• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ನಗರಸಭಾ ಸದಸ್ಯ ಮಾದೇಶ್ ಗೆ ಜೀವಾವಧಿ ಶಿಕ್ಷೆ

By ಮೈಸೂರು ಪ್ರತಿನಿಧಿ
|

ಮೈಸೂರು,ಫೆಬ್ರವರಿ,26: ಎಂಟು ವರ್ಷಗಳ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣ ಕೊನೆಗೂ ಸಾಬೀತಾಗಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ನಗರಸಭಾ ಸದಸ್ಯ ಅವ್ವಾ ಮಾದೇಶ ಮತ್ತು ಸಹೋದರ ಮಂಜುನಾಥ್ ಸೇರಿದಂತೆ 10 ಮಂದಿ ಜೈಲು ಪಾಲಾಗಿದ್ದಾರೆ.

ಮೈಸೂರು ನಗರಸಭಾ ಸದಸ್ಯ ಅವ್ವಾ ಮಾದೇಶ ಮತ್ತು ಸಹೋದರ ಮಂಜುನಾಥ್ ಸೇರಿದಂತೆ 10 ಮಂದಿ 2008ರಲ್ಲಿ ಹುಣಸೂರಿನ ತೋಟದ ಮನೆಯಲ್ಲಿ ಜೋಡಿ ಕೊಲೆ ಮಾಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.[ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ]

ಹುಣಸೂರಿನಲ್ಲಿ 2008ರಲ್ಲಿ ಜೋಡಿ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಮೈಸೂರು ನಗರಸಭೆಯ 32ನೇ ವಾರ್ಡಿನ ಸದಸ್ಯ ಮಾದೇಶ ಅಲಿಯಾಸ್ ಅವ್ವಾ ಮಾದೇಶ ಸೇರಿದಂತೆ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ನಂತರ ಅವ್ವಾ ಮಾದೇಶ ಸೇರಿದಂತೆ ಸಹಚರರು ಜಾಮೀನು ಮೇಲೆ ಹೊರಬಂದಿದ್ದರು.

ಆ ನಂತರ ನಡೆದ ಮೈಸೂರು ನಗರಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾದೇಶ ಅವರು ಗೆಲುವು ಪಡೆದು ನಗರಸಭಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.[ಮಕ್ಕಳನ್ನು ಕೊಂದು ಮೋರಿಗೆ ಶವ ಎಸೆದ ಪಾಪಿ ತಂದೆ]

ಇದೀಗ ವಿಚಾರಣೆ ಮುಗಿಸಿದ ನ್ಯಾಯಾಧೀಶ ವಿಜಯ್ ಕುಮಾರ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣ ಸಂಬಂಧ ಎರಡು ಅವಧಿಯ ಕಠಿಣ ಶಿಕ್ಷೆ(10ವರ್ಷ) ವಿಧಿಸಲಾಗಿದೆ. ಇದರೊಂದಿಗೆ ಮೊದಲ ಆರೋಪಿಗೆ 3 ಲಕ್ಷ ರೂ. ದಂಡ ಹಾಗೂ ಉಳಿದ ಆರೋಪಿಗಳಿಗೆ ತಲಾ 1 ಲಕ್ಷ ದಂಡ ವಿಧಿಸಲಾಗಿದೆ. ಈ ದಂಡದ ಹಣವನ್ನು ಹತ್ಯೆಯಾದ ಇಬ್ಬರು ಕುಟುಂಬಗಳಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದ್ದಾರೆ.

English summary
Mysuru city corporation member Madesh's murder case has proved in district Court, Mysuru, on Friday, February, 26th. He has done two murders on 2008 like before eight years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X