ಟಾಂಗಾ ಏರಿ ಹೋಗುಮಾ ಎಂದು ಮೈಸೂರು ಸುತ್ತಿದ 45 ಜೋಡಿಗಳು; ಪಾರಂಪರಿಕ ಉಡುಗೆಯ ರಂಗು
ಮೈಸೂರು, ಸೆಪ್ಟೆಂಬರ್, 30: ಮೈಸೂರು ಸಾಂಸ್ಕೃತಿಕ ನಗರಿ ಹೇಗೋ ಹಾಗೆರೇ ಟಾಂಗಾ ನಗರಿ ಕೂಡ ಹೌದು. ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ 45 ದಂಪತಿಗಳು ನಗರದ ಪಾರಂಪರಿಕ ಕಟ್ಟಡಗಳನ್ನು ಕಣ್ತುಂಬಿಕೊಂಡರು. ನಗರದ ಪುರಭವನದ (ಟೌನ್ ಹಾಲ್) ಆವರಣದಲ್ಲಿ ಆಯೋಜಿಸಿದ್ದ ಪಾರಂಪರಿಕ ಉಡುಗೆಯಲ್ಲಿ ಪಾರಂಪರಿಕ ಟಾಂಗಾ ಸವಾರಿಗೆ ಪಾರಂಪರಿಕ ದಸರಾ ಉಪ ಸಮಿತಿ ಅಧ್ಯಕ್ಷ ಗೋಪಾಲರಾವ್ ಚಾಲನೆ ನೀಡಿದರು.
ಪುರಭವನದಿಂದ ಆರಂಭಗೊಂಡ ಪಾರಂಪರಿಕ ಟಾಂಗಾ ಸಾವಾರಿ, ಹತ್ತನೆ ಚಾಮರಾಜ ಒಡೆಯರ್ ವೃತ್ತ, ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್‌ಡೌನ್ ಕಟ್ಟಡ, ಜಗನ್‌ಮೋಹನ ಅರಮನೆ, ಪರಕಾಲ ಮಠ, ವಾಣಿಜ್ಯ ತೆರಿಗೆ ಕಚೇರಿ, ಪದ್ಮಾಲಯ, ಮುಡಾ ವೃತ್ತ, ಪ್ರಾಚ್ಯವಿದ್ಯಾಸೌಧ, ಕ್ರಾರ್ಡ್ ಹಾಲ್, ಜಿಲ್ಲಾಧಿಕಾರಿಗಳ ಕಚೇರಿ, ಮಹಾರಾಜ ಜೂನಿಯರ್ ಕಾಲೇಜು, ಮೆಟ್ರೊಪೋಲ್ ವೃತ್ತ, ರೈಲ್ವೆ ನಿಲ್ದಾಣ, ಮೈಸೂರು ಮೆಡಿಕಲ್ ಕಾಲೇಜು ಮೂಲಕ ಹಾದು ದೊಡ್ಡ ಗಡಿಯಾರದ (ಟೌನ್ ಹಾಲ್) ಹತ್ತಿರ ಮುಕ್ತಾಯವಾಯಿತು.
ಗಮನ ಸೆಳೆಸ ಪಾರಂಪರಿಕ ಉಡುಗೆ
ಮೈಸೂರು ಭಾಗದ ನಾನಾ ಭೌಗೋಳಿಕ ಪ್ರದೇಶಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೊಡವ ಧಿರಿಸು, ಮಹಾರಾಜರ ತೊಡಿಗೆ, ಮೈಸೂರು ಪೇಟಾ, ಪಂಚೆ ಹಾಗೂ ಮೈಸೂರು ರೇಷ್ಮೆ ಸೀರೆ ಸೇರಿದಂತೆ ವಿವಿಧ ರೀತಿಯ ಪಾರಂಪರಿಕ ಉಡುಗೆ ತೊಟ್ಟು ಭಾಗವಹಿಸಿದ್ದ ಜೋಡಿಗಳಿಗೆ ಬಾಗೀನ ನೀಡಿ ಸ್ವಾಗತಿಸಲಾಯಿತು.

