Mysuru dasara 2023: ಈ ಬಾರಿ ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ದಸರಾ ಆಚರಣೆಗೆ ಪ್ಲಾನ್‌, ಕಟ್ಟುನಿಟ್ಟಿನ ಕ್ರಮಗಳು ಹೀಗಿವೆ

ಮೈಸೂರು, ಅಕ್ಟೋಬರ್‌, 06: ಮೈಸೂರು ದಸರಾ ಸಂಭ್ರಮದ ನಡುವೆ ಪರಿಸರ ಕಾಳಜಿ ವಹಿಸಿ, ಶುಚಿತ್ವಕ್ಕೆ ಆದ್ಯತೆ ನೀಡಿ, ದಸರಾ ನಂತರ ನಗರದಲ್ಲಿ ರಾಶಿಗಟ್ಟಲೆ ಬೀಳುವ ಪ್ಲಾಸ್ಟಿಕ್ ಯುಕ್ತ ಕಸವನ್ನು ತಡೆದು ಪರಸರ ಸ್ನೇಹಿ ದಸರಾ ಆಚರಣೆ ಮಾಡುವ ಶಪಥವನ್ನು ಜಿಲ್ಲಾಡಳಿತ ಮಾಡಿದೆ. ಇದು ಸಕಾರವಾಗಬೇಕಾದರೆ ಸ್ಥಳೀಯರು ಮತ್ತು ಹೊರಗಿನಿಂದ ಬರುವ ಪ್ರವಾಸಿಗರು ಕೈಜೋಡಿಸಬೇಕಿದೆ.

ಇದುವರೆಗೆ ದಸರಾವನ್ನು ಅದ್ಧೂರಿಯಾಗಿ, ಸಂಭ್ರಮದಿಂದ ಆಚರಿಸುವ ಬಗ್ಗೆ ಮಾತ್ರ ಆಲೋಚಿಸಲಾಗುತ್ತಿತ್ತು. ಆದರೆ ಈ ಬಾರಿ ಮೈಸೂರು ನಗರವು ದೇಶದ ಸ್ವಚ್ಛ ನಗರಗಳಲ್ಲಿ ಒಂದಾಗಿರುವುದರಿಂದ ದಸರಾವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸರ್ವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಮಹಾನಗರ ಪಾಲಿಕೆಯು ಪ್ಲಾಸ್ಟಿಕ್ ಮುಕ್ತಗೊಳಿಸಲು ಸರ್ವ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

mysuru-dasara-2023

ಆದರೂ ನಗರದಲ್ಲಿ ಪ್ಲಾಸ್ಟಿಕ್ ಗಳನ್ನೊಳಗೊಂಡ ಕಸಗಳು ರಾಶಿಗಳು ಕಡಿಮೆಯಾಗುತ್ತಿಲ್ಲ. ಹೀಗಿರುವಾಗ ದಸರಾ ವೇಳೆ ಪ್ಲಾಸ್ಟಿಕ್ ಗಳ ಬಳಕೆಯನ್ನು ತಡೆಗಟ್ಟದೆ ಹೋದರೆ ನಗರ ಮಾತ್ರವಲ್ಲದೆ, ಪ್ರವಾಸಿ ತಾಣಗಳು ಕಸಮಯವಾಗುವ, ಪ್ಲಾಸ್ಡಿಕ್ ರಾಶಿ ಬೀಳುವ ಸಾಧ್ಯತೆ ಹೆಚ್ಚಿದೆ. ಹಾಗೆ ನೋಡಿದರೆ ದಸರಾ ಸಂದರ್ಭದಲ್ಲಿ ದೂರದಿಂದ ಬರುವ ಪ್ರವಾಸಿಗರು ಮೈಸೂರು ನಗರ ಮತ್ತು ಸುತ್ತಮುತ್ತಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

ಇದರಿಂದ ವಿವಿಧ ಮಳಿಗೆ, ಅಂಗಡಿ ಮುಂಗಟ್ಟು, ದಸರಾ ಕಾರ್ಯಕ್ರಮ ನಡೆಯುವ ಸ್ಥಳ, ಆಹಾರ ಮೇಳ, ಯುವ ದಸರಾ, ಚಾಮುಂಡಿಬೆಟ್ಟ, ಅರಮನೆ, ಮೃಗಾಲಯ ಹಾಗೂ ಪ್ರಮುಖ ಬೀದಿ ಬದಿಯಲ್ಲಿ ಕಸ ಉತ್ಪಾದನೆಯಾಗಲಿದ್ದು, ಇದರಲ್ಲಿ ಪ್ಲಾಸ್ಟಿಕ್ ಪ್ರಮಾಣವೇ ಹೆಚ್ಚಿರಲಿದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಪ್ಲಾಸ್ಟಿಕ್‌ ತ್ಯಾಜ್ಯಗಳಿಗೆ ಕಡಿವಾಣ ಹಾಕುವ ಸಂಕಲ್ಪವನ್ನು ಮಾಡಲಾಗಿದೆ.

