Mysuru Dasara 2024: ನಾಡಹಬ್ಬ ದಸರಾ ಗಜಪಯಣಕ್ಕೆ ಅದ್ಧೂರಿ ಚಾಲನೆ: ನಾಡಿನತ್ತ ಗಜಪಡೆ

ಮೈಸೂರು, ಆಗಸ್ಟ್‌ 21: ನಾಡಹಬ್ಬ ದಸರಾ ಉತ್ಸವದ ಮೊದಲ ಹೆಜ್ಜೆ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ಕೇಂದ್ರದಲ್ಲಿ ಇಂದು (ಆಗಸ್ಟ್‌ 21) ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ದಸರಾ ಆನೆಗಳು ಕಾವಾಡಿಗರ ಜೊತೆ ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ.

ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರನಹೊಸಳ್ಳಿಯ ವಲಯ ಕಚೇರಿ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಗಣ್ಯರು ಬೆಳಗ್ಗೆ 10:20 ರಿಂದ 10:45 ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ವಿಶೇಷವಾಗಿ ಅಲಂಕೃತಗೊಂಡು ಸಾಲಾಗಿ ನಿಂತಿದ್ದ ಗಜಪಡೆಗೆ ದೀಪ ಬೆಳಗಿ, ಪುಷ್ಪಾರ್ಚನೆ ನೆರವೇರಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

Mysuru Dasara 2024 Forest Minister Eshwar Khandre Has Launched The Mysore Dasara Gajapayana

ಬಳಿಕ ವಿವಿಧ ಕಲಾತಂಡಗಳು, ಮಂಗಳವಾದ್ಯದೊಂದಿಗೆ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು, ಧನಂಜಯ, ಭೀಮ, ಗೋಪಿ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮೀ ಮತ್ತು ಲಕ್ಷ್ಮೀ ಆನೆಗಳು ನಾಡಿನತ್ತ ಹೆಜ್ಜೆಹಾಕಿದವು. ಮೊದಲ ತಂಡದಲ್ಲಿ ಏಳು ಗಂಡು ಹಾಗೂ ಒಂಬತ್ತು ಹೆಣ್ಣಾನೆಗಳು ಮೈಸೂರಿನತ್ತ ತೆರಳಿವೆ.

ಗಜಪಡೆಗೆ ಮೊದಲ ಪೂಜೆ

ಕಳೆದ 27 ವರ್ಷಗಳಿಂದ ದಸರಾ ಉತ್ಸವದ ಆನೆಗಳಿಗೆ ಪೂಜೆ ಸಲ್ಲಿಸುತ್ತಿರುವ ಅರ್ಚಕ ಮೈಸೂರಿನ ಪ್ರಹ್ಲಾದ್ ರಾವ್ ಆನೆಗಳಿಗೆ ಪೂಜೆ ಸಲ್ಲಿಸಿದರು. ವಿಶೇಷವಾಗಿ ಅಲಂಕೃತಗೊಂಡಿದ್ದ ಆನೆಗಳನ್ನು ಸಾಲಾಗಿ ನಿಲ್ಲಿಸಲಾಯಿತು. ಬಳಿಕ ಆನೆಗಳ ಪಾದ ತೊಳೆದು, ಆನೆಗಳ ಮೇಲಿನ ದೃಷ್ಟಿದೋಷ ತೆಗೆಯಲಾಯಿತು. ನಂತರ ಆನೆಗಳ ಪಾದದ ಬಳಿ ಕುಂಕುಮ, ಹರಿಸಿಣ, ಗರಿಕೆ, ಬೆಲ್ಲ, ಕಬ್ಬು, ಮೋದಕ, ಕಡುಬು, ಪಂಚಕಜ್ಜಾಯ, ಎಲೆ, ಅಡಿಕೆಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು.

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌: ಕರ್ನಾಟಕದಲ್ಲಿ ದುಬಾರಿ ಮದ್ಯದ ಬೆಲೆ ಇಳಿಕೆ?

ಪಂಚಫಲ, ಕಡುಬು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ಕಲ್ಲು ಸಕ್ಕರೆ, ಮೋದಕ ನೈವೇದ್ಯ ನೀಡಿ ಶೋಡಷೋಪಚಾರ ಪೂಜೆ ಮಾಡಲಾಯಿತು. ಗಣಪತಿ ಅರ್ಚನೆ ಜತೆಗೆ ವನದೇವತೆ, ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಪೂಜೆಯ ನಂತರ ಸಚಿವರು, ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಪುಷ್ಪಾರ್ಚನೆ ನೆರವೇರಿಸುವುದರೊಂದಿಗೆ ಗಜಪಡೆಯನ್ನು ಕಾಡಿನಿಂದ ನಾಡಿಗೆ ಸ್ವಾಗತಿಸಿದರು.

Mysuru Dasara 2024 Forest Minister Eshwar Khandre Has Launched The Mysore Dasara Gajapayana

ಪೂಜೆ ಬಳಿಕ ಗಜಪಡೆ ವೀರನಹೊಸಳ್ಳಿಯ ವಲಯ ಕಚೇರಿ ಬಳಿಯಿಂದ ವೀರನಹೊಸಳ್ಳಿ ಆಶ್ರಮ ಶಾಲೆವರೆಗೆ ಒಂದು ಕಿ.ಮೀ.ದೂರ ಕಾಲ್ನಡಿಗೆ ಮೂಲಕ ಬಂದವು. ಈ ವೇಳೆ ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಆಡಿಗಳ ನೂರಾರು ಮಹಿಳೆಯರು ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು. ಜೊತೆಗೆ ಚಂಡೆ, ನಗಾರಿ, ವೀರಗಾಸೆ, ಕಂಸಾಳೆ, ಕೋಲಾಟ, ಪೂಜಾಕುಣಿತ, ಚಂಡೆ ಮೇಳ, ಗಾರುಡಿ ಗೊಂಬೆ, ಡೊಳ್ಳು ಕುಣಿತ ಸೇರಿದಂತೆ ನಾನಾ ಕಲಾವಿದರ ತಂಡಗಳು ಗಜಪಡೆಯ ಮೆರವಣಿಗೆಗೆ ಮೆರಗು ನೀಡಿದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+