• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ದಸರಾ; ಕಲಾವಿದರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ

|

ಮೈಸೂರು, ಸೆಪ್ಟೆಂಬರ್ 28: ಕೋವಿಡ್ ಭೀತಿಯ ಹಿನ್ನಲೆಯಲ್ಲಿ ಈ ಬಾರಿಯ ಮೈಸೂರು ದಸರಾ ಸರಳವಾಗಿ ನಡೆಯಲಿದೆ. ಅಕ್ಟೋಬರ್ 17ರಿಂದ 27ರ ತನಕ ಈ ಬಾರಿಯ ದಸರಾ ನಡೆಯಲಿದೆ.

ಈ ಬಾರಿಯ ದಸರಾ ವೀಕ್ಷಣೆಗೆ 2 ಸಾವಿರ ಜನರಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ. ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಕಲಾ ತಂಡಗಳ ಸದಸ್ಯರು 5 ದಿನಗಳ ಮುಂಚಿತವಾಗಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು.

ದಸರಾ ದೀಪಾಲಂಕಾರದಲ್ಲಿ ಚೀನಾ ವಸ್ತುಗಳ ಬಳಕೆಗೆ ಬ್ಯಾನ್

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಮೈಸೂರು ಅರಮನೆಯಲ್ಲಿ ದಸರಾ ನೋಡಲು 2 ಸಾವಿರ ಜನರಿಗೆ ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ" ಎಂದು ಹೇಳಿದ್ದಾರೆ.

ಈ ಬಾರಿಯ ದಸರಾ ಉದ್ಘಾಟಿಸಲಿದ್ದಾರಾ ಡಾ.ಸಿ.ಎನ್ ಮಂಜುನಾಥ್?

ಕೇಂದ್ರ ಸರ್ಕಾರದ ಕೋವಿಡ್ ಅನ್ ಲಾಕ್ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಎಷ್ಟು ಜನರು ಸೇರಬೇಕು? ಎಂದು ತೀರ್ಮಾನ ಕೈಗೊಳ್ಳಲಾಗುತ್ತದೆ. ಕೋವಿಡ್ ಕಾರಣಕ್ಕೆ ಈ ವರ್ಷದ ದಸರಾ ಜಂಬೂ ಸವಾರಿ ಸಹ ಅರಮನೆ ಆವರಣಕ್ಕೆ ಸೀಮಿತವಾಗಿರುತ್ತದೆ.

ದಸರಾ ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ

ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಕಲಾ ತಂಡಗಳ ಸದಸ್ಯರು 5 ದಿನ ಮುಂಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು. ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಅಧಿಕಾರಿಗಳಿಗೆ ಕೋವಿಡ್ ನೆಗೆಟಿವ್ ವರದಿಯ ಪ್ರಮಾಣ ಪತ್ರವನ್ನು ತೋರಿಸಬೇಕು.

ಸರ್ಕಾರದ ಈ ಚಿಂತನೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. 2 ಸಾವಿರ ಜನರಿಗೆ ಮಾತ್ರ ಅವಕಾಶ ಎಂದರೆ ಸುಮಾರು 5 ಸಾವಿರ ಜನರು ಸೇರುತ್ತಾರೆ. ಎರಡು ಸಾವಿರ ಜನರು ಸೇರಿದರೆ ಸಾಮಾಜಿ ಅಂತರವನ್ನು ಹೇಗೆ ಕಾಪಾಡುತ್ತೀರಿ? ಎಂದು ಪ್ರಶ್ನೆ ಮಾಡಿದ್ದಾರೆ.

   Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

   English summary
   Artists who are participating in the Mysuru dasara 2020 Jamboo Savari and cultural activities should undergo for COVID test 5 days before the event.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X