ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಮೈಸೂರು ವಿವಿಯಿಂದ ಪುನೀತ್‌ಗೆ ಗೌರವ ಡಾಕ್ಟರೇಟ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 13: ಕನ್ನಡ ನಟ, ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್‌ಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡುವುದಾಗಿ ಘೋಷಣೆ ಮಾಡಿದೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. "ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದ ಮೈಸೂರು ವಿಶ್ವವಿದ್ಯಾಲಯ ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಿದೆ" ಎಂದರು.

ಬೆಂಗಳೂರಿನ ಈ ರಸ್ತೆ ಇನ್ನು ಪುನೀತ್ ರಾಜ್‍ಕುಮಾರ್ ರಸ್ತೆ ಬೆಂಗಳೂರಿನ ಈ ರಸ್ತೆ ಇನ್ನು ಪುನೀತ್ ರಾಜ್‍ಕುಮಾರ್ ರಸ್ತೆ

Mysore University Announced Honorary Doctorate For Puneeth Rajkumar

ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿಶ್ವವಿದ್ಯಾಲಯ ನೀಡಿತ್ತು. ಇದೀಗ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್ ಸೇರಿದಂತೆ ಮೂವರಿಗೆ ಮೈಸೂರು ವಿಶ್ವವಿದ್ಯಾಲಯ ಈ ಬಾರಿಯ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ.

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಕಂಬಳದ ಕರೆಗಿಳಿದ ಕೋಣಗಳು! ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಕಂಬಳದ ಕರೆಗಿಳಿದ ಕೋಣಗಳು!

ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡಿ, "ಸರಕಾರಕ್ಕೆ 12 ಹೆಸರನ್ನು ಕಳುಹಿಸಿದ್ದೆವು. ಉನ್ನತ ಮಟ್ಟದ ಸಮಿತಿ ಮೂವರ ಹೆಸರನ್ನು ಶಿಫಾರಸು ಮಾಡಿತು. ಸರಕಾರ ಇದಕ್ಕೆ ಒಪ್ಪಿಗೆ ಸೂಚಿಸಿದೆ. ದಿ. ಪುನೀತ್ ಪತ್ನಿ ಅಶ್ವಿನಿ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ" ಎಂದು ತಿಳಿಸಿದರು.

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರುಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರು

ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಡಾ. ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೂ ಗೌರವ ಡಾಕ್ಟರೇಟ್ ಅನ್ನು ವಿಶ್ವವಿದ್ಯಾಲಯ ನೀಡುತ್ತಿದೆ.

ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವ ಮಾರ್ಚ್‌ 22ರಂದು ನಡೆಯಲಿದ್ದು, ಈ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ. ಘಟಿಕೋತ್ಸವದಲ್ಲಿ 28581 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಪದವಿ ಪಡೆದವರಲ್ಲಿ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ. 5677 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಹಾಗೂ ವಿವಿಧ ಅಭ್ಯರ್ಥಿಗಳು ಚಿನ್ನದ ಪದಕ ಇತರೆ ಬಹುಮಾನ ಪಡೆದಿದ್ದಾರೆ.

ಮರಣೋತ್ತರವಾಗಿ ಗೌರವ ಡಾಕ್ಟರೇಟ್; ಮೈಸೂರು ವಿಶ್ವವಿದ್ಯಾಲಯ ಮರಣೋತ್ತರವಾಗಿ ಪುನೀತ್ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. 2021ರ ಅಕ್ಟೋಬರ್ 29ರಂದು ನಟ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು.

ನೆಚ್ಚಿನ ನಟ ಅಪ್ಪು ಸಾವು ಅಭಿಮಾನಿಗಳನ್ನು ಶೋಕಃ ಸಾಗರದಲ್ಲಿ ಮುಳುಗಿಸಿತ್ತು. ಇಂದಿಗೂ ಹಲವಾರು ರಸ್ತೆ, ಸರ್ಕಲ್, ಅಂಗಡಿಗಳಿಗೆ ಪುನೀತ್ ರಾಜ್‌ಕುಮಾರ್ ಹೆಸರು ಇಟ್ಟು ನೆಚ್ಚಿನ ನಟನ ನೆನಪು ಸದಾ ಉಳಿಯುವಂತೆ ಅಭಿಮಾನಿಗಳು ನೋಡಿಕೊಳ್ಳುತ್ತಿದ್ದಾರೆ.

English summary
Prof. G. Hemantha Kumar vice-chancellor of the Mysore university announced honorary doctorate for late Kannada actor Puneeth Rajkumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X