Mysuru dasara 2023: ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರ ಸಿದ್ಧಪಡಿಸಿ: ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು, ಅಕ್ಟೋಬರ್‌, 3: ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣವಾದ ಸ್ತಬ್ಧಚಿತ್ರಗಳನ್ನು ದಸರಾ ಉತ್ಸವದ ಮೆರವಣಿಗೆಗೆ ಸಿದ್ಧಪಡಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಸಮಾಜದ ಪರಿವರ್ತನೆ ಅನುಕೂಲ ಆಗುವಂತಹ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

mysuru-dasara-2023

ಕಲೆ ಎಂಬುದು ಒಂದು ಸೃಜನಶೀಲ ಕ್ರಿಯೆಯಾಗಿದ್ದು, ಜನರ ಮನಸ್ಸಿಗೆ ಮುದ ನೀಡುವ ಹಾಗೂ ಪ್ರಫುಲ್ಲವಾಗಿಸುವ ಶಕ್ತಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಚರಿತ್ರೆ, ಸ್ವಾತಂತ್ರ್ಯ ಹೋರಾಟ, ಸಾಂಸ್ಕೃತಿಕ ಬದುಕು, ಸಂಗೀತ, ಸಾಹಿತ್ಯ ಸೇರಿದಂತೆ ಸಾಮಾಜಿಕ ಸಂದೇಶ ನೀಡುವ ಸ್ತಬ್ಧಚಿತ್ರಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ನಾರಾಯಣ ಗುರು ಸಮಾನತೆಗಾಗಿ ಶ್ರಮಿಸಿದರು. ದೇಶದಲ್ಲೇ ಮೊದಲು ಮಹಿಳೆಯರಿಗೆ ಶಿಕ್ಷಣವನ್ನು ಸಾವಿತ್ರಿ ಬಾಯಿ ಫುಲೆ ನೀಡಿದರು. ಸಮೃದ್ಧ ಭಾರತ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ, ನೀರಾವರಿ, ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿ ಸಾಮಾಜಿಕ ನ್ಯಾಯದ ಪರ ಆಡಳಿತ ನಡೆಸಿದರು‌. ಹೀಗೆ ದೇಶದ ಹಲವಾರು ಮಹಾನ್ ಸಮಾಜ ಸುಧಾರಕರ ಬದುಕು, ಹೋರಾಟವನ್ನು ತಿಳಿಸಿಕೊಡುವ ಕೆಲಸವಾಗಬೇಕು ಎಂದರು.

ಪ್ರತಿ ಜಿಲ್ಲೆಗೆ ಅದರದ್ದೇ ಆದಂತಹ ಐತಿಹಾಸಿಕ ಘಟನೆಗಳು ಇರುತ್ತವೆ. ವಿಭಿನ್ನ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಒಳಗೊಂಡಿರುತ್ತವೆ. ಹಾಗೆಯೇ ಮೈಸೂರಿನಲ್ಲಿ ಐತಿಹಾಸಿಕ ಮಾಹಿತಿ ಜೊತೆಗೆ ಜೀವಂತವಾಗಿ ನಡೆದಿರುವಂತೆ ಘಟನೆಗಳನ್ನು ಬಿಂಬಿಸುವ ಶಿಸ್ತುಬದ್ಧ ಎಲ್ಲರ ಕಣ್ಮನ ಸೆಳೆಯುವ ಕಲಾಕೃತಿ ಒಳಗೊಂಡಿರಲಿ ಎಂದು ತಿಳಿಸಿದರು.

ಕಲಾವಿದರು ಸಂಪೂರ್ಣವಾಗಿ ತೊಡಗಿಸಿಕೊಂಡು ಸೃಜನಶೀಲತೆಯಿಂದ ಉತ್ತಮವಾದ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ. ನಿಮಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಪ್ರಶಸ್ತಿ ಪತ್ರವನ್ನು ವಿಭಾಗೀಯ ಮಟ್ಟದಲ್ಲಿ ನೀಡುವುದು ಹಾಗೂ ಕಲಾವಿದರಿಗೂ ಪ್ರತ್ಯೇಕ ಪ್ರಶಸ್ತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾ ತಂಡಗಳನ್ನು ನಿಯೋಜಿಸುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದವು ಜಿಲ್ಲಾಡಳಿತ ನಿಗದಿಪಡಿಸಿದ ಅಳತೆಯನ್ನು ಮೀರಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+