ಮೈಸೂರು ದಸರಾ 2023: ಅ.18ರಿಂದ ಯುವ ದಸರಾ, ಅ.23 ಏರ್‌ ಶೋ, ಇಲ್ಲಿದೆ ಸಂಪೂರ್ಣ ಮಾಹಿತಿ

ಮೈಸೂರು, ಅಕ್ಟೋಬರ್‌ 10: ದಸರಾ ಮಹೋತ್ಸವದ ಅಂಗವಾಗಿ ಯುವ ಸಮೂಹದ ಆಕರ್ಷಣೆಯಾದ ಯುವ ದಸರಾವನ್ನು ಅಕ್ಟೋಬರ್‌ 18ರಿಂದ ಅಕ್ಟೋಬರ್‌ 21ರವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಅರಮನೆ ಮಂಡಳಿ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ 6 ದಿನ ಯುವ ದಸರಾ ನಡೆಸಲಾಗುತ್ತಿತ್ತು. ಈ ವರ್ಷ 4 ದಿನಗಳ ಕಾಲ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ, ಮಹದೇವಪ್ಪ ಅವರು ಯುವ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವ ರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

mysuru-dasara-2023

ಸಂಜೆ 6.30 ರಿಂದ ರಾತ್ರಿ 10.30ರವರೆಗೆ ಯುವ ದಸರಾ ನಡೆಯಲಿದೆ. ಮೊದಲ ದಿನ ಸಾಧುಕೋಕಿಲ ಮತ್ತು ತಂಡದಿಂದ ಸಂಗೀತದ ರಸದೌತಣ ಇರಲಿದೆ. ಕನ್ನಡ ರ್ಯಾಪರ್ ಅಲೋಕ್ ತಂಡದಿಂದ ಸಂಗೀತ ಕಾರ್ಯಕ್ರಮ ಇದೆ. ಬಾಲಿವುಡ್‌ನ ಪ್ರಖ್ಯಾತ ಹಾಡುಗಾರರು ಕೂಡ ಯುವ ದಸರಾದಲ್ಲಿ ಭಾಗಿಯಾಗಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೂ ಈ ಬಾರಿಯ ಯುವ ದಸರಾ ಸಂಭ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಅಕ್ಟೋಬರ್‌ 15 ರಿಂದ ಅಕ್ಟೋಬರ್‌ 24 ರವರೆಗೆ ದಸರಾ ಲಪುಷ್ಪ ಪ್ರದರ್ಶನ ಅನಾವರಣಗೊಳ್ಳಿದೆ. ಮೈಸೂರಿನ ಕುಪ್ಪಣ್ಣ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಾರಿ 2 ಲಕ್ಷ ಗುಲಾಬಿ ಹೂವುಗಳಿಂದ ಚಂದ್ರಯಾನದ ಪರಿಕಲ್ಪನೆಯ ಕಲಾಕೃತಿ ನಿರ್ಮಾಣವಾಗಲಿದೆ. ಇದರ ಜೊತೆಗೆ ಚಾಮುಂಡೇಶ್ವರಿ ದೇವಿ ಹಾಗೂ ದೇವಸ್ಥಾನದ ಗೋಪುರ, ಸುವರ್ಣ ಕರ್ನಾಟಕ - ಕರ್ನಾಟಕದ ಶ್ರೀಮಂತ ಪರಂಪರೆ, ಕ್ರೀಡೆಗಳ ಥೀಮ್, ಕ್ರಿಕೆಟ್ ಹೂವಿನ ಕಲಾಕೃತಿ, ಅಂಬಾರಿ ಹೂವಿನ ಕಲಾಕೃತಿ, ಕಾಫಿ ಕಪ್ ಹೂವಿನ ಕಲಾಕೃತಿಗಳು ಈ ಬಾರಿಯ ಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆ ಎಂದರು.

mysuru-dasara-2023

ಐದು ವರ್ಷಗಳ ಬಳಿಕ ದಸರಾ ಮಹೋತ್ಸವದಲ್ಲಿ ಏರ್ ಶೋ ಹಮ್ಮಿಕೊಳ್ಳಲಾಗಿದೆ. ಅ.22 ಮತ್ತು 23 ರಂದು ಏರ್ ಶೋ ಆಯೋಜನೆ ಮಾಡಲಾಗಿದೆ. ಅ.22ರಂದು ಏರ್ ಶೋ ರಿಹರ್ಸಲ್ ನಡೆಯಲಿದೆ. ಅ.23ರಂದು ಪೂರ್ಣಪ್ರಮಾಣದ ರ್ಏ ಶೋ ಇರುತ್ತದೆ. ರಿಹರ್ಸಲ್ ಮತ್ತು ಪೂರ್ಣ ಪ್ರಮಾಣದ ಏರ್ ಶೋ ಎರಡು ಕೂಡ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿವೆ. ಸಂಜೆ 4 ಗಂಟೆಯಿಂದ 45 ನಿಮಿಷ ಏರ್ ಶೋ ನಡೆಯಲಿದೆ ಎಂದು ಹೇಳಿದರು.

ಈ ಬಾರಿ ಬರದ ಪರಿಣಾಮ ದಸರಾ ಮಹೋತ್ಸವವನ್ನು ಅದ್ಧೂರಿಯೂ ಅಲ್ಲದೇ, ಸರಳವೂ ಅಲ್ಲದೇ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಸೂಚನೆ ನೀಡಿದೆ. ಈ ಸೂಚನೆ ಮೇರೆಗೆ ಮಾರ್ಗಸೂಚಿಯನ್ವಯ ಸಾಂಪ್ರದಾಯಿಕ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಲು ಸಿದ್ದತೆ ಮಾಡಲಾಗುತ್ತಿದೆ.

ಮೈಸೂರಿನ ಪ್ರವಾಸೋದ್ಯಮದ ಹಿತದೃಷ್ಟಿಯಿಂದ ದಸರಾಗೆ ಜನರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಸರಳ ದಸರಾ ಎಂದು ಚರ್ಚೆ ನಡೆದರೆ ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಾರೆ. ಹಾಗಾಗಿ ಸರಳ ದಸರಾ ಚರ್ಚೆ ಅನಗತ್ಯ. ಬಹುತೇಕ ಕಾರ್ಯಕ್ರಮಗಳನ್ನು ಪ್ರಾಯೋಜಕತ್ವದ ಮೂಲಕ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಚಿಂತನೆಯಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+