ದಲೈಲಾಮಾ, ಪ್ರಮೋದಾ ದೇವಿಗೆ ಗೌರವ ಡಾಕ್ಟರೇಟ್
ಮೈಸೂರು, ಡಿಸೆಂಬರ್ 07: ಮೈಸೂರು ವಿಶ್ವವಿದ್ಯಾಲಯದಿಂದ ಟಿಬೆಟ್ ಧರ್ಮಗುರು ದಲೈಲಾಮಾ ಹಾಗೂ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಡಿಸೆಂಬರ್ 13ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ವಿಶ್ವ ವಿದ್ಯಾಲಯದ ಕ್ರಾಫರ್ಡ್ ಭವನದಲ್ಲಿ ನಡೆಯಲಿರುವ ಮೈಸೂರು ವಿ.ವಿ.ಯ 97ನೇ ಘಟಿಕೋತ್ಸವದಲ್ಲಿ ಈ ಇಬ್ಬರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ಈ ಸಂದರ್ಭದಲ್ಲಿ ದಲೈಲಾಮಾ ಘಟಿಕೋತ್ಸವ ಭಾಷಣ ಮಾಡುವರು' ಎಂದು ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ತಿಳಿಸಿದ್ದಾರೆ. ಕುಲಪತಿ ರಾಜ್ಯಪಾಲ ವಜುಭಾಯಿ ಆರ್ ವಾಲ ಅವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಿದ್ದಾರೆ












Click it and Unblock the Notifications