ಬೆಂಗಳೂರು ರಸ್ತೆ ಕಡೆಗೆ ಸಾಗುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

English summary
Subramanya Jatra: Bangalore - Mysore Road Bandh on tomarrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X