ಮೈಸೂರಿನಲ್ಲಿ ಕುಸಿಯುವ ಹಂತಕ್ಕೆ ತಲುಪಿದ 25 ಪಾರಂಪರಿಕ ಕಟ್ಟಡಗಳು
ಮೈಸೂರು, ನವೆಂಬರ್, 04: ಒಂದೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆ, ಮತ್ತೊಂದೆಡೆ ಸೂಕ್ತ ನಿರ್ವಹಣೆ ಇಲ್ಲದೆ ನಗರದ ಪಾರಂಪರಿಕ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿವೆ. ಸದ್ಯ ಮೈಸೂರಿನಲ್ಲಿ 25 ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತದಲ್ಲಿದ್ದು, ಪ್ರವಾಸಿಗರಿಗೆ ಭೀತಿ ಎದುರಾಗಿದೆ.
ಇದು ಪಾರಂಪರಿಕ ತಜ್ಞರು ಜಿಲ್ಲಾಡಳಿತ ಹಾಗೂ ಪುರಾತತ್ವ ಇಲಾಖೆ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡಿರುವ ವರದಿ ಆಗಿದೆ. ಇತ್ತೀಚಿಗೆ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕೊಠಡಿ ಕುಸಿದು ಬಿದ್ದಿತ್ತು. 15 ನಿಮಿಷ ತಡವಾಗಿದ್ದರೆ ಪ್ರಯೋಗಾಲಯಕ್ಕೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ವಿದ್ಯಾರ್ಥಿಗಳು ಬರುವ ಮುಂಚೆಯೇ ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿರಲಿಲ್ಲ. ಇನ್ನು 20 ದಿನದ ಹಿಂದೆ ಅರಮನೆ ತಡೆಗೋಡೆ ಕೂಡ ಕುಸಿದು ಬಿದ್ದಿತ್ತು. ಹೀಗಾಗಿ ಸದ್ಯ ಪಾರಂಪರಿಕ ತಜ್ಞರು ಕೊಟ್ಟಿರುವ ವರದಿಯಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಸದ್ಯ ನಗರದಲ್ಲಿ 234 ಪಾರಂಪರಿಕ ಕಟ್ಟಡಗಳು ಇವೆ. ಇದರಲ್ಲಿ 131 ಕಟ್ಟಡಗಳನ್ನು ಸರ್ಕಾರವೇ ಪಾರಂಪರಿಕ ಕಟ್ಟಡವೆಂದು ಘೋಷಣೆ ಮಾಡಿದೆ. ಇದರಲ್ಲಿ 25 ಕಟ್ಟಡಗಳು ತೀರಾ ದುಸ್ಥಿತಿಗೆ ತಲುಪಿವೆ. ಇವುಗಳು ಯಾವಾಗ ಬೇಕಾದರೂ ಕುಸಿಯಬಹುದು ಎಂದು ತಜ್ಞರು ವರದಿ ನೀಡಿದ್ದಾರೆ. ಆದರೂ ಜಿಲ್ಲಾಡಳಿವಾಗಲಿ ಅಥವಾ ಪಾರಂಪರಿಕ ಇಲಾಖೆಯಾಗಲಿ ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಲ್ಲಿನ ಸ್ಥಳೀಯರು ಆಕ್ರೋಶವನ್ನು ವ್ಯಕ್ಯಪಡಿಸಿದ್ದಾರೆ.

234 ಪಾರಂಪರಿಕ ಕಟ್ಟಡಗಳ ಸರ್ವೆ
''ಮೈಸೂರಿನಲ್ಲಿ ಅಂದಾಜು 600ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳು ಇವೆ. ಇದರಲ್ಲಿ 234 ಕಟ್ಟಡಗಳನ್ನು ನಾವು ಸರ್ವೆ ಮೂಲಕ ಗುರುತಿಸಿದ್ದೇವೆ. ಇದರಲ್ಲಿ 131 ಕಟ್ಟಡಗಳಿಗೆ ಸರ್ಕಾರ ಪಾರಂಪರಿಕ ಕಟ್ಟಡವೆಂದು ಘೋಷಣೆ ಮಾಡಿದೆ. ಸದ್ಯ ಪಾರಂಪರಿಕ ಕಟ್ಟಡಗಳ ಉಳಿವಿಗೆ ಅನುದಾನದ ಅವಶ್ಯಕತೆ ಇದೆ. ಸರ್ಕಾರ ಕಟ್ಟಡಗಳ ಉಳಿವಿಗೆ ಬಜೆಟ್‌ನಲ್ಲಿ 500 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಬೇಕು. ಅಲ್ಲದೆ ತಜ್ಞರಿಂದ ನವೀಕರಣ ಮಾಡಿಸಬೇಕು,''ಎಂದು ಪಾರಂಪರಿಕ ತಜ್ಞ ಪ್ರೊ.ರಂಗರಾಜು ತಿಳಿಸಿದ್ದಾರೆ.

