ಮೈಸೂರು ದಸರಾ 2023: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ ಹೇಗಿರುತ್ತೆ ಗೊತ್ತಾ?
ಮೈಸೂರು, ಅಕ್ಟೋಬರ್ 10: ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್‌ಗಾಗಿ ರತ್ನ ಖಚಿತ ಸಿಂಹಾಸನದ 8 ಬೆಳ್ಳಿಯ ಭದ್ರಾಸನ ಮತ್ತು 6 ಬಿಡಿಭಾಗಗಳನ್ನು ಜೋಡಿಸಿ, ಸಿಂಹಾಸನಕ್ಕೆ ಉಮಾಪಕ್ಷಿ, ಮುತ್ತಿನ ಜಾಲರಿ, ಮಕರ ತೋರಣ, 25 ಜತೆ ನಗಗಳು, 1 ಜೊತೆ ಚಿನ್ನದ ಕುದುರೆ, ತುರಾಯಿ ಜೋಡಿ, 1 ಜೊತೆ ಚಿನ್ನದ ಕಳಶ ಜೋಡಿಸಿ ಅಲಂಕರಿಸುವ ಮೂಲಕ ಸಿಂಹಾಸನವನ್ನು ಜೋಡಿಸಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಲಾಯಿತು.
ಇನ್ನು ಸಿಂಹಾಸನಕ್ಕೆ ಅ.15ರಂದು ಸಿಂಹದ ಮುಖವನ್ನು ಜೋಡಿಸಿದ ಬಳಿಕ ಸಿಂಹಾಸನವು ದರ್ಬಾರ್‌ಗೆ ಸಜ್ಜಾಗಲಿದೆ. ಈ ಸಿಂಹಾಸನವನ್ನು ದರ್ಬಾರ್ ಹಾಲ್‌ನಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಅ 15ರಿಂದ ಅ.24ರವರೆಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ನವರಾತ್ರಿಗೂ ಮುನ್ನ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗಗಳನ್ನು ಹೊರತಂದು ಅದನ್ನು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ ಅದತಂತೆ ಅರಮನೆಯ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಜೋಡಿಸಲಾಗಿದೆ.
14 ಬಿಡಿ ಭಾಗಗಳಿಂದ ಕೂಡಿರುವ ಸಿಂಹಾಸನ
ಸೋಮವಾರ ಅರಮನೆಯ ಸುಪರ್ಧಿನಲ್ಲಿದ್ದ ಸಿಂಹಾಸನವನ್ನು ಪ್ರಮೋದಾದೇವಿ ಅವರು ಜಿಲ್ಲಾಡಳಿತದ ವಶಕ್ಕೆ ನೀಡಿದ ಬಳಿಕ. ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್ ಹಾಲ್‌ಗೆ ತರಲಾಯಿತು.

ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಈ ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ದರ್ಬಾರ್ ಹಾಲ್‌ನಲ್ಲಿ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ಬೆಳಗ್ಗೆ ಶಾಂತಿಹೋಮದೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಆರಂಭ ಮಾಡಿ ಕಳಶ ಸ್ಥಾಪನೆ, ಪವಿತ್ರ ಜಲ ಪ್ರೋಕ್ಷಣೆ, ಹೋಮ ಸೇರಿದಂತೆ ಪೂರ್ವ ನಿರ್ಧರಿತ ಮುಹೂರ್ತದಲ್ಲಿ ಸಿಂಹಾಸನ ಜೋಡಣಾ ಕಾರ್ಯ ಸಂಪನ್ನಗೊಳಿಸಲಾಯಿತು.
ನಂತರ ಬೆಳಗ್ಗೆ 10.05ರಿಂದ 10.35ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಮಾಡಲಾಯಿತು. ಇದಕ್ಕಾಗಿ ಬೆಳಗ್ಗೆ 7 ರಿಂದಲೇ ವಿವಿಧ ಪೂಜಾ ಕೈಂಕರ್ಯ ಜರುಗಿದವು. ಅರಮನೆ ಪುರೋಹಿತರ ನೇತೃತ್ವದಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಶ್ರೀ ಚಾಮುಂಡಿ ಪೂಜೆ ನೆರವೇರಿಸಿ, ನಂತರ ಪೂರ್ಣಾಹುತಿ ನೆರವೇರಿಸಲಾಯಿತು. ಅಂತಿಮವಾಗಿ ಶಾಂತಿ ಪೂಜೆ ಮಾಡಲಾಯಿತು. ಬಳಿಕ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಸಿಂಹಾಸನದ ಜೋಡಣೆ ಕಾರ್ಯ ನಡೆಯಿತು. ನಂತರ ಪಟ್ಟದ ಕುದುರೆ, ಪಟ್ಟದ ಹಸುವನ್ನು ಕಲ್ಯಾಣಮಂಟಪದ ಸಮೀಪ ಇರುವ ಅಂಗಳಕ್ಕೆ ಕರೆತಂದು ಪೂಜಿಸಲಾಯಿತು.

ಅ.15 ರಿಂದ 9 ದಿನಗಳವರೆಗೆ ಖಾಸಗಿ ದರ್ಬಾರ್
ನವರಾತ್ರಿ ಮೊದಲ ದಿನವಾದ ಅ.15ರಂದು ಚಿನ್ನದ ಸಿಂಹಾಸನಕ್ಕೆ ಸಿಂಹ ಜೋಡಣಾ ಕಾರ್ಯ ನಡೆದ ನಂತರ ಖಾಸಗಿ ದರ್ಬಾರ್ ನಡೆಯುತ್ತದೆ. ಅಂದು ಮಧ್ಯಾಹ್ನದವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.23ರಂದು ಮಧ್ಯಾಹ್ನದವರೆಗೆ ಹಾಗೂ ವಿಜಯದಶಮಿ ದಿನವಾದ ಅ.24ರಂದು ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಖಾಸಗಿ ದರ್ಬಾರ್ ಅ.15 ರಿಂದ 9 ದಿನಗಳವರೆಗೆ ಅರಮನೆಯಲ್ಲಿ ನಡೆಯಲಿದೆ. ದಸರಾ ಮುಗಿದ ಬಳಿಕವೂ ಕೆಲ ದಿನಗಳು ಸಾರ್ವಜನಿಕ ವೀಕ್ಷಣೆಗೆ ರತ್ನಖಚಿತ ಸಿಂಹಾಸನ ದರ್ಬಾರ್ ಹಾಲ್‌ನಲ್ಲಿ ಇರಲಿದ್ದು, ನ.8 ರಂದು ತೆರವು (ವಿಸರ್ಜನೆ) ಮಾಡಲಾಗುತ್ತದೆ.
ಸಿಂಹಾಸನ ಜೋಡಣೆಯ ಸಂದರ್ಭದಲ್ಲಿ ತ್ರಿಷಿಕಾ ಕುಮಾರಿ ಒಡೆಯರ್ ಪಾದಪೂಜೆ ನೆರವೇರಿಸಿದರು. ಸಿಂಹಾಸನದ ಜೋಡಣೆ ವೇಳೆ ಪ್ರಮೋದಾ ದೇವಿ ಒಡೆಯರ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications