Breaking; ಮೈಸೂರು ವಿವಿಯಿಂದ ಪುನೀತ್‌ಗೆ ಗೌರವ ಡಾಕ್ಟರೇಟ್
ಮೈಸೂರು, ಮಾರ್ಚ್ 13: ಕನ್ನಡ ನಟ, ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್‌ಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡುವುದಾಗಿ ಘೋಷಣೆ ಮಾಡಿದೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. "ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದ ಮೈಸೂರು ವಿಶ್ವವಿದ್ಯಾಲಯ ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಿದೆ" ಎಂದರು.

ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿಶ್ವವಿದ್ಯಾಲಯ ನೀಡಿತ್ತು. ಇದೀಗ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್ ಸೇರಿದಂತೆ ಮೂವರಿಗೆ ಮೈಸೂರು ವಿಶ್ವವಿದ್ಯಾಲಯ ಈ ಬಾರಿಯ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ.
ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡಿ, "ಸರಕಾರಕ್ಕೆ 12 ಹೆಸರನ್ನು ಕಳುಹಿಸಿದ್ದೆವು. ಉನ್ನತ ಮಟ್ಟದ ಸಮಿತಿ ಮೂವರ ಹೆಸರನ್ನು ಶಿಫಾರಸು ಮಾಡಿತು. ಸರಕಾರ ಇದಕ್ಕೆ ಒಪ್ಪಿಗೆ ಸೂಚಿಸಿದೆ. ದಿ. ಪುನೀತ್ ಪತ್ನಿ ಅಶ್ವಿನಿ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ" ಎಂದು ತಿಳಿಸಿದರು.
ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಡಾ. ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೂ ಗೌರವ ಡಾಕ್ಟರೇಟ್ ಅನ್ನು ವಿಶ್ವವಿದ್ಯಾಲಯ ನೀಡುತ್ತಿದೆ.
ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವ ಮಾರ್ಚ್ 22ರಂದು ನಡೆಯಲಿದ್ದು, ಈ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ. ಘಟಿಕೋತ್ಸವದಲ್ಲಿ 28581 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಪದವಿ ಪಡೆದವರಲ್ಲಿ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ. 5677 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಹಾಗೂ ವಿವಿಧ ಅಭ್ಯರ್ಥಿಗಳು ಚಿನ್ನದ ಪದಕ ಇತರೆ ಬಹುಮಾನ ಪಡೆದಿದ್ದಾರೆ.
ಮರಣೋತ್ತರವಾಗಿ ಗೌರವ ಡಾಕ್ಟರೇಟ್; ಮೈಸೂರು ವಿಶ್ವವಿದ್ಯಾಲಯ ಮರಣೋತ್ತರವಾಗಿ ಪುನೀತ್ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. 2021ರ ಅಕ್ಟೋಬರ್ 29ರಂದು ನಟ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು.
ನೆಚ್ಚಿನ ನಟ ಅಪ್ಪು ಸಾವು ಅಭಿಮಾನಿಗಳನ್ನು ಶೋಕಃ ಸಾಗರದಲ್ಲಿ ಮುಳುಗಿಸಿತ್ತು. ಇಂದಿಗೂ ಹಲವಾರು ರಸ್ತೆ, ಸರ್ಕಲ್, ಅಂಗಡಿಗಳಿಗೆ ಪುನೀತ್ ರಾಜ್‌ಕುಮಾರ್ ಹೆಸರು ಇಟ್ಟು ನೆಚ್ಚಿನ ನಟನ ನೆನಪು ಸದಾ ಉಳಿಯುವಂತೆ ಅಭಿಮಾನಿಗಳು ನೋಡಿಕೊಳ್ಳುತ್ತಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications