ಉದ್ಘಾಟಕರಿಗೆ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜನೆ!
ಮೈಸೂರು, ಜೂನ್ 1 : ವಿಶ್ವ ಪರಿಸರ ದಿನಾಚರಣೆಗೂ ಮುನ್ನ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಿದ್ದ ಮೈಸೂರು ಮಹಾನಗರ ಪಾಲಿಕೆ ಉದ್ಘಾಟಕರಿಗೇ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜಿಸಿ ಯಡವಟ್ಟು ಮಾಡಿಕೊಂಡಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಯದುವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗಮಿಸಬೇಕಿತ್ತು.

ಆದರೆ ಇಂದು ಬೆಳಗ್ಗೆ 8 ಗಂಟೆಯಾದ್ರು ಪ್ರಮೋದಾದೇವಿ ಅವರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ. ಜತೆಗೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಈ ಕಾರ್ಯಕ್ರಮದ ಬಗ್ಗೆ ಮಹಾನಗರ ಪಾಲಿಕೆ ಮಾಹಿತಿ ನೀಡಿರಲಿಲ್ಲ.

ಮಾಹಿತಿ ಕೊರತೆಯಿಂದ ಮೈಸೂರು ಪಾಲಿಕೆ ಅಧಿಕಾರಿಗಳು ಈ ರೀತಿ ಎಡವಟ್ಟು ಮಾಡಿಕೊಂಡಿದ್ದು, ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರನ್ನು ಕರೆತಂದು ಕಾಟಚಾರಕ್ಕೆ ಕಸ ಗುಡಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿಸಿದ್ದಾರೆ.












Click it and Unblock the Notifications