Mysuru dasara 2023: ಮಹಿಷಾ ದಸರಾ ಆಚರಣೆಗೆ ಅನುಮತಿ?
ಮೈಸೂರು, ಸೆಪ್ಟೆಂಬರ್, 06: ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹಾಗೆಯೆ ಕೆಲ ದಿನಗಳಿಂದ ಮಹಿಷಾ ದಸರಾ ಆಚರಣೆ ಮಾಡಬೇಕೋ ಬೋಡವೋ ಎನ್ನುವ ಚರ್ಚೆಗಳು ಕೂಡ ನಡೆಯುತ್ತಿದ್ದವು. ಆದರೆ ಇದೀಗ ಅಕ್ಟೋಬರ್ 13 ರಂದು ಮಹಿಷಾ ದಸರಾ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ಬಳಿಕ ಮಹಿಷಾ ದಸರಾ ಆಚರಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಮೇಯರ್ ಪುರುಷೋತ್ತಮ್ ಅವರು, ಕೆಲವರು ಮಹಿಷಾನ ಇತಿಹಾಸ ಗೊತ್ತಿಲ್ಲದವರು ಮಹಿಷಾ ದಸರಾಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ ಎಂದರು. ಇನ್ನು ಇವರಿಗೆ ಉತ್ತರ ಕೊಡಲು ಮುಂದಿನ ಭಾನುವಾರ ಸೆಪ್ಟಂಬರ್ 10ರಂದು ರಾಜ್ಯಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಈ ಬಾರಿ ಮಹಿಷಾ ದಸರಾ ಆಚರಣೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ನಿಮ್ಮ ಧಾರ್ಮಿಕ ಆಚರಣೆಗೆ ಯಾರ ಅನುಮತಿಯ ಅವಶ್ಯಕತೆಯಿಲ್ಲ. ನಿಮ್ಮ ಪಾಡಿಗೆ ನೀವು ಮುಂದುವರೆಸಿ ಅಂತಾ ಹೇಳಿದ್ದಾರೆ ಎಂದರು.
ಧಾರ್ಮಿಕ ಸ್ವಾತಂತ್ರ್ಯ ಸಂವಿಧಾನ ಬದ್ಧವಾದ ಹಕ್ಕು. ಯಾರು ಯಾವ ಆಚರಣೆ ಬೇಕಾದರೂ ಮಾಡಬಹುದು. ಯಾವ ಆಚರಣೆ ಮಾಡಬೇಕು, ಯಾವುದನ್ನು ಮಾಡಬಾರದು ಎಂದು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಹಿಷ ದಸರಾಕ್ಕೆ ಅವಕಾಶ ನೀಡುವುದಾಗಿ ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸುಳಿವು ನೀಡಿದ್ದರು.












Click it and Unblock the Notifications