Mysuru Airport: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪ: ಎಚ್.ಸಿ.ಮಹದೇವಪ್ಪ ಏನೇಳಿದ್ರು?-ಇಲ್ಲಿದೆ ಮಾಹಿತಿ
ಮೈಸೂರು, ಡಿಸೆಂಬರ್, 19: ರಾಜ್ಯದಲ್ಲಿ ಈಗಾಗಲೇ ವಿಮಾನ ನಿಲ್ದಾಣಗಳ ಮರುಣಾಮಕರಣ ವಿಚಾರದ ಸದ್ದು ಜೋರಾಗಿಯೇ ಇದೆ. ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ಯುದ್ಧಗಳು ಕೂಡ ನಡೆಯುತ್ತಿವೆ. ಇನ್ನು ಕೆಲವು ವಿಮಾನ ನಿಲ್ದಾಣಗಳ ಮರುನಾಮಕರಣಕ್ಕೆ ನಿರ್ಣಯಿಸಿದ್ದು, ಪ್ರಸ್ತಾವನೆಯನ್ನು ಕೇಂದ್ರಕ್ಕೂ ಕಳುಹಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಪ್ರಸ್ತಾಪಕ್ಕೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಹಾಗೆಯೇ ಈ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಏನು ಹೇಳಿದ್ದಾರೆ ಎಂದು ತಿಳಿಯಿರಿ.
ಸಾಂಸ್ಕೃತಿಕ ನಗರಿ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಚಳಿಗಾಲದ ಅಧಿವೇಶನದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದರು. ಆದರೆ ಇದಕ್ಕೆ ಬಿಜೆಪಿ ನಾಯಕರು ವಿರೋಧಿಸಿದ್ದು, ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಸಚಿವ ಹೆಚ್.ಸಿ.ಮಹದೇವಪ್ಪ ಅವರು, ಟಿಪ್ಪು ಸುಲ್ತಾನ್ ಮೈಸೂರಿನವನು. ಅವರ ಹೆಸರು ಇಡುವುದರಲ್ಲಿ ತಪ್ಪೇನಿದೆ? ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ವ? ಮಲಬಾರ್‌ನಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮಾಡಲಿಲ್ಲವಾ? ಭೂ ಸುಧಾರಣಾ ಕಾಯ್ದೆ ಜಾರಿಗೆ ತರಲಿಲ್ವ? ದೇಶಕ್ಕೆ ರೇಷ್ಮೆ ಪರಿಚಯಿಸಿದ್ದು ಯಾರು? ಎಂದು ಪ್ರಶ್ನಿಸುವ ಮೂಲಕ ಸಮರ್ಥನೆ ಮಾಡಿಕೊಂಡರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದು ಅಥವಾ ಬಿಡುವುದು ಬೇರೆ ವಿಚಾರ. ಟಿಪ್ಪು ಸುಲ್ತಾನ್ ಹೆಸರು ಹೇಳಿದ ಕೂಡಲೇ ಯಾಕೆ ವಿರೋಧ ಮಾಡುತ್ತಾರೆ? ಸಂವಿಧಾನದ ಪ್ರಕಾರ ಎಲ್ಲ ಧರ್ಮಗಳೂ ಸಮ. ವಿಮಾನ ನಿಲ್ದಾಣಕ್ಕೆ ಹೆಸರಿಡಲು ನಮ್ಮ ಸರ್ಕಾರವೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಶಿಫಾರಸು ಮಾಡಲಾಗಿದೆ. ನಾಲ್ವಡಿ ಹೆಸರು ಇಡುವುದಕ್ಕೆ ನನ್ನ ತಕರಾರಿಲ್ಲ. ಚರ್ಚೆಯನ್ನೇ ಮಾಡಬಾರದು ಎಂದರೆ ಹೇಗೆ? ಎಂದು ಪ್ರಶ್ನೆಗಳನ್ನು ಕೇಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕನ್ನಡಮಯವಾದ KIA ವಿಮಾನ ನಿಲ್ದಾಣದ ಲಾಂಛನ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನದಲ್ಲಿ ಮೊದಲು ಇಂಗ್ಲೀಷ್ ಪದಗಳನ್ನು ಬಳಕೆ ಮಾಡಲಾಗಿತ್ತು. ನಂತರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಈ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಕೆ ಮಾಡಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯವಾದ ವಿಚಾರವಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನದಲ್ಲಿ ಅಕ್ಷರಗಳು ಸಂಪೂರ್ಣ ಇಂಗ್ಲೀಷ್ ಭಾಷೆಯಲ್ಲಿದ್ದವು. ಈ ಬಗ್ಗೆ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು, ನಿಲ್ದಾಣದ ಲಾಂಛನ ಆಂಗ್ಲ ಭಾಷೆಯಲ್ಲಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ದೂರಿದ್ದರು.
ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳು ಇಲ್ಲಿನ ಭಾಷೆ-ಸಂಸ್ಕೃತಿಯನ್ನು ಗೌರವಿಸುವುದು ಪ್ರಾಥಮಿಕ ಜವಾಬ್ದಾರಿಯಾಗಿದೆ. ಕೂಡಲೇ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಅಳವಡಿಕೆ ಮಾಡಿಕೊಳ್ಳಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದರು. ಕಾರ್ಯದರ್ಶಿ ಪತ್ರಕ್ಕೆ ತಲುಪುತ್ತಿದ್ದಂತೆ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ತಮ್ಮ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡಿದ್ದಾರೆ.
ಈ ಬಗ್ಗೆ ಪ್ರಾಧಿಕಾರಕ್ಕೆ ಪತ್ರವನ್ನು ಬರೆದಿರುವ ವಿಮಾನ ನಿಲ್ದಾಣದ ಅಧಿಕಾರಿ ದಿನೇಶ್ ಕುಮಾರ್, ಕನ್ನಡ ಭಾಷೆ ಬೆಳವಣಿಗೆ, ಇಲ್ಲಿನ ಸಂಸ್ಕೃತಿ ಉಳಿವಿಗೆ ನಾವು ಇಲಾಖೆ ಜೊತೆ ಕೆಲಸ ಮಾಡಲಿದ್ದೇವೆ. ಮುಂದಿನ ನಮ್ಮ ಯಾವುದೇ ಕಾರ್ಯಕ್ರಮ ಹಾಗೂ ಪತ್ರ ವ್ಯವಹಾರದಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಬಳಕೆ ಮಾಡಲಾಗುವುದು. ಅಲ್ಲದೆ, ನಿಲ್ದಾಣದಲ್ಲಿ ಪ್ರತಿಯೊಂದು ಸೂಚನಾ ಫಲಕಗಳನ್ನು ಕನ್ನಡದಲ್ಲಿ ಬಳಸಲಾಗುವುದು, ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡವನ್ನು ಬಳಕೆ ಮಾಡುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಆಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳಿಗೆ ನೆಲ, ಜಲ, ವಿದ್ಯುತ್ ಸೌಲಭ್ಯಗಳನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಸ್ಥಳೀಯ ಭಾಷೆಯ ಬೆಳವಣಿಗೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ವಿಮಾನ ನಿಲ್ದಾಣದಲ್ಲಿ ಕನ್ನಡ ಬಳಕೆ ಮಾಡಿದ ನಿಲ್ದಾಣದ ಅಧಿಕಾರಿಗಳ ನಡೆ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications