ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೈಸೂರು–ಚಾಮರಾಜನಗರದಲ್ಲಿ ಮಿಶ್ರ ಫಲಿತಾಂಶ

|
Google Oneindia Kannada News

ಮೈಸೂರು, ಮೇ 31 : ರಾಜ್ಯದ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಮೈಸೂರು- ಚಾಮರಾಜನಗರದಲ್ಲಿ ಮಿಶ್ರ ಫಲಿತಾಂಶ ವ್ಯಕ್ತವಾಗಿದೆ. ಇತ್ತ ಸಂಪೂರ್ಣವಾಗಿ ಮೈಸೂರು ಜಿಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ 2 ಪುರಸಭೆ 1 ನಗರಸಭೆಗೆ ಚುನಾವಣೆ ನಡೆದಿತ್ತು. ಅದರಲ್ಲಿ ನಂಜನಗೂಡು ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಬನ್ನೂರು ಪುರಸಭೆ ಜೆಡಿಎಸ್ ಪಾಲಾಗಿದೆ.

ನಂಜನಗೂಡು ನಗರಸಭೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಬಿಜೆಪಿಗೆ 1 ಸ್ಥಾನದ ಅವಶ್ಯಕತೆ ಇದೆ. ಕೇವಲ ಒಂದು ಸ್ಥಾನದ ಕೊರತೆಯಿಂದ ಬಹುಮತ ಪಡೆಯುವಲ್ಲಿ ವಿಫಲವಾದ ಬಿಜೆಪಿ ಪಕ್ಷೇತರ ಸದಸ್ಯರ ನೆರವಿನಿಂದ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಬನ್ನೂರು ಪುರಸಭೆ ಫಲಿತಾಂಶವೂ ಪ್ರಕಟಗೊಂಡಿದ್ದು, ಜೆಡಿಎಸ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. 23 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಳೆದ ಬಾರಿ ಖಾತೆಯನ್ನೇ ತೆರೆಯದ ಜೆಡಿಎಸ್ ಈ ಬಾರಿ ಅಧಿಕಾರ ಹಿಡಿದಿದೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ ಮೇಲುಗೈ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ ಮೇಲುಗೈ

ಕಾಂಗ್ರೆಸ್ ಮತ್ತು ಜನತಾ ಪರಿವಾರದ ಭದ್ರಕೋಟೆಯಾಗಿದ್ದ ನಂಜನಗೂಡು ಇದೀಗ ಸಂಪೂರ್ಣ ಕೇಸರಿಮಯವಾಗಿದೆ. ಮೈಸೂರಿನ ನಂಜನಗೂಡು ನಗರಸಭೆಯ ಒಟ್ಟು 31 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಕಾಂಗ್ರೆಸ್ - 10, ಬಿಜೆಪಿ - 15, ಜೆಡಿಎಸ್ -3, ಪಕ್ಷೇತರರು -3 ಜಯಭೇರಿ ಬಾರಿಸಿದ್ದಾರೆ.

Mysuru chamrajnagara local body election results announced

ಕೆ.ಆರ್ ನಗರ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. 23 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 14, ಜೆಡಿಎಸ್ 8 ಮತ್ತು ಬಿಜೆಪಿ 1 ಸ್ಥಾನ ಗೆಲುವು ಸಾಧಿಸಿದೆ. ಈ ಮೂಲಕ ಸಮ್ಮಿಶ್ರ ಸರ್ಕಾರದ ಸಚಿವರಾಗಿರುವ ಸಾ.ರಾ ಮಹೇಶ್ ಅವರಿಗೆ ಮುಖಭಂಗವಾದಂತಾಗಿದೆ.

63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ 63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ

ಇನ್ನು ಮತ್ತೊಂದೆಡೆ ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಗುಂಡ್ಲುಪೇಟೆ ಪುರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಗುಂಡ್ಲುಪೇಟೆ ಪುರಸಭೆಯ 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇದರಲ್ಲಿ ಬಿಜೆಪಿಗೆ 13, ಕಾಂಗ್ರೆಸ್ ಗೆ 8, ಎಸ್.ಡಿ.ಪಿ.ಐ- 1, ಪಕ್ಷೇತರ 1 ಸ್ಥಾನ ಗಳಿಸಿದೆ. ಈ ಮೂಲಕ ಬಿಜೆಪಿ ಜಯಗಳಿಸಿದೆ.

ಚಿಕ್ಕಮಗಳೂರು; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಚಿಕ್ಕಮಗಳೂರು; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ

ಹನೂರು ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಜೆಡಿಎಸ್ 6, ಕಾಂಗ್ರೆಸ್ 4, ಬಿಜೆಪಿ 3 ಸ್ಥಾನ ಪಡೆದಿವೆ. ಯಳಂದೂರು ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಕಾಂಗ್ರೆಸ್ 10, ಬಿಜೆಪಿ 1 ಸ್ಥಾನದಲ್ಲಿ ಜಯಭೇರಿ ಬಾರಿಸಿದೆ.

English summary
Mysuru –chamarajnagara local body election results announced. At Nanjangudu – BJP, Bannuru- JDS, K R Nagara – Congress won the election. Minister Sa Ra mahesh lost in local body election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X