ಮೈಸೂರು ಮೂಲದ ಟೆಕ್ಕಿ ಅಮೆರಿಕದಲ್ಲಿ ಸಾವು
ಮೈಸೂರು, ಮಾರ್ಚ್ 04; ಅಮೆರಿಕದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ಮೂಲದ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ. ಶುಕ್ರವಾರ ಮೃತದೇಹವನ್ನು ಮೈಸೂರಿಗೆ ತರಲಾಗುತ್ತದೆ.
ಮೈಸೂರು ನಗರದ ನಿವಾಸಿಯಾದ ನಿವೃತ್ತ ಇಂಜಿನಿಯರ್ ತುಕಾರಾಮ್ ಎಂಬುವರ ಪುತ್ರ ಪ್ರತೀಕ್ ತೇಲ್ಕರ್ (28) ಮೃತಪಟ್ಟವರು. ಅಮೆರಿಕದ ಅಯೋವಾದಲ್ಲಿ ಫೆಬ್ರವರಿ 26ರಂದು ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ಪ್ರತೀಕ್ ಉನ್ನತ ಶಿಕ್ಷಣ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ವಿದ್ಯಾಭ್ಯಾಸ ಮುಗಿದ ಬಳಿಕ ಅಲ್ಲಿಯೇ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ 5ರಂದು ಪ್ರತೀಕ್ ತೇಲ್ಕರ್ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗುತ್ತದೆ ಎಂದು ಕುಟುಂಬದವರು ಹೇಳಿದ್ದಾರೆ.

ಮಾರ್ಚ್ನಲ್ಲಿ ಭಾರತಕ್ಕೆ ವಾಪಸ್ ಆಗಿ ಇಲ್ಲಿಯೇ ಉದ್ಯೋಗ ಹುಡುಕುವುದಾಗಿ ಪ್ರತೀಕ್ ಹೇಳಿದ್ದರು. ಕುಟುಂಬದವರು ಅವರ ಮದುವೆಗಾಗಿ ಚಿಂತನೆಯನ್ನು ಸಹ ನಡೆಸಿದ್ದರು. ಆದರೆ, ಪ್ರತೀಕ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.
ಪ್ರತೀಕ್ ತೇಲ್ಕರ್ ತಂದೆ ಎನ್. ಬಿ. ತುಕಾರಾಮ್ ಕಾಡಾ ಕಚೇರಿಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಣೆ ಮಾಡಿ ನಿವೃತ್ತರಾಗಿದ್ದಾರೆ. ಎನ್. ಬಿ. ತುಕಾರಾಮ್ ಪತ್ನಿ ಎನ್. ಶಾಲಿನಿ ಜೊತೆ ಶಾರದದೇವಿ ನಗರದಲ್ಲಿ ವಾಸಿಸುತ್ತಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications