ಐತಿಹಾಸಿಕ ನಗರಿ ಮೈಸೂರಲ್ಲಿ ದಸರಾ ಪಾರಂಪರಿಕ ಕಾರ್ಯಕ್ರಮ: ಏನಿದರ ವಿಶೇಷ?
ಮೈಸೂರು, ಸೆಪ್ಟೆಂಬರ್ 24: ಮೈಸೂರು ಪಾರಂಪರಿಕ ನಗರಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಪಾರಂಪರಿಕ ನಗರಿಯಲ್ಲಿರುವ ವಿಶೇಷತೆಗಳನ್ನು ದಸರಾ ಸಂದರ್ಭ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರಿಗೆ ತಿಳಿಸುವಂತೆ ಮಾಡುವುದಲ್ಲದೆ, ಆ ಮೂಲಕ ಇಲ್ಲಿನ ಪರಂಪರೆಯ ಎಲ್ಲೆಡೆಗೆ ಪಸರಿಸುವಂತೆ ಮಾಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮುಂದಾಗಿದೆ.
ಅಕ್ಟೋಬರ್ 4 ರಿಂದ 6 ರವರೆಗೆ ಬೆಳಿಗ್ಗೆ 7 ಗಂಟೆಯಿಂದ ಮೈಸೂರಿನ ರಂಗಾಚಾರ್ಲು ಪುರಭವನ( ಟೌನ್ ಹಾಲ್ ನಿಂದ)ದ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು ನಗರದಲ್ಲಿ ನೂರಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದು ಈ ಕಟ್ಟಡಗಳ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಲು ಪಾರಂಪರಿಕ ನಡಿಗೆ ಕಾರ್ಯಕ್ರಮವನ್ನು ಕಳೆದ ದಸರಾದಲ್ಲಿ ನಡೆಸಲಾಗಿತ್ತು. ಈ ಬಾರಿಯೂ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಅಕ್ಟೋಬರ್ 4ರಂದು ಬೆಳಿಗ್ಗೆ ಆರಂಭಗೊಳ್ಳಲಿದೆ. ಅಂದು ಪಾರಂಪರಿಕ ಜಾವಾ ಮೋಟಾರ್ ಬೈಕ್ ಸವಾರಿಯನ್ನು ಏರ್ಪಡಿಸಲಾಗಿದೆ.
ಈ ಜಾವಾ ಮೋಟಾರ್ ಬೈಕ್ ಸವಾರಿಗೆ 25 ರಿಂದ 50 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳು, ಯುವಕರು ಹಾಗೂ ಪುರುಷರು ಭಾಗವಹಿಸಬಹುದಾಗಿದ್ದು, ಮೊದಲು ನೋಂದಣಿ ಮಾಡಿಕೊಳ್ಳುವ 10 ಮಂದಿ ಜಾವ ಮೋಟಾರ್ ಬೈಕುವುಳ್ಳ ಆಸಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ( ಕಡ್ಡಾಯವಾಗಿ ಜಾವಾ ಮೋಟಾರ್ ಬೈಕ್ ತರುವುದು). ಮೋಟಾರ್ ಬೈಕ್ ಸವಾರಿಯೂ ರಂಗಾಚಾರ್ಲು ಪುರಭವನ( ಟೌನ್ ಹಾಲ್ )ದಿಂದ ಪ್ರಾರಂಭವಾಗಲಿದೆ.

ಜಾವಾ ಮೋಟಾರ್ ಬೈಕ್ ಸವಾರಿ
ಇಲ್ಲಿಂದ ಮುಂದಕ್ಕೆ ದೊಡ್ಡ ಗಡಿಯಾರ ಗೋಪುರ(ಸಿಲ್ವರ್ ಜುಬಿಲಿ ಕ್ಲಾಕ್ ಟವರ್), ಫ್ರೀ ಮೇಸನ್ಸ್ ಕ್ಲಬ್, 10ನೇ ಚಾಮರಾಜೇಂದ್ರ ವೃತ್ತ ಅಂಬಾ ವಿಲಾಸ ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಲಾನ್ಸ್ ಡೌನ್ ಕಟ್ಟಡ, ಬನುಮಯ್ಯ ಶಿಕ್ಷಣ ಸಂಸ್ಥೆ, ಮೈಸೂರು ಮಹಾನಗರ ಪಾಲಿಕೆ (ಕಾರ್ಪೋರೇಷನ್ ಕಛೇರಿ), ಮಹಾರಾಜ ಸಂಸ್ಕೃತ ಪಾಠಶಾಲೆ, ಸಾರ್ವಜನಿಕ ಕಛೇರಿಗಳ ಸಂಕೀರ್ಣ(ಕಾಡಾ), ಅಂಬಾವಿಲಾಸ ಅರಮನೆ (ವರಹಗೇಟ್), ಗನ್ಹೌಸ್, ಶಿವರಾತ್ರೀಶ್ವರ ಮಠದ ಆಡಳಿತ ಕಟ್ಟಡ, 6 ಗೇಟ್, ಕರ್ಜನ್ ಪಾರ್ಕ್, ಬ್ಯಾಂಡ್ ಹೌಸ್, ಆಡಳಿತ ತರಬೇತಿ ಸಂಸ್ಥೆ, ಕೆ.ಎಸ್.ಆರ್.ಪಿ ಕಟ್ಟಡ ಮೈಸೂರು ಪ್ರವೇಶದ್ವಾರ, ಲಲಿತ್ ಮಹಲ್, ಪೋಸ್ಟಲ್ ಟ್ರೈನಿಂಗ್ ಸೆಂಟರ್, ವಸಂತ್ ಮಹಲ್(ಡಯಟ್) ಹಾದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹತ್ತಿರ ಮುಕ್ತಾಯಗೊಳ್ಳಲಿದೆ.
ಅಕ್ಟೋಬರ್ 5 ರಂದು ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗೆ ಪಾರಂಪರಿಕ ಟಾಂಗಾ ಸವಾರಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 25 ರಿಂದ 55 ವರ್ಷ ವಯೋಮಿತಿಯುಳ್ಳ ದಂಪತಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದ್ದು, ಮೊದಲು ನೋಂದಣಿ ಮಾಡಿಕೊಳ್ಳುವ 50 ಜೋಡಿಗಳಿಗೆ ಮಾತ್ರ ಆದ್ಯತೆ ಮೇರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
ಟಾಂಗಾ ಸವಾರಿ, ಪಾರಂಪರಿಕ ನಡಿಗೆ
ಟಾಂಗಾ ಸವಾರಿಯು ರಂಗಾಚಾರ್ಲು ಪುರಭವನದಿಂದ ಪ್ರಾರಂಭವಾಗಿ ದೊಡ್ಡ, ಗಡಿಯಾರ ಗೋಪುರ (ಸಿಲ್ವರ್ ಜ್ಯುಬಿಲಿ ಕ್ಲಾಕ್ ಟವರ್), ಫ್ರೀ ಮೇಸನ್ಸ್ ಕ್ಲಬ್, 10ನೇ ಚಾಮರಾಜೇಂದ್ರ ವೃತ್ತ, ಅಂಬಾ ವಿಲಾಸ ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ಡೌನ್ ಕಟ್ಟಡ, ಜಗನ್ ಮೋಹನ ಅರಮನೆ, ಪರಕಾಲ ಮಠ, ಶೇಷಾದ್ರಿ ಹೌಸ್- ವಾಣಿಜ್ಯ ತೆರಿಗೆ ಕಛೇರಿ, ಪದ್ಮಾಲಯ, ಹಳೇ ಜಿಲ್ಲಾಧಿಕಾರಿಗಳ ಕಛೇರಿ, ಕ್ರಾಫರ್ಡ್ ಹಾಲ್, ಹೋಟೆಲ್ ಮೆಟ್ರೊಪೋಲ್, ಮೈಸೂರು ರೈಲ್ವೆ ಜಂಕ್ಷನ್, ಕೃಷ್ಣ ರಾಜೇಂದ್ರ ಆಸ್ಪತ್ರೆ(ಕೆ.ಆರ್.ಆಸ್ಪತೆ) ವೃತ್ತ, ಮೈಸೂರು ಮೆಡಿಕಲ್ ಕಾಲೇಜು, ಆಯುರ್ವೇದಿಕ್ ಆಸ್ಪತ್ರೆ, ಚಾಮರಾಜೇಂದ್ರ ಟೆಕ್ನಿಕಲ್ ಇನ್ಸಿಟಿಟ್ಯೂಟ್, ಕಾವೇರಿ ಎಂಪೋರಿಯಮ್, ಗಾಂಧಿ ವೃತ್ತ ಹಾದು ರಂಗಾಚಾರ್ಲು ಪುರಭವನ(ಟೌನ್ಹಾಲ್) ಹತ್ತಿರ ಮುಕ್ತಾಯಗೊಳ್ಳಲಿದೆ.
ಅಕ್ಟೋಬರ್ 6 ರಂದು "ಪಾರಂಪರಿಕ ನಡಿಗೆ" ಕಾರ್ಯಕ್ರಮ ನಡೆಯಲಿದ್ದು, 18 ರಿಂದ 50 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳು, ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ. ಮೊದಲು ನೋಂದಣಿ ಮಾಡಿಕೊಳ್ಳುವ 200 ಜನ ಆಸಕ್ತರಿಗೆ ಮಾತ್ರ ಪಾರಂಪರಿಕ ನಡಿಗೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
ನಡಿಗೆಯು ರಂಗಾಚಾರ್ಲು ಪುರಭವನದಿಂದ ಪ್ರಾರಂಭವಾಗಿ, ಸಿಲ್ವರ್ ಜೂಬಿಲಿ ಕ್ಲಾಕ್ ಟವರ್(ದೊಡ್ಡ ಗಡಿಯಾರ), ಫ್ರಿಮೇಸನ್ಸ್ ಕ್ಲಬ್, ಹತ್ತನೆ ಚಾಮರಾಜ ಒಡೆಯರ್ ವೃತ್ರ ಅಂಬಾವಿಲಾಸ ಅರಮನೆ, ನಾಲ್ಕನೇ ಕೃಷ್ಣರಾಜ ಒಡೆಯರ್ ವೃತ್ತ, ಚಿಕ್ಕ ಗಡಿಯಾರ, ದೇವರಾಜ ಮಾರುಕಟ್ಟೆ, ಕೃಷ್ಣರಾಜೇಂದ್ರ ಆಸ್ಪತ್ರೆ ಮೈಸೂರು ಮೆಡಿಕಲ್ ಕಾಲೇಜು, ಸರ್ಕಾರಿ ಆಯುರ್ವೇದ ಕಾಲೇಜು, ಚಾಮರಾಜೇಂದ್ರ ಟೆಕ್ನಿಕಲ್ ಇನ್ಸ್ಟಿಟ್ಯೂಟ್ ಕಾವೇರಿ ಎಂಪೋರಿಯಮ್, ಗಾಂಧಿ ವೃತ್ತ ಹಾದು ರಂಗಾಚಾರ್ಲು ಪುರಭವನ (ಟೌನ್ಹಾಲ್) ಹತ್ತಿರ ಮುಕ್ತಾಯಗೊಳ್ಳಲಿದೆ.
ಸೆ.30ರೊಳಗೆ ನೋಂದಣಿಗೆ ಅವಕಾಶ
ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳಲ್ಲಿ ನುರಿತ ಇತಿಹಾಸ ಹಾಗೂ ಪುರಾತತ್ವ ತಜ್ಞರುಗಳು ಮೈಸೂರಿನ ವಿವಿಧ ಪಾರಂಪರಿಕ ಕಟ್ಟಡಗಳ ಪರಿಚಯವನ್ನು ಮಾಡಿಕೊಡಲಿದ್ದಾರೆ. ಭಾಗವಹಿಸಲು ಇಚ್ಛಿಸುವವರು ಸೆಪ್ಟಂಬರ್ 30ರೊಳಗೆ ದೊಡ್ಡಕೆರೆ ಮೈದಾನದ ಕರ್ನಾಟಕದ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರನ್ನು ನೇರವಾಗಿ ಅಥವಾ ದೂರವಾಣಿ ಅಥವಾ ಕಚೇರಿಯ ಇ-ಮೇಲ್ ವಿಳಾಸ [email protected] ಮತ್ತು [email protected] ನ ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ,
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸ್ಥಿರ ದೂ. ಸಂ:0821-2424671/ 2424673 ಹಾಗೂ ಉಪ ನಿರ್ದೇಶಕರಾದ(ಪರಂಪರೆ) ಡಾ.ಸಿ.ಎನ್.ಮಂಜುಳಾ ಅವರ ಮೊ..ಸಂ:83102 50733 ಮತ್ತು ಪ್ರಥಮ ದರ್ಜೆ ಸಹಾಯಕರಾದ ಶಶಿಧರ .ಎಸ್ ಅವರ ಮೊ.ಸಂ: 7349057976 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪುರಾರತ್ವ , ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.












Click it and Unblock the Notifications