• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈ ಬಾರಿಯ ಸರಳ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ: ಏನಿರುತ್ತೆ? ಏನಿರಲ್ಲ?

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 8: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಿದೆ.

ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ""ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು'' ಎಂದರು.

ಮೈಸೂರು ದಸರಾ 2020: ಅರ್ಜುನನ ಉತ್ತರಾಧಿಕಾರಿಗೆ ಹುಡುಕಾಟ?ಮೈಸೂರು ದಸರಾ 2020: ಅರ್ಜುನನ ಉತ್ತರಾಧಿಕಾರಿಗೆ ಹುಡುಕಾಟ?

ಆಹಾರ ಮೇಳ, ಕ್ರೀಡೆ, ಯುವದಸರಾ, ಸಾಂಸ್ಕೃತಿಕ ದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು.

ಮೊದಲೆಲ್ಲ 10-12 ಆನೆಗಳು ಭಾಗವಹಿಸುತಿದ್ದ ಅದ್ಧೂರಿ ನಾಡಹಬ್ಬದ ಆಚರಣೆಯಲ್ಲಿ ಈ ಬಾರಿ ಗಜಪಡೆಯನ್ನು ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಗಿದೆ.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಅವರಿಂದ ನೆರವೇರಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.

ದಸರಾ ಆಚರಣೆಗೆ 10 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುವುದಲ್ಲದೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು ಮತ್ತು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೇ ಪ್ರಧಾನಮಂತ್ರಿಗಳ ಆತ್ಮ ನಿರ್ಭರ ಭಾರತ ಪರಿಕಲ್ಪನೆಯಂತೆ, ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ.ಸಿ.ಎನ್ ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಉಪಸ್ಥಿತರಿದ್ದರು.

English summary
Due to covid-19, this time Mysuru Dasara celebrated in simple manner, limited to palace only; CM BS yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X