ಮೈಸೂರು : ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು, ಫೆ. 19: ಸರ್ಕಾರದ ವಿವಿಧ ಯೋಜನೆಗಳಡಿ ಹಲವು ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Tool Room machinist : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್ಎಸ್ಎಲ್‌ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಗ್ರಾಮೀಣ ಅಭ್ಯರ್ಥಿಗಳಿಗೆ ಒಂದು ವರ್ಷದ Tool Room machinist ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ ಹಾಗೂ ಸ್ಟೈಫಂಡ್ ನೀಡಲಾಗುವುದು.

ತರಬೇತಿ ಮುಗಿದ ನಂತರ ಉದ್ಯೋಗ ಒದಗಿಸಲು ಸಹಾಯ ಮಾಡಲಾಗುವುದು. ಆಸಕ್ತರು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 93 ಮತ್ತು 94, ಕೆಆರ್‌ಎಸ್ ರಸ್ತೆ, ಬೆಳಗೋಳ ಕೈಗಾರಿಕಾ ಪ್ರದೇಶ, ಮೈಸೂರು, ಮೊ. 97386 06772 ಅಥವಾ 98451 34720 ಅಥವಾ 90353 76071 ಸಂಪರ್ಕಿಸಬಹುದು.

mysore

ಶಿಶಿಕ್ಷು : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಶಿಶಿಕ್ಷು ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 93 ಮತ್ತು 94, ಕೆಆರ್‌ಎಸ್ ರಸ್ತೆ, ಬೆಳಗೋಳ ಕೈಗಾರಿಕಾ ಪ್ರದೇಶ, ಮೈಸೂರು ಇಲ್ಲಿ ಪಡೆದು ಭರ್ತಿ ಮಾಡಿ ಫೆ. 25ರೊಳಗೆ ಸಲ್ಲಿಸಬೇಕು.

ಯಂತ್ರಗಾರ ಫಿಟ್ಟರ್ : ಮೈಸೂರಿನ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆ ವತಿಯಿಂದ ಮೂರು ವರ್ಷಗಳ ಕಾಲಾವಧಿಯ ಯಂತ್ರಗಾರ ಫಿಟ್ಟರ್ ಹಾಗೂ ಇತರೆ ವೃತ್ತಿ ಹಾಗೂ ಮರದ ಕೆಲಸ ವೃತ್ತಿಯ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 7ನೇ ತರಗತಿ ವಿದ್ಯಾರ್ಹತೆ ಹೊಂದಿರುವ 16 ರಿಂದ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿ ನಮೂನೆಯನ್ನು ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆ, ಸಯ್ಯಾಜಿರಾವ್ ರಸ್ತೆ ಇವರಿಂದ ಪಡೆದು ಭರ್ತಿ ಮಾಡಿ, ಫೆ. 28ರೊಳಗೆ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+