8 ಬಾರಿ ಚಿನ್ನದ ಅಂಬಾರಿ ಹೊತ್ತ ಅರ್ಜುನನಿಗೆ ದಸರಾದಲ್ಲಿ ಗೌರವ: ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ
ಮೈಸೂರು, ಸೆಪ್ಟೆಂಬರ್ 12: ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಸತತ 8 ಬಾರಿ ಚಿನ್ನದ ಅಂಬಾರಿ ಹೊತ್ತ ಅರ್ಜುನನ್ನು ಸ್ಮರಿಸಲು ಅವಕಾಶಕ್ಕಾಗಿ ಮನವಿ ಮಾಡಲಾಗಿದೆ.
ಅರ್ಜುನ ಆನೆಯ ಶಬ್ದ ಚಿತ್ರ ಪ್ರದರ್ಶಿಸಿ ಹಾಗೂ ದಸರಾ ವಸ್ತು ಪ್ರದರ್ಶನ ಸರ್ಕಾರಿ ಮಳಿಗೆಗಳ ವಿಭಾಗ ಅರಣ್ಯ ಇಲಾಖೆಯ ವತಿಯಿಂದ ಅರ್ಜುನ ಸ್ಮರಣೆ ಮಾಡುವ ನಿಟ್ಟಿನಲ್ಲಿ ನಮ್ಮ ಅರ್ಜುನ ಗ್ಯಾಲರಿ ಸ್ಥಾಪಿಸಲು ಕೆಎಂಪಿಕೆ ಟ್ರಸ್ಟ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಾದ ಶಿವರಾಜು ಮೂಲಕ ಮನವಿ ಮಾಡಲಾಗಿದೆ.

ಸತತ 8 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು. 2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿ ಸೇವೆ ಸಲ್ಲಿಸಿದೆ.ಈ ವರ್ಷವೂ ನಿಶಾನೆ ಆನೆಯಾಗಿ ಭಾಗಿಯಾಗುವ ನಿರೀಕ್ಷೆ ಇತ್ತು.
ಕಾಡಾನೆ ಸೆರೆಯಲ್ಲಿ ಸಾವನ್ನಪ್ಪಿದ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ರಾಜ್ಯ ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು. ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ.
ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ದೇಶ ವಿದೇಶದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಅರ್ಜುನನ ಸ್ಮರಿಸಬೇಕು ಎಂದು ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮನವಿ ಮಾಡಿದ್ದಾರೆ.
90 ದಿನಗಳು ನಡೆಯುವ ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದ ಸರ್ಕಾರಿ ಮಳಿಗೆ ವಿಭಾಗ ಅರಣ್ಯ ಇಲಾಖೆಯ ವತಿಯಿಂದ ಅರ್ಜುನ ಆನೆಯ ಸೇವೆ, ಭಾವಚಿತ್ರ ಮಾಹಿತಿಯುಳ್ಳ 'ನಮ್ಮ ಅರ್ಜುನ' ಸ್ಮರಿಸುವ ಗ್ಯಾಲರಿ ವಲಯ ನಿರ್ಮಿಸಲು ಕ್ರಮಕೈಗೊಳ್ಳಲಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಇದೇ ಸಂದರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಸಾಮಾಜಿಕ ಹೋರಾಟಗಾರ ನೆದರ್ಬಾದ್ ಚರಣ್ ರಾಜ್, ಬೈರತಿ ಲಿಂಗರಾಜು, ಸುಚೇಂದ್ರ, ಚಕ್ರಪಾಣಿ, ಮೋಹನ್ ಕುಮಾರ್, ದುರ್ಗಾ ಪ್ರಸಾದ್, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜು ಹಾಗೂ ಇನ್ನಿತರರು ಹಾಜರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications