ಮೈಸೂರು ದಸರಾ 2023: ಈ ಬಾರಿಯ ದಸರಾ ಆಹಾರ ಮೇಳದಲ್ಲಿ ಏನೇನಿರಲಿದೆ?
ಮೈಸೂರು, ಅಕ್ಟೋಬರ್ 05: ತಿನಿಸು ಪ್ರಿಯರಿಗೆ ಒಂದೇ ಸೂರಿನಡಿ ವಿವಿಧ ಖಾದ್ಯಗಳನ್ನು ನೀಡುವ ಸಲುವಾಗಿ ಮೈಸೂರು ದಸರಾದಲ್ಲಿ ಆಹಾರ ಮೇಳಕ್ಕೂ ಆದ್ಯತೆ ನೀಡಲಾಗುತ್ತಿದ್ದು, ಈ ಬಾರಿ ವಿಭಿನ್ನ, ವಿಶಿಷ್ಟ ಮತ್ತು ಶುಚಿ, ರುಚಿಯ ಆಹಾರ ಪದಾರ್ಥಗಳನ್ನು ಉಣಬಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಒಂದೇ ಸೂರಿನಡಿ ಆಹಾರ ಮೇಳವನ್ನು ಆಯೋಜಿಸಿ, ಸಸ್ಯಹಾರಿ ಮತ್ತು ಮಾಂಸಹಾರಿ ಸೇರಿದಂತೆ ಸಿಹಿತಿಂಡಿಗಳು, ಐಸ್ ಕ್ರೀಂ, ಕೇಕ್, ಜ್ಯೂಸ್ ಹೀಗೆ ಎಲ್ಲ ರೀತಿಯ ತಿನಿಸು ಮತ್ತು ಪಾನೀಯಗಳನ್ನು ದೊರೆಯುವಂತೆ ಮಾಡಲಾಗುತ್ತಿದೆ. ಕಳೆದ ವರ್ಷ ಎರಡು ಕಡೆ ಆಹಾರ ಮೇಳವನ್ನು ನಡೆಸಲಾಗಿತ್ತಾದರೂ ಈ ಬಾರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಮಾತ್ರ ಆಹಾರ ಮೇಳ ನಡೆಯಲಿದೆ.

ದಸರಾ ಆರಂಭದ ದಿನವಾದ ಅಕ್ಟೋಬರ್ 15 ರಿಂದ 22ರವರೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ ನಡೆಯಲಿದ್ದು, ಈ ಬಾರಿ ಸ್ಥಳೀಯ, ದೇಶಿ, ವಿದೇಶಿ, ಸಾಂಪ್ರದಾಯಿಕ, ಬುಡಕಟ್ಟು ಶೈಲಿ ಸೇರಿದಂತೆ ಎಲ್ಲ ಭಾಗದ ಆಹಾರಗಳನ್ನು ತಯಾರು ಮಾಡಿ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಹೀಗಾಗಿ ದಸರಾ ಸಂದರ್ಭದಲ್ಲಿ ಎಂಟು ದಿನಗಳ ಕಾಲ ಬೆಳಗ್ಗಿನಿಂದ ರಾತ್ರಿವರೆಗೆ ಆಹಾರ ಪ್ರಿಯರು ತಮಗೆ ಬೇಕಾದ ತಿನಿಸುಗಳನ್ನು ಸವಿಯ ಬಹುದಾಗಿದೆ.
ಈ ಬಾರಿ ಒಂದೇ ಕಡೆ ಆಹಾರ ಮೇಳ
ಈ ಹಿಂದೆ ನಗರದ ಅರಮನೆ ಬಳಿಯ ಕಾಡಾ ಕಚೇರಿ ಬಳಿ ಆಹಾರಮೇಳ ನಡೆಯುತ್ತಿತ್ತು. ಆದರೆ ವರ್ಷ ಕಳೆದಂತೆ ದಸರಾ ವೇಳೆ ಪ್ರವಾಸಿಗರ ಸಂಖ್ಯೆ ಹೆಚ್ಚಾದ ಕಾರಣ ಮತ್ತು ನಗರವಾಸಿಗಳು ಹೆಚ್ಚಿನ ಪ್ರಮಾಣದಲ್ಲಿ ಆಹಾರ ಮೇಳಕ್ಕೆ ಭೇಟಿ ನೀಡಲು ಆರಂಭಿಸಿದ ಪರಿಣಾಮ ಅಲ್ಲಿ ಜಾಗದ ಕೊರತೆ ಕಾಣಿಸಲಾರಂಭಿಸಿತು. ಹೀಗಾಗಿ ಸ್ಕೌಟ್ ಅಂಡ್ ಗೈಡ್ ಮೈದಾನ ಮತ್ತು ಲಲಿತ್ ಮಹಲ್ ಪ್ಯಾಲೆಸ್ ಹೋಟೆಲ್ ಪಕ್ಕದ ಮೂಡಾ ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು.

ಪ್ರಸಕ್ತ ವರ್ಷ ಲಲಿತ್ ಮಹಲ್ ಪ್ಯಾಲೆಸ್ ಹೋಟೆಲ್ ಪಕ್ಕದ ಮೂಡಾ ಮೈದಾನದಲ್ಲಿ ಆಹಾರ ಮೇಳವನ್ನು ನಡೆಸುತ್ತಿಲ್ಲ. ಬದಲಿಗೆ ಸ್ಕೌಟ್ ಅಂಡ್ ಗೈಡ್ ಮೈದಾನದಲ್ಲಿ ಮಾತ್ರ ಆಯೋಜಿಸಲಾಗುತ್ತಿದ್ದು, 140ಕ್ಕೂ ಹೆಚ್ಚಿನ ಮಳಿಗೆ ತೆರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ನಡೆಯುವ ಆಹಾರ ಮೇಳದಲ್ಲಿ ಮಾಂಸಹಾರಿ ಮತ್ತು ಸಸ್ಯಹಾರಕ್ಕೆ ಸಂಬಂಧಿಸಿದಂತೆ ನೂರಾರು ಬಗೆಯ ತಿನಿಸುಗಳು ತಯಾರಾಗುವುದರಿಂದ ಜನ ತಮಗೆ ಇಷ್ಟವಾದುದನ್ನು ತಿಂದು ಖುಷಿ ಪಡಬಹುದಾಗಿದೆ.
ಆಹಾರ ಮೇಳದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ
ಇನ್ನು ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಆಸಕ್ತರಿಂದ ಅರ್ಜಿ ಕರೆದು ಮಳಿಗೆಗಳನ್ನು ನೀಡುವ ಪ್ರಕ್ರಿಯೆ ನಡೆಯಬೇಕಿದೆ. ಈ ಕಾರ್ಯವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರು ನೋಡಿಕೊಳ್ಳಲಿದ್ದು, ಆಸಕ್ತರು ಮೈಸೂರಿನ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆಹಾರ ಮೇಳದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರ ಕುಡಿಯುವ ನೀರಿನ ವ್ಯವಸ್ಥೆ, ಕಸ ವಿಲೇವಾರಿ, ಕೈ ತೊಳೆಯಲು ನೀರಿನ ವ್ಯವಸ್ಥೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಆಹಾರ ಮೇಳಕ್ಕೆ ಎರಡು ಕಡೆ ಪ್ರವೇಶ ಮತ್ತು ಹೊರಗೆ ಹೋಗಲು ವ್ಯವಸ್ಥೆ, ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಪೊಲೀಸ್ ಕಂಟ್ರೋಲ್ ರೂಂ ತೆರೆಯಲಾಗುತ್ತಿದೆ.

ಇನ್ನು ಆಹಾರ ಮೇಳದಲ್ಲಿ ಏನೇನು ಇರಲಿದೆ ಎನ್ನುವುದನ್ನು ನೋಡುವುದಾದರೆ ಬುಡಕಟ್ಟು ಶೈಲಿ ಸೇರಿದಂತೆ ಸಹಜ ಕೃಷಿ ಆಹಾರಗಳು, ಮೈಸೂರು, ಕೊಡಗು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಉತ್ತರಭಾರತ, ಟಿಬೆಟಿಯನ್, ಕಾಶ್ಮೀರಿ, ರಾಜಸ್ಥಾನಿ, ಈಶಾನ್ಯ ಭಾರತ, ಮರಾಠಿ ಶೈಲಿಯ ಆಹಾರಗಳು ಮಾತ್ರವಲ್ಲದೆ, ವಿವಿಧ ರೀತಿಯ ಚಾಕೊಲೇಟ್, ಹಣ್ಣು ಮತ್ತು ಹಣ್ಣಿನ ರಸ, ಸಾಂಪ್ರದಾಯಿಕ ಸಿಹಿ ತಿಂಡಿಗಳು, ಚಾಟ್ಸ್ ಸೇರಿದಂತೆ ನಾನಾ ಬಗೆಯ ತಿಂಡಿಗಳು ಇರಲಿದ್ದು, ಸಿರಿಧಾನ್ಯ, ಸಹಜ, ಸಾವಯವ ಧಾನ್ಯಗಳಿಂದ ತಯಾರಿಸುವ ಆಹಾರಕ್ಕೆ ಹೆಚ್ಚು ಆದ್ಯತೆ ಇರುತ್ತದೆ.
ವಿದೇಶಿ ತಿನಿಸಿನೊಂದಿಗೆ ವಿವಿಧ ಸ್ಪರ್ಧೆ
ಇದೆಲ್ಲದರ ನಡುವೆ ಚೈನೀಸ್, ಇಟಾಲಿಯನ್, ಫ್ರೆಂಚ್ ಹಾಗೂ ಆಫ್ರಿಕನ್ ಶೈಲಿಯ ವಿಭಿನ್ನ ತಿನಿಸುಗಳನ್ನು ಪರಿಚಯಿಸಲು ಸಿದ್ಧತೆ ನಡೆಯುತ್ತಿದೆ. ಎಲ್ಲ ವರ್ಗದ ಜನರ ಅಭಿರುಚಿ ಗಮನದಲ್ಲಿರಿಸಿಕೊಂಡು ವೈವಿಧ್ಯಮಯವಾಗಿಸಲು ಉದ್ದೇಶಿಸಲಾಗಿದೆ. ಮೇಳದಲ್ಲಿ ದೇಶಿಯ ಮತ್ತು ಖಂಡಾಂತರ ಆಹಾರ ಪದ್ಧತಿಯ ಜತೆಗೆ ಪ್ರಾದೇಶಿಕ ಮತ್ತು ಹೊರ ರಾಜ್ಯಗಳ ವೈವಿಧ್ಯಮಯ ಊಟೋಪಚಾರಗಳನ್ನು ಅಳವಡಿಸಲಾಗುತ್ತದೆ. ಆಧುನಿಕ ಆಹಾರ ಅಭ್ಯಾಸಗಳಿಂದ ಜನರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸಹಜ, ನೈಸರ್ಗಿಕ, ಸಾವಯವ ಕೃಷಿಯಲ್ಲಿ ಬೆಳೆದ ಆಹಾರ ಧ್ಯಾನಗಳು, ಹಣ್ಣು-ಹಂಪಲು, ತರಕಾರಿ, ಸಿರಿಧಾನ್ಯಗಳಿಂದ ತಯಾರಿಸಿದ ಅಡುಗೆಗಳನ್ನು ಉಣಬಡಿಸಲು ದಸರಾ ಸಮಿತಿ ಆಲೋಚನೆ ಮಾಡಿದೆ.
ದಸರಾ ಆಹಾರ ಮೇಳ ಕೇವಲ ತಿನಿಸುಗಳ ಸೇವನೆಗಷ್ಟೆ ಸೀಮಿತವಾಗದೆ ಮೇಳದಲ್ಲಿ ಅಡುಗೆ, ಭೋಜನ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಯ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿ ನಿರ್ಧರಿಸಿದೆ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ನಾನಾ ತಿನಿಸು ತಿನ್ನುವ ಸ್ಪರ್ಧೆ, ಮಹಿಳೆಯರಗೆ ಸ್ಥಳದಲ್ಲೇ ಅಡುಗೆ ತಯಾರಿಸುವ ಸ್ಪರ್ಧೆ, ವಿಶೇಷವಾಗಿ ದಂಪತಿಗಳನ್ನು ಕೇಂದ್ರೀಕರಿಸಿ ಸ್ಪರ್ಧೆ ಆಯೋಜಿಸುವ ಬಗ್ಗೆಯೂ ಚಿಂತನೆ ಮಾಡಲಾಗಿದೆ. ಒಟ್ಟಾರೆ ದಸರಾದ ವೇಳೆ ಆಹಾರ ಮೇಳಕ್ಕೆ ಆಗಮಿಸುವ ಬೋಜನ ಪ್ರಿಯರಿಗೆ ಖುಷಿಯಾಗುವಂತೆ ಮತ್ತು ತಾವು ಇಷ್ಟಪಡುವ ಆಹಾರಗಳನ್ನು ಸೇವಿಸಲು ಅನುಕೂಲವಾಗುವಂತೆ ಆಹಾರ ಮೇಳವನ್ನು ಆಯೋಜಿಸಲು ಸರ್ವ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದ್ದು, ಅ.15ರಿಂದ ಆಹಾರ ಮೇಳ ಆರಂಭವಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications