ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ ಮಹೋತ್ಸವಕ್ಕೆ ದಿನಗಣನೆ; ಅರಮನೆ ಪ್ರವೇಶ ದರ ಏರಿಕೆ ಶಾಕ್!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 25: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿ ಪಾರಂಪರಿಕ ದಸರಾ ಸಡಗರ ಸಂಭ್ರಮ ಮನೆ ಮಾಡಿದೆ. ಅರಮನೆಯ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ನಿಗದಿ ಮಾಡಲಾಗಿದ್ದು, ಅರಮನೆ ಕಾರ್ಯಕ್ರಮಗಳ ಪಟ್ಟಿ ಲಭ್ಯವಾಗಿದೆ.

ಕೊರೊನಾ ಸೋಂಕು ಹಿನ್ನೆಲೆ ಈ ಬಾರಿಯೂ ಪಾರಂಪರಿಕ ಜಟ್ಟಿ‌ ಕಾಳಗ ರದ್ದುಗೊಳಿಸಲಾಗಿದೆ. ಕಳೆದ ಬಾರಿಯೂ ಜಟ್ಟಿ ಕಾಳಗವನ್ನು ರದ್ದುಗೊಳಿಸಲಾಗಿತ್ತು. ಅರಮನೆಯಲ್ಲಿ ಅಕ್ಟೋಬರ್ 1ಕ್ಕೆ ರತ್ನ ಖಚಿತ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಂದು ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

 ಮೈಸೂರು ದಸರಾ 2021: ಶುರುವಾಗಲಿದೆ ಕುಶಾಲತೋಪು ಸಿಡಿಸುವ ಫಿರಂಗಿಗಳ ತಾಲೀಮು! ಮೈಸೂರು ದಸರಾ 2021: ಶುರುವಾಗಲಿದೆ ಕುಶಾಲತೋಪು ಸಿಡಿಸುವ ಫಿರಂಗಿಗಳ ತಾಲೀಮು!

ಪ್ರವಾಸಿಗರಿಗೆ ಬೆಲೆ ಏರಿಕೆ ಶಾಕ್
ದಸರಾಗೂ ಮುನ್ನ ಪ್ರವಾಸಿಗರಿಗೆ ಟಿಕೆಟ್ ದರ ಏರಿಕೆ ಶಾಕ್ ನೀಡಲಾಗಿದೆ. ಅರಮನೆ ಪ್ರವೇಶ ದರ ಏರಿಕೆ ಮಾಡಲಾಗಿದ್ದು, ವಯಸ್ಕರಿಗೆ 100 ರೂ., ಮಕ್ಕಳಿಗೆ 50 ರೂ. ನಿಗದಿ ಮಾಡಲಾಗಿದೆ. ಅಗತ್ಯ ವಸ್ತುಗಳ ದರಗಳ ಏರಿಕೆ ಬೆನ್ನಲ್ಲೇ ಅರಮನೆ ಪ್ರವೇಶ ದರ ಏರಿಕೆ ಮಾಡಲು ತೀರ್ಮಾನಿಸಿದ್ದು,
ಇಂದಿನಿಂದಲೇ ದರ ಏರಿಕೆಗೆ ಅರಮನೆ ಮಂಡಳಿ ಆದೇಶ ನೀಡಿದೆ. ಇನ್ನು ಶಾಲಾ ಮಕ್ಕಳಿಗೆ ಹಳೆಯ ದರ 20 ರೂ. ಹೊಸ ದರ 50 ರೂ. ಏರಿಕೆ ಮಾಡಲಾಗಿದೆ. ಆದರೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಬೆಲೆ ಏರಿಕೆ ಮಾಡಿಲ್ಲ.

Mysuru Dasara 2021 Celebration Conventional Programs list announced: palace entry fee hike

ಅ.7ರಿಂದ 14ರವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮ ನಡೆಯಲಿದ್ದು, ಅಕ್ಟೋಬರ್ 7ರಿಂದ ಅಕ್ಟೋಬರ್ 15ರವರೆಗೆ ಅರಮನೆಗೆ ಮಧ್ಯಾಹ್ನ 2.30ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಅಕ್ಟೋಬರ್ 7ರಿಂದ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನ ಏರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಮೈಸೂರು ದಸರಾ; ಗಜಪಡೆಗಳ ತಾಲೀಮು ಆರಂಭ ಮೈಸೂರು ದಸರಾ; ಗಜಪಡೆಗಳ ತಾಲೀಮು ಆರಂಭ

ಅ.14 ಅರಮನೆಯಲ್ಲಿ ಆಯುಧಪೂಜೆ ನಡೆಯಲಿದ್ದು, ಬೆಳಗ್ಗೆ 5.30ರಿಂದ ಪೂಜಾ ವಿಧಿವಿಧಾನ ಆರಂಭವಾಗಲಿದೆ. ಬೆಳಿಗ್ಗೆ 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಿ, ನಂತರ ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣ ಮಂಟಪಕ್ಕೆ ತರಲಾಗುತ್ತದೆ.

Mysuru Dasara 2021 Celebration Conventional Programs list announced: palace entry fee hike

ಅ.14ರ ಬೆಳಿಗ್ಗೆ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಪೂಜೆ ಸಲ್ಲಿಸಲಿದ್ದಾರೆ. ಆಗಸ್ಟ್ 15ರಂದು ಅರಮನೆಯಲ್ಲಿ ವಿಜಯದಶಮಿ ಆಚರಣೆ ನಡೆಯಲಿದೆ. ಅಂದು ಬೆಳಿಗ್ಗೆ 5.45ಕ್ಕೆ ಅರಮನೆ ಆನೆ ಕುದುರೆ ಹಸುಗಳು ಆಗಮಿಸಲಿದ್ದು, 6.13ರಿಂದ 6.32ರವರೆಗೆ ಪೂಜಾ ಕೈಂಕರ್ಯ ನೆರವೇರಲಿದೆ.

Mysuru Dasara 2021 Celebration Conventional Programs list announced: palace entry fee hike

7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ನಡೆಯಲಿದ್ದು, ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ. ಬಳಿಕ ದೇಗುಲದ ಬನ್ನಿ ಮರಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಲಿದ್ದಾರೆ. ನಂತರ ಅಕ್ಟೋಬರ್ 31ರಂದು ಸಿಂಹಾಸನ ವಿಂಗಡಿಸಿ ಖಜಾನೆಗೆ ರವಾನೆ ಮಾಡಲಾಗುತ್ತದೆ ಅಂದು ಸಹ ಮಧ್ಯಾಹ್ನ 1.30ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ.

English summary
Mysore dasara 2021 celebrations conventional programmes list announced: Mysore Palace Entry Fee Hiked From Today, here are the fares list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X