ಜಂಬೂ ಸವಾರಿಗೆ ಕಳೆಕಟ್ಟಿದ ಕಲಾ ತಂಡ-ಸ್ತಬ್ದ ಚಿತ್ರಗಳು
ಮೈಸೂರು, ಸೆಪ್ಟೆಂಬರ್ 30: ಐತಿಹಾಸಿಕ 407ನೇ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಕಲಾತಂಡ ಮತ್ತು ಸ್ತಬ್ದ ಚಿತ್ರಗಳ ಮೆರವಣಿಗೆಯನ್ನು ಲಕ್ಷಾಂತರ ಮಂದಿ ಅರಮನೆ ಆವರಣ ಸೇರಿದಂತೆ ರಾಜಮಾರ್ಗದುದ್ದಕ್ಕೂ ಇಕ್ಕೆಲಗಳಲ್ಲೂ ಕಿಕ್ಕಿರಿದು ನಿಂತು ವೀಕ್ಷಿಸುವ ಮೂಲಕ ಸಾಕ್ಷಿಯಾದರು.
ಬೆಳಗ್ಗಿನಿಂದಲೇ ಸುತ್ತಮುತ್ತಲಿನ ಹಳ್ಳಿಗಳಿಂದ, ದೇಶ, ವಿದೇಶಗಳಿಂದ ಮೊದಲೇ ನಗರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಜನ ಅರಮನೆ ಹಾಗೂ ಜಂಬೂಸವಾರಿ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಜಮಾಯಿಸಿದ್ದರು. ಪಾಸ್ ಪಡೆದವರು ಕಾಯ್ದಿರಿಸಿದ ಸ್ಥಳಗಳಲ್ಲಿ ಆಸೀನರಾದರೆ, ಉಳಿದವರ ಪೈಕಿ ಕೆಲವರು ರಸ್ತೆ ಬದಿಯಲ್ಲಿ ಸೂಕ್ತವಾದ ಜಾಗವನ್ನು ಆರಿಸಿಕೊಂಡು ಆಸೀನರಾದರೆ, ಮತ್ತೆ ಕೆಲವರು ಕಟ್ಟಡ ಹಾಗೂ ಮರಗಳ ಮೇಲೆ ಹತ್ತಿ ಕುಳಿತು ಜಂಬೂಸವಾರಿಯನ್ನು ಹತ್ತಿರದಿಂದ ವೀಕ್ಷಿಸಿದರು. ಜಂಬೂಸವಾರಿಯನ್ನು ವೀಕ್ಷಿಸಲು ಪಾಸ್ ಪಡೆದ ಗಣ್ಯರಿಗೆ ಅರಮನೆ ಅವರಣ ಸೇರಿದಂತೆ ಮಾರ್ಗದುದ್ದಕ್ಕೆ ದಲ್ಲಿ ಆಸನಗಳನ್ನು ವ್ಯವಸ್ಥೆ ಮಾಡಲಾಗಿತ್ತು.
ದಸರಾ ವೈಭವ 2017: ಸರಳ ದಸರಾದ ಅಪರೂಪದ ಚಿತ್ರಗಳು
ಸಂಪ್ರದಾಯದಂತೆ ಬೆಳಿಗ್ಗೆ ಅರಮನೆ ದರ್ಬಾರ್ ಹಾಲ್‍ನಲ್ಲಿ ಸಾಂಪ್ರದಾಯಿಕ ವಿಧಿವಿಧಾನ ಮುಗಿಸಿದ ಯದುವೀರರು ಸಂಪ್ರದಾಯದಂತೆ ಅರಮನೆಯಿಂದ ವಿಜಯಾತ್ರೆಯಲ್ಲಿ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕರಿತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು.












Click it and Unblock the Notifications