ಇತಿಹಾಸ ಮತ್ತು ಪುರಾತತ್ವ ತಜ್ಞ ಡಾ.ಶೆಲ್ವಪಿಳ್ಳೆ ಅಯ್ಯಂಗಾರ್ ಪಾರಂಪರಿಕ ಉಡುಗೆಯಲ್ಲಿ ಟಾಂಗಾ ಸವಾರಿಯಲ್ಲಿದ್ದ ದಂಪತಿಗಳಿಗೆ ಪಾರಂಪರಿಕ ಕಟ್ಟಡಗಳು ಕುರಿತು ಮಾಹಿತಿ ನೀಡಿದರು. ಹಾಗೆಯೇ ಮೈಸೂರು ಪಾರಂಪರಿಕ ಕಟ್ಟಗಳ ಐತಿಹಾಸಿಕ ಹಿನ್ನೆಲೆಯನ್ನು ತಿಳಿಸಿಕೊಟ್ಟರು. ಬೆಂಗಳೂರಿನ ಹೇಮಲತಾ-ಪ್ರಭು ಜೋಡಿ ಮಾತನಾಡಿ, ''ದಸರಾ ಕಾರ್ಯಕ್ರಮಕ್ಕಾಗಿಯೇ ಮೈಸೂರಿಗೆ ಬಂದಿದ್ದೇವೆ. ಪಾರಂಪರಿಕ ಟಾಂಗಾ ಸವಾರಿಯಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷ ಉಂಟುಮಾಡಿದೆ. ಈ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅದೇ ರೀತಿ ಜಂಬೂ ಸವಾರಿ ವೀಕ್ಷಿಸಲು ಕಾತುರರಾಗಿದ್ದೇವೆ,'' ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎನ್.ಎಸ್.ರಂಗರಾಜು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ರೈತ ದಸರಾದಲ್ಲಿ ಹಳ್ಳಿ ಸೊಬಗು
ಇನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದ್ದರು. ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಪ್ರತಿ ತಾಲೂಕಿನಲ್ಲಿ ರೈತ ದಸರಾ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿಕರ ಬಗ್ಗೆ ಸಾಕಷ್ಟು ಕಾಳಜಿ ಹೊಂದಿರುವ ಸಚಿವ ಬಿ.ಸಿ.ಪಾಟೀಲ್ ಅವರು, "ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ಮೂಲಕ ರೈತರ ಕಷ್ಟಸುಖಗಳನ್ನು ಆಲಿಸಲಿದ್ದಾರೆ. ಇದರ ಜೊತೆಗೆ ರೈತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ," ಎಂದರು.
ನಂತರ ಸಚಿವರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು, ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆ, ಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ ಮೆರವಣಿಗೆಯಲ್ಲಿ ಸಾಗಿದವು.
ಗ್ರಾಮೀಣ ದಸರಾ ಕಾರ್ಯಕ್ರಮದ ಮೆರಗು
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ತಾಲ್ಲೂಕಿನ ಜಯಪುರ ಗ್ರಾಮದಲ್ಲಿ ನಡೆದ ಗ್ರಾಮೀಣ ದಸರಾ ಕಾರ್ಯಕ್ರಮವು ಸಂಭ್ರಮ, ಸಡಗರದಿಂದ ನೆರವೇರಿತ್ತು. ಗ್ರಾಮೀಣ ದಸರಾಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದ್ದರು. ದಾರಿಪುರ ಗ್ರಾಮದ ಕರೂರು ಬಸವೇಶ್ವರ ದೇವಸ್ಥಾನದ ಬಳಿ ದೇವರ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದ್ದರು. ಬಳಿಕ ಮಾತನಾಡಿದ್ದ ಅವರು, ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲೂ ಗ್ರಾಮೀಣ ದಸರಾ ಅಚರಣೆ ಮಾಡಲಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷದಿಂದ ದಸರಾ ಆಚರಣೆಗೆ ತೊಡಕಾಗಿದ್ದು, ಈ ಬಾರಿ ಅದ್ಧೂರಿ ದಸರಾ ಮಾಡಲಾಗುತ್ತಿರುವುದು ಬಹಳ ಸಂತೋಷ ತಂದಿದೆ ಎಂದು ತಿಳಿಸಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications