• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧ; ಯಾವ ದಿನ ಏನು ನಡೆಯುತ್ತೆ?

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 9: ವಿಶ್ವವಿಖ್ಯಾತ ಮೈಸೂರು ದಸರಾ 2020ರ ಅರಮನೆ ಪಾರಂಪರಿಕ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಅಧೀಕೃತ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಅಕ್ಟೋಬರ್ 17ರಂದು 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಯದುವಂಶದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಕಂಕಣಧಾರಣೆ ನೆರವೇರಿಸಲಾಗುತ್ತಿದೆ.

ಸರಳ ದಸರಾ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ನಂಜರಾಜೇ ಅರಸ್ ಆರೋಪ

ಬೆಳಿಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಆಚರಣೆ ನಡೆಯಲಿದ್ದು, ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಕೊರೊನಾ ಕಾರಣಕ್ಕೆ ಖಾಸಗಿ ದರ್ಬಾರ್ ಗೆ ಮಾಧ್ಯಮಗಳಿಗೂ ನಿರ್ಬಂಧ ವಿಧಿಸಲಾಗಿದೆ.

ಅ.21 ರಂದು ಬೆಳಿಗ್ಗೆ 9.45ಕ್ಕೆ ಸರಸ್ವತಿ ಪೂಜೆ ನಡೆಯಲಿದೆ. ಅಕ್ಟೋಬರ್ 25ಕ್ಕೆ ಚಂಡಿ ಹೋಮ ನಡೆಯಲಿದೆ. ಆಯುಧಗಳಿಗೆ ಪಟ್ಟದ ಆನೆ ಕುದುರೆ ಹಸು ವಾಹನಗಳಿಗೆ ಪೂಜೆ ನಡೆಯಲಿದೆ. ಅ.26ರಂದು ವಿಜಯದಶಮಿ ಮೆರವಣಿಗೆ ನಡೆಯಲಿದ್ದು, ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದಲ್ಲಿ ಬನ್ನಿ ಮರಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ನೆರವೇರಿಸಲಿದ್ದಾರೆ.

ದಸರಾ ಆಚರಣೆಯ ಮುನ್ನುಡಿಯಾಗಿ ಎರಡು ದಿನಗಳ ಹಿಂದೆ ಪಂಚಲೋಹದಿಂದ ನಿರ್ಮಾಣಗೊಂಡಿರುವ ನಾಡದೇವಿ ಉತ್ಸವ ಮೂರ್ತಿಯನ್ನು ಮೈಸೂರು ನಗರದ ಅಂಬಾವಿಲಾಸ ಅರಮನೆಯಿಂದ ಚಾಮುಂಡಿ ಬೆಟ್ಟಕ್ಕೆ ತೆಗೆದುಕೊಂಡು ಹೋಗಲಾಯಿತು.

ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ. ಅಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾಡಳಿತ ಸೇರಿದಂತೆ ಸರ್ಕಾರ ಕೋವಿಡ್ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ವಾರದ ಹಿಂದೆ ನಡೆದ ಸಭೆಯಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದರು.

English summary
World famous dasara festivals events list ready and released by dc office today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X