ಮೈಸೂರು ದಸರಾ 2019 : ಪೂರ್ವ ಸಿದ್ಧತೆ ಸಭೆ ಕರೆದ ಯಡಿಯೂರಪ್ಪ

ಮೈಸೂರು, ಆಗಸ್ಟ್ 05 : 2019ರ ಮೈಸೂರು ದಸರಾ ಸಿದ್ಧತೆಗಳತ್ತ ಕರ್ನಾಟಕ ಸರ್ಕಾರ ಗಮನ ಹರಿಸಿದೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರ ತನಕ ಈ ಬಾರಿಯ ದಸರಾ ನಡೆಯಲಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದಸರಾ ಕುರಿತು ಚರ್ಚೆ ನಡೆಸಲು ಆಗಸ್ಟ್ 9ರಂದು ಸಭೆಯನ್ನು ಕರೆದಿದ್ದಾರೆ. ಮೈಸೂರು ಜಿಲ್ಲಾಧಿಕಾರಿ, ಎಸ್ಪಿ, ಜಿಲ್ಲೆಯ ಜನಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Mysuru Dasara 2019 : Yediyurappa calls meeting on August 9

ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವ ಸಿದ್ಧತೆಗಳ ಕುರಿತು ಸಭೆ ನಡೆಯಲಿದೆ. ರಾಜ್ಯದಲ್ಲಿ ಬರಗಾಲ ಇರುವ ಕಾರಣ ಸರಳವಾಗಿ ಈ ಬಾರಿಯ ದಸರಾವನ್ನು ಆಚರಣೆ ಮಾಡುವ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

2018ರಲ್ಲಿಯೂ ಕೊಡಗಿನಲ್ಲಿ ನಡೆದ ಜಲಪ್ರಳಯದಿಂದಾಗಿ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ಮೈಸೂರು, ಮಂಡ್ಯ ಭಾಗದಲ್ಲಿ ಮಳೆಯ ಕೊರತೆ ಎದುರಾಗಿದೆ. ರಾಜ್ಯದ ಹಲವು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಆದ್ದರಿಂದ, ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತದೆ.

ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರ ತನಕ ಈ ಬಾರಿಯ ಮೈಸೂರು ದಸರಾ ನಡೆಯಲಿದೆ. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ದಸರಾ ಉದ್ಘಾಟನೆ ಮಾಡುವವರು ಯಾರು? ಎಂದು ತೀರ್ಮಾನವನ್ನು ಕೈಗೊಳ್ಳುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+