ದುರಸ್ತಿ ಹಂತಕ್ಕೆ ತಲುಪಿರುವ ಕಟ್ಟಡಗಳು
ಕಾಡಾ ಕಟ್ಟಡ, ದೇವರಾಜ ಮಾರುಕಟ್ಟೆ, ಹಳೆ ಕಾವಾ ಕಟ್ಟಡ, ಜಯಲಕ್ಷ್ಮಿ ವಿಲಾಸ ಅರಮನೆ, ನಗರಪಾಲಿಕೆ ಕಟ್ಟಡ, ಅಂಬಾವಿಲಾಸ ಅರಮನೆ, ದೊಡ್ಡ ಗಡಿಯಾರ, ಕೆ.ಆರ್.ಆಸ್ಪತ್ರೆ (ದೊಡ್ಡ ಆಸ್ಪತ್ರೆ), ಜಿಲ್ಲಾಧಿಕಾರಿಗಳ ಕಚೇರಿ, ಸಂಸ್ಕೃತ ಪಾಠಶಾಲೆ, ಸರ್ಕಾರಿ ಅತಿಥಿ ಗೃಹ, ಮಹಾರಾಜ ಕಾಲೇಜು, ಕುಲಪತಿಗಳ ನಿವಾಸ, ಮೈಸೂರು ಮೆಡಿಕಲ್ ಕಾಲೇಜುಗಳ ಕಟ್ಟಡಗಳು ದುರಸ್ತಿ ಹಂತಕ್ಕೆ ತಲುಪಿವೆ.

2012ರಲ್ಲಿ ಲ್ಯಾನ್ಸ್‌ಡೌನ್ ಬಿಲ್ಡಿಂಗ್ ಕುಸಿತ
ಮೈಸೂರಿನಲ್ಲಿ ಕಳೆದ 1 ದಶಕದಲ್ಲಿ ಹತ್ತಾರು ಪಾರಂಪರಿಕ ಕಟ್ಟಡಗಳು ಕುಸಿದು ಬಿದ್ದಿದೆ. 2012ರಲ್ಲಿ ನಗರದ ಹೃದಯಭಾಗದಲ್ಲಿದ್ದ ಲ್ಯಾನ್ಸ್‌ಡೌನ್ ಬಿಲ್ಡಿಂಗ್ ಕುಸಿದು, ಪ್ರಾಣ ಹಾನಿ ಸಂಭವಿಸಿತ್ತು. 2016ರಲ್ಲಿ ದೇವರಾಜ ಮಾರುಕಟ್ಟೆ ಕಟ್ಟಡದ ಒಂದು ಭಾಗ ಕುಸಿತ ಕಂಡಿತ್ತು. 2019ರಲ್ಲಿ ಸರಸ್ವತಿಪುರಂ ಅಗ್ನಿಶಾಮಕ ಠಾಣೆಯ ಕಟ್ಟಡದ ಸ್ವಾಗತ ಕಮಾನು ಕುಸಿದಿದ್ದು, ಇಂದಿಗೂ ಇದರ ದುರಸ್ತಿ ಕಾರ್ಯ ಇನ್ನು ಆಗಿಲ್ಲ. 2021ರಲ್ಲಿ ಮಾನಸಗಂಗೋತ್ರಿಯ ಜಯಲಕ್ಷ್ಮಿ ವಿಲಾಸ ಅರಮನೆ ಚಾವಣಿ ಕುಸಿತದಿತ್ತು. 2022 ಅಗ್ರಹಾರದ ವಾಣಿವಿಲಾಸ ಮಾರುಕಟ್ಟೆ ಕಟ್ಟಡದ ಚಾವಣಿ ಕುಸಿದು ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. 2022ರಲ್ಲಿ ಅರಮನೆ ತಡೆಗೋಡೆ ಹಾಗೂ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕಟ್ಟಡ ಕುಸಿದಿದ್ದು, ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರು.

ಆತಂಕಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿಗಳು
ಭಾರಿ ಮಳೆ ಸುರಿದ ಪರಿಣಾಮ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ ಎಂದು ತಿಳಿದುಬಂದಿತ್ತು. ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ 10:30ರ ವೇಳೆಗೆ ಕಾಲೇಜಿಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದರು. ಅಲ್ಲದೆ ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚನೆಯನ್ನು ನೀಡಿದ್ದರು.
ನಂತರ ಎಲ್ಲರೂ ಕಟ್ಟಡದ ಮೊದಲ ಮಹಡಿಯ ಮೆಟ್ಟಿಲುಗಳನ್ನು ಹತ್ತುತ್ತಿದ್ದಂತೆಯೇ ಪ್ರಯೋಗಾಲಯದ ಭಾಗವು ಕೂಡ ಕುಸಿದಿತ್ತು. ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರು ಭಾರಿ ಅನಾಹುತ ತಪ್ಪಿಸಿಕೊಂಡಿದ್ದರು. ಘಟನೆ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿತ್ತು. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರು. ಈ ನಡುವೆ ಕಾಲೇಜಿನ ಇತರೆ ಕಟ್ಟಡಗಳು ಕೂಡ ಇದೇ ಪರಿಸ್ಥಿತಿ ತಲುಪಿದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications