Mysuru Dasara 2023: ಸೆಪ್ಪೆಂಬರ್ 1ಕ್ಕೆ ದಸರಾ ಗಜಪಯಣ ಸ್ಟಾರ್ಟ್‌, ಗರಿಗೆದರಿದ ಸಂಭ್ರಮ

ಮೈಸೂರು, ಆಗಸ್ಟ್‌, 07: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಸೆಪ್ಟೆಂಬರ್‌ 1ಕ್ಕೆ ಮೊದಲ ಹಂತದ ಗಜಪಯಣ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರು ತಾಲೂಕಿನ ವೀರನಹೊಸಳ್ಳಿಯಿಂದ ಆನೆಗಳನ್ನು ಕರೆತರಲಾಗುತ್ತದೆ. ಇದಕ್ಕೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರು ಅದ್ಧೂರಿ ದಸರಾ ಮಾಡಲು ಸೂಚನೆ ನೀಡಿದ್ದಾರೆ. ಈ ಬಾರಿ 14 ಆನೆಗಳನ್ನು ಕರೆತರಲಾಗುತ್ತಿದೆ. ಅನುದಾನದ ಬಗ್ಗೆ ಇನ್ನೂ ಏನೂ ನಿರ್ಧಾರ ಆಗಿಲ್ಲ. ದಸರಾ ಉದ್ಘಾಟಕರಾಗಿ ಯಾರನ್ನು ಕರೆಯಬೇಕೆಂಬ ನಿರ್ಧಾರ ಅಂತಿಮವಾಗಿಲ್ಲ ಎಂದರು.

Mysuru Dasara 2023 gajapayana begins on September 1

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಅಭಿಮನ್ಯು ನೇತೃತ್ವದ ಮೊದಲ ತಂಡದ ಗಜಪಡೆ ಸೆಪ್ಟೆಂಬರ್‌ 1ಕ್ಕೆ ಮೈಸೂರಿನತ್ತ ಹೆಜ್ಜೆ ಹಾಕಲಿದೆ. ಈಗಾಗಲೇ ಹೈ ಪರ್ವ ಕಮಿಟಿ ಸಭೆ ನಡೆದಿದೆ. ಜಿಲ್ಲಾಡಳಿತವು ಸಹ ದಸರಾ ಆಚರಣೆಗೆ ಸಿದ್ಧತೆ ನಡೆಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ನೇತೃತ್ವದಲ್ಲಿ ಶೀಘ್ರದಲ್ಲೇ ಮೈಸೂರಿನಲ್ಲಿ ಸಭೆ ನಡೆಯಲಿದೆ ಎಂದರು.

ಅರಣ್ಯಾಧಿಕಾರಿಗಳು ನಾಗರಹೊಳೆ, ಬಂಡೀಪುರದ ವಿವಿಧ ಕ್ಯಾಂಪ್‌ಗಳಿಗೆ ತೆರಳಿ ಆನೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೈಸೂರು ದಸರಾ ಗಜಪಡೆಯ ಆಯ್ಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಮೈಸೂರು ಡಿಸಿಎಫ್‌ ಸೌರಭ್ ಕುಮಾರ್ ನೇತೃತ್ವದಲ್ಲಿ ಬಳ್ಳೆ, ರಾಂಪುರ ಶಿಬಿರದಲ್ಲಿ ಇರುವ ದಸರಾ ಆನೆಗಳ ಪರಿಶೀಲನೆ ನಡೆಸಲಾಗಿದೆ ಎಂದರು.

ಡಿಪಿಆರ್‌ಗೆ ಮನವಿ

ಇದೇ ವೇಳೆ ಮೇಯರ್ ಶಿವಕುಮಾರ್ ಮಾತನಾಡಿ, ಕಳೆದ ಬಾರಿ ದಸರಾ ಮಹೋತ್ಸವ ಆಚರಣೆಗೆ ಪಾಲಿಕೆಯಿಂದ 16 ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತು. ಈ ಬಾರಿ ಸಿಎಂ ನಿರ್ದೇಶನದಂತೆ ಹೆಚ್ಚುವರಿಯಾಗಿ 10 ಕೋಟಿ ರೂಪಾಯಿ ನೀಡುವಂತೆ ಕೋರಿಕೆ ಸಲ್ಲಿಸಲಾಗಿದ್ದು, ಒಟ್ಟಾರೆಯಾಗಿ ಈ ಬಾರಿಯ ದಸರಾಗೆ 26 ಕೋಟಿ ರೂಪಾಯಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಕ್ರಿಯಾ ಯೋಜನೆಯ ವಿವರ

ವಲಯ ಕಚೇರಿ 1ರಿಂದ 9ರವರೆಗೆ ಕೈಗೊಳ್ಳಲಿರುವ ಕಾಮಗಾರಿಗೆ 22 ಕೋಟಿ ರೂಪಾಯಿ, ವಿದ್ಯುತ್ ಕಾಮಗಾರಿಗೆ 2.50 ಕೋಟಿ ರೂಪಾಯಿ, ತೋಟಗಾರಿಕೆ ಕಾಮಗಾರಿಗೆ 40 ಲಕ್ಷ ರೂಪಾಯಿ, ಆರೋಗ್ಯ ಶಾಖೆಯ ಕಾಮಗಾರಿಗೆ 80 ಲಕ್ಷ ರೂಪಾಯಿ, ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗದ ಕಾಮಗಾರಿಗಳಿಗೆ 30 ಲಕ್ಷ ರೂಪಾಯಿ ಸೇರಿ ಒಟ್ಟು 26 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಗುಂಡಿಮುಕ್ತ ರಸ್ತೆ ನಿರ್ಮಾಣ, ಸೌಂದರೀಕರಣ, ಬೀದಿ ದೀಪಗಳ ನಿರ್ವಹಣೆ, ಹಲವು ರಸ್ತೆಗಳ ಅಭಿವೃದ್ಧಿ ಮಾಡಬೇಕಿದೆ. ವಾರ್ಡ್‌ವಾರು ಆಯೋಜಿಸುವ ಮನೆ ಮನೆ ದಸರಾಗೆ ಅನುದಾನ ನೀಡಬೇಕಿದೆ. ದಸರಾ ಜಂಬೂ ಸವಾರಿ ಮೆರವಣಿಗೆ ರಾಜ ಮಾರ್ಗದಲ್ಲಿ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+