ವಿದ್ಯುತ್ ತಂತಿ ತುಂಡು: ತಡವಾಗಿ ಸಂಚರಿಸಿದ ರೈಲುಗಳು
ಮೈಸೂರು, ಮೇ 14:ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಹಾಗೂ ಮದ್ದೂರು ತಾಲೂಕಿನ ನಿಡಘಟ್ಟ ನಡುವಿನ ರೈಲು ಮಾರ್ಗದಲ್ಲಿ ಮೇ.13ರಂದು ಸಂಜೆ ವಿದ್ಯುತ್ ತಂತಿ ತುಂಡಾದ ಪರಿಣಾಮ ರಾತ್ರಿ ವೇಳೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ವ್ಯತ್ಯಯವಾಯಿತು.
ರಾತ್ರಿ 7.30ರ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಈ ಸಂದರ್ಭ ರೈಲು ಮಾರ್ಗದ ವಿದ್ಯುತ್ ತಂತಿಯು ತುಂಡಾಗಿ ಹಳಿಗಳ ಮೇಲೆ ಬಿತ್ತು. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಗಳೂರು- ಮೈಸೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದರು.
ಘಟನೆಯಿಂದಾಗಿ ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ಎಲ್ಲಾ ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡಿದರು. ಚಾಮುಂಡಿ ಎಕ್ಸ್‌ಪ್ರೆಸ್, ವಿಶ್ವಮಾನವ, ಹಂಪಿ ಸೇರಿದಂತೆ ವಿವಿಧ ರೈಲುಗಳು ಚನ್ನಪಟ್ಟಣ, ಮದ್ದೂರು ಹಾಗೂ ಮಂಡ್ಯ ನಿಲ್ದಾಣಗಳಲ್ಲಿ ನಿಂತಿದ್ದವು.

ಮಳೆಯ ಪರಿಣಾಮ ತಡ ರಾತ್ರಿಯವರೆಗೂ ಸಹ ಅನೇಕ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಸಹ ಉಂಟಾಯಿತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.












Click it and Unblock the Notifications