ಪ್ರತಿದಿನ 550 ಟನ್ ಕಸ ಸಂಗ್ರಹ

ಜಿಲ್ಲಾಡಳಿತವು ಮೈಸೂರು ದಸರಾವನ್ನು ಪರಿಸರ ಸ್ನೇಹಿ ದಸರಾವನ್ನಾಗಿ ಆಚರಿಸುವ ನಿರ್ಧಾರದ ಹಿಂದೆ ಕಾರಣವೂ ಇದೆ. ಅದು ಏನೆಂದರೆ ಪ್ರತಿದಿನ ನಗರದಲ್ಲಿ 550 ಟನ್ ಕಸ ಸಂಗ್ರಹವಾಗುತ್ತಿದೆ. ದಸರಾ ವೇಳೆ 10 ಟನ್ ಕಸ ಹೆಚ್ಚುವರಿಯಾಗಿ ಸಂಗ್ರಹವಾಗುತ್ತದೆ. ಇದರಲ್ಲಿ ಶೇಕಡಾ 50ರಷ್ಟು ಕಸ ಪ್ಲಾಸ್ಟಿಕ್ ಬಾಟಲ್, ಕವರ್‌ಗಳೇ ಆಗಿರುತ್ತವೆ.

mysuru-dasara-2023

ಈ ಹಿನ್ನೆಲೆಯಲ್ಲಿ ಪರಿಸರಕ್ಕೆ ಮಾರಕ ಆಗಿರುವ ಪ್ಲಾಸ್ಟಿಕ್‌ಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಹಾಗೂ ನಗರಪಾಲಿಕೆ ನಿರ್ಧರಿಸಿದೆ. ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ತ್ಯಾಜ್ಯ ವಸ್ತುಗಳ ನಿರ್ವಹಣೆ, ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿಯನ್ನು ಈಗಿನಿಂದಲೇ ಮೂಡಿಸಲಾಗುತ್ತಿದೆ. ಈ ನಡುವೆ ದಸರೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈಗಾಗಲೇ ಅಧಿಕಾರಿಗಳಿಗೆ ಹಲವು ರಿತಿಯ ಕ್ರಮಗಳ ಕುರಿತಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹೆಚ್ಚು ಜನ ಸೇರುವ ಆಹಾರ ಮೇಳ ಸೇರಿದಂತೆ ಇತರ ವೇದಿಕೆಗಳಲ್ಲಿ ಪ್ಲಾಸ್ಟಿಕ್ ಬಳಸಬಾರದು. ಸ್ವಚ್ಛತಾ ಸಮಿತಿಯವರು ಎರಡು ಪಾಳಿಯಲ್ಲಿ ಕೆಲಸ ಮಾಡಬೇಕು. ದಸರಾ ವೇದಿಕೆಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸಂಜೆಯೊಳಗೆ ಸ್ವಚ್ಛ ಮಾಡಬೇಕು. ಇದಕ್ಕಾಗಿ ಬೆಳಗ್ಗೆ ಹಾಗೂ ಸಂಜೆ ಕೆಲಸ ಮಾಡಲು ಎರಡು ಪೌರ ಕಾರ್ಮಿಕರ ತಂಡ ರಚಿಸುವಂತೆ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಖುದ್ದು ಸಚಿವರು ಅರಮನೆ ಮಂಡಳಿ ಹಾಗೂ ಜಿಪಂ ಸಭಾಂಗಣದಲ್ಲಿ ನಡೆಸಿದ ಸಭೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ತರಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ

ಇನ್ನು ಸ್ವಚ್ಛ ಹಾಗೂ ಪ್ಲಾಸ್ಟಿಕ್ ಮುಕ್ತ ದಸರಾ ಆಚರಿಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿಶ್ವ ವಿಖ್ಯಾತ ದಸರಾದಲ್ಲಿ ಪ್ಲಾಸ್ಟಿಕ್ ಕಪ್ಪುಚುಕ್ಕೆ ಆಗಬಾರದೆಂದು ತಿಳಿಸಿದ್ದು, ಪ್ಲಾಸ್ಟಿಕ್ ಮುಕ್ತ ದಸರಾ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆಯಾದರೆ ಪರಿಸರಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಮೇಯರ್ ಶಿವಕುಮಾರ್ ಅವರು, ಪ್ಲಾಸ್ಟಿಕ್ ಮುಕ್ತ ದಸರಾ ನಡೆಸಲು ನಗರಪಾಲಿಕೆ ಸಿದ್ಧತೆ ನಡೆಸಿದ್ದು, ಎಲ್ಲೆಲ್ಲಿ ಹೆಚ್ಚು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಸಂಗ್ರಹವಾಗುತ್ತದೆ ಅಲ್ಲೆಲ್ಲಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ದಂಡ ವಿಧಿಸುವ ಚಿಂತನೆ ನಡೆಸಿದ್ದು, ಈ ಸಂಬಂಧ ಹೋಟೆಲ್ ಮಾಲೀಕರ ಸಂಘ, ಚೇಂಬರ್ ಆಫ್ ಕಾಮರ್ಸ್, ಬೀದಿಬದಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಿ, ಪರಿಸರ ಸ್ನೇಹಿ ದಸರಾ ಆಚರಣೆಗೆ ಸಹಕರಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+