ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು-ಚಾಮರಾಜನಗರ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

|
Google Oneindia Kannada News

ಮೈಸೂರು, ಫೆಬ್ರವರಿ 17; ಬಹುನಿರೀಕ್ಷಿತ ಮೈಸೂರು-ಚಾಮರಾಜನಗರ ನಡುವಿನ ರೈಲು ಮಾರ್ಗದ ವಿದ್ಯುದೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. 71 ಕಿ. ಮೀ. ಕಾಮಗಾರಿ ಪೂರ್ಣಗೊಂಡರೆ ಮೆಮು ರೈಲುಗಳ ಸಂಚಾರ ಆರಂಭಿಸಲು ಸಹಾಯಕವಾಗಲಿದೆ.

ಮೈಸೂರು-ಚಾಮರಾಜನಗರ ನಡುವಿನ ರೈಲು ಮಾರ್ಗದ ವಿದ್ಯುದೀಕರಣಕ್ಕೆ ಟೆಂಟರ್ ಅಂತಿಮಗೊಂಡಿದೆ. ಈ ಯೋಜನೆಗೆ ಸುಮಾರು 18.89 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಫೆಬ್ರವರಿ 11ರಿಂದ ಮೈಸೂರು-ದಾದರ್ ರೈಲು; ವೇಳಾಪಟ್ಟಿ ಫೆಬ್ರವರಿ 11ರಿಂದ ಮೈಸೂರು-ದಾದರ್ ರೈಲು; ವೇಳಾಪಟ್ಟಿ

ರೈಲ್ವೇ ವಿದ್ಯುದೀಕರಣ ವಿಭಾಗದ ಕಾಮಗಾರಿ ಮುಖ್ಯಸ್ಥ ಆರ್. ಎ. ಚೌಧರಿ ಈ ಕುರಿತು ಹೇಳಿಕೆ ನೀಡಿದ್ದಾರೆ. "ಫೆಬ್ರವರಿ 1ರಂದು ಮಂಡನೆ ಮಾಡಿದ ಬಜೆಟ್‌ನಲ್ಲಿ ಯೋಜನೆಗೆ ಅನುದಾನ ಮಂಜೂರಾಗಿದೆ. 12 ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ" ಎಂದು ಹೇಳಿದ್ದಾರೆ.

ತಾಳಗುಪ್ಪ ರೈಲು ನಿಲ್ದಾಣದಲ್ಲಿ ಪಾರ್ಸೆಲ್ ಸೇವಾ ಕೇಂದ್ರ ತಾಳಗುಪ್ಪ ರೈಲು ನಿಲ್ದಾಣದಲ್ಲಿ ಪಾರ್ಸೆಲ್ ಸೇವಾ ಕೇಂದ್ರ

Mysuru Chamarajanagara Railway Line Electrification Soon

ಮೈಸೂರು-ಚಾಮರಾಜನಗರ ನಡುವಿನ ರೈಲು ಮಾರ್ಗ ವಿದ್ಯುದೀಕರಣವಾದರೆ ರೈಲುಗಳ ವೇಗವನ್ನು ಹೆಚ್ಚಿಸಬಹುದು ಮತ್ತು ಮೆಮು ರೈಲು ಸಂಚಾರವನ್ನು ಆರಂಭಿಸಬಹುದು. ಇದರಿಂದಾಗಿ ಉಭಯ ನಗರಗಳ ನಡುವೆ ಪ್ರತಿದಿನ ಸಂಚಾರ ನಡೆಸುವವರಿಗೆ ಅನುಕೂಲವಾಗಲಿದೆ.

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: ಎಲ್ಲ ಪ್ರಯಾಣಿಕ ರೈಲು ಸೇವೆ ಆರಂಭರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: ಎಲ್ಲ ಪ್ರಯಾಣಿಕ ರೈಲು ಸೇವೆ ಆರಂಭ

ಈ ಮಾರ್ಗದ ವಿದ್ಯುದೀಕರಣದಿಂದಾಗಿ ಕಡಕೊಳ ಬಳಿ ಸ್ಥಾಪನೆಯಾಗುತ್ತಿರುವ ಇನ್ಲ್ಯಾಂಡ್ ಕಂಟೇನರ್ ಟರ್ಮಿನಲ್ ಮತ್ತು ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್‌ಗೂ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

English summary
Electrification work of railway line between Mysuru and Chamarajanagara set to start in the cost of 18.89 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X