ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ...

ಮೈಸೂರು, ಮಾರ್ಚ್ 01 : ಇಂದಿನಿಂದ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ತಯಾರಾಗಿದ್ದರೆ, ಇತ್ತ ಮೈಸೂರಿನಲ್ಲಿ ಪರೀಕ್ಷೆ ಎದುರಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಸಹ ಸಕಲ ಸಿದ್ದತೆ ಮಾಡಿಕೊಂಡಿದೆ.

ಮಾರ್ಚ್ 1ರಿಂದ 17ರವರೆಗೆ ಪಿಯು ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಮೇಲೆ ಸಿಸಿ ಟಿವಿ ಕಣ್ಗಾವಲು ಇರಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ .ಹೆಚ್.ಡಿ.ಕೋಟೆಯಲ್ಲಿ 3, ಪಿರಿಯಾಪಟ್ಟಣದಲ್ಲಿ 5, ಕೆ.ಆರ್.ನಗರದಲ್ಲಿ 3, ನಂಜನಗೂಡಿನಲ್ಲಿ 4, ಟಿ.ನರಸೀಪುರದಲ್ಲಿ 6, ಹುಣಸೂರಿನಲ್ಲಿ 4 ಕೇಂದ್ರಗಳು, ಮೈಸೂರು ನಗರದಲ್ಲಿ 26 ಸೇರಿದಂತೆ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ದಯಾನಂದ್ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 37, 205 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 18, 292 ವಿದ್ಯಾರ್ಥಿಗಳು 18, 913 ವಿದ್ಯಾರ್ಥಿನೀಯರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು, ಪ್ರತಿ ಕೇಂದ್ರಕ್ಕೂ ಆರೋಗ್ಯ ಸಹಾಯಕಿಯರ ನಿಯೋಜನೆ ಮಾಡಲಾಗಿದೆ.

Mysuru: All the best to 2nd PUC students

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವರೆಗೂ ನಿಷೇಧಿತ ಪ್ರದೇಶ ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ವಿಚಕ್ಷಣಾ ದಳ, ತಾಲ್ಲೂಕುಗಳಲ್ಲಿ ಜಾಗೃತದಳ ರಚನೆ ಮಾಡಲಾಗಿದೆ. ಇನ್ನು ಪರೀಕ್ಷಾ ಕೇಂದ್ರಗಳ ಸುತ್ತ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ ಎಂದು ದಯಾನಂದ್ ತಿಳಿಸಿದರು.

ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಬರವಣಿಗೆಗೆ ಹಾಗೂ ಪರೀಕ್ಷಾ ಸೌಲಭ್ಯ, ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಸಿದ್ದತೆ ಬಗ್ಗೆ ವಿವರಿಸಿದರು. ಒಟ್ಟಾರೆ ಪರೀಕ್ಷೆಗೆ ಯಾವುದೇ ಅಡೆತಡೆಗಳಿಲ್ಲದೇ ನಡೆಯಲಿ ಎಂಬುದೇ ನಮ್ಮ ಆಶಯ. ಗುಡ್ ಲಕ್ ವಿದ್ಯಾರ್ಥಿಗಳೇ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+