Bengaluru-mysuru expressway: ಹೆದ್ದಾರಿಯ ಉದ್ಘಾಟನೆ ದಿನಾಂಕ ನಿಗದಿ, ಪ್ರಧಾನಿ ಮೋದಿಯಿಂದ ಉದ್ಘಾಟನೆ

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಉದ್ಘಾಟನೆ ದಿನಾಂಕ ನಿಗದಿಯಾಗಿದೆ. ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ ಮಾರ್ಚ್‌ 11ರಂದು ಉದ್ಘಾಟನೆ ಆಗಲಿದೆ ಎಂದು ಸಂಸದ ಪ್ರತಾಪ್‌

ಮೈಸೂರು, ಫೆಬ್ರವರಿ, 26: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಉದ್ಘಾಟನೆ ದಿನಾಂಕ ನಿಗದಿಯಾಗಿದೆ. ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ ಮಾರ್ಚ್‌ 11ರಂದು ಉದ್ಘಾಟನೆ ಆಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ನಗರದ ಜಲದರ್ಶಿನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ಹೆದ್ದಾರಿಗೂ ಭೂಮಿಪೂಜೆ ಆಗಲಿದೆ. ಮಂಡ್ಯ ಜಿಲ್ಲೆಯವರು ನಮ್ಮ ಜನಪ್ರತಿನಿಧಿಗಳನ್ನು ಗೆಲ್ಲಿಸಿಲ್ಲ. ಆದರೂ ನಾವೇನೂ ತಾರತಮ್ಯ ಮಾಡಿಲ್ಲ. ಮಂಡ್ಯಕ್ಕೂ ಪೂರಕವಾದ ಅಭಿವೃದ್ಧಿ ಮಾಡುತ್ತಿದ್ದೇವೆ. ಹಾಗಾಗಿ ಮಂಡ್ಯ ಜನರ ಗಮನ ಸೆಳೆಯಲು ಸಕ್ಕರೆ ನಗರಿಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಕಾವೇರಿ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಹೆಸರಿಸಲು ಎಲ್ಲರ ಸಹಕಾರ ಕೇಳುತ್ತೇನೆ, ಎಂದರು.

Mysuru-Bengaluru Expressway inauguration date fixed

ಪ್ರಧಾನಿ ಮೋದಿ ನನ್ನ ದೇವರು

ನಾನು 2029ರವರೆಗೆ ಮಾತ್ರ ರಾಜಕೀಯದಲ್ಲಿ ಇರುವ ಯೋಚನೆ ಮಾಡುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಕೈ ಕೆಳಗೆ ಕೆಲಸ ಮಾಡಲು ನನಗೆ ಇಷ್ಟ. ಮೋದಿಯವರು ನನ್ನ ಪಾಲಿನ ದೇವರು. 15 ವರ್ಷದಲ್ಲಿ ಒಬ್ಬ ಸಂಸದನಾಗಿ ಎಷ್ಟು ಕೆಲಸ ಮಾಡಬಹುದು ಅದನ್ನು ಮಾಡುತ್ತೇನೆ. ನಾನು ದೀರ್ಘಕಾಲದ ರಾಜಕೀಯದ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ರಾಜಕಾರಣದಲ್ಲಿ ಇರಬೇಕಾ? ಬೇಡವಾ? ಎಂದು ಯೋಚನೆ ಮಾಡುತ್ತೇನೆ ಎಂದರು.

ಬಿಎಸ್‌ವೈ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ

ಬಿ.ಎಸ್‌. ಯಡಿಯೂರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಕ್ರಿಯ ರಾಜಕಾರಣದಲ್ಲಿ ಯಡಿಯೂರಪ್ಪನವರು ಇರುತ್ತಾರೆ. ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲಾ ಮುಗಿಸುವವರೆಗೂ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ಅವರು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದು ಹೇಳಿದರು.

Mysuru-Bengaluru Expressway inauguration date fixed

ಬಿಜೆಪಿ ಕಾರ್ಯಕರ್ತರು ಮೈಮರೆತರೆ ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲಿಬಾನ್ ಸರ್ಕಾರ ಬರುತ್ತದೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದರೆ ಕಪಾಲಿಬೆಟ್ಟ ತೆಗೆದು ಏಸುಬೆಟ್ಟ ಮಾಡುತ್ತಾರೆ ಎಂದು ಕುಟುಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+