ದಸರಾ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿಯಲ್ಲಿ ಭಾಗಿಯಾಗಲು ಅವಕಾಶ: ಈಗಲೇ ಅರ್ಜಿ ಸಲ್ಲಿಸಿ!
ಮೈಸೂರು, ಸೆಪ್ಟೆಂಬರ್ 07: ಮೈಸೂರು ದಸರಾ ಅಂದರೆ ಸಂಸ್ಕೃತಿ ಪರಂಪರೆಯನ್ನು ಮೇಳೈಸುವ ಸಡಗರವನ್ನು ಸಂಭ್ರಮಿಸುವ ಕಲೆ ಸಾಹಿತ್ಯವನ್ನು ಪ್ರೋತ್ಸಾಹಿಸುವ ಫಲಪುಷ್ಪ ಪ್ರದರ್ಶನಕ್ಕೆ ಆದ್ಯತೆ ನೀಡುವ ವೇದಿಕೆಯಾಗಿದೆ. ಹೀಗಾಗಿ ದಸರಾದಲ್ಲಿ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಸರಾಕ್ಕೆ ಫಲಪುಷ್ಪ ಪ್ರದರ್ಶನ ಹೊಸ ಮೆರಗು ನೀಡುತ್ತದೆ. ನಗರದ ಕರ್ಜನ್ ಪಾರ್ಕ್ ನಲ್ಲಿ ದಸರಾ ಫಲಪ್ರದರ್ಶನ ನಡೆದರೆ ಅದನ್ನು ನೋಡುವುದೇ ಚೆಂದ ಇಷ್ಟೇ ಅಲ್ಲದೆ, ಮನೆಗಳಲ್ಲಿ ಸುಂದರ ಹೂತೋಟಗಳನ್ನು ನಿರ್ಮಿಸುವ ಮೂಲಕ ಮಹಿಳೆಯರು ಮೆರಗು ನೀಡುತ್ತಾರೆ. ಇಂತಹ ಪರಿಸರ ಸ್ನೇಹಿ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಕೈ ತೋಟಗಳ ಸ್ಪರ್ಧೆ ನಡೆಸಲಾಗುತ್ತಿದೆ.

ಇದೀಗ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಿದ್ದು, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ , ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಹರಿಂದ ಅರ್ಜಿಗಳನ್ನು ಕರೆಯಲಾಗಿದೆ.
ಸ್ಪರ್ಧೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ, ಫೋನ್ ಪೇ, ಚೆಕ್, ಡಿಡಿ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.

ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಕವಿಗೋಷ್ಠಿಯಲ್ಲಿ ಕವಿಗಳು ಭಾಗವಹಿಸಿ
ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳು ಭಾಗವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಾದೇಶಿಕ ಕವಿಗೋಷ್ಠಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವವರು ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಒಬ್ಬರಂತೆ ಭಾಗವಹಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ಎರಡು ಕವನ ಸಂಕಲನಗಳನ್ನು ಪ್ರಕಟಿಸಿರಬೇಕು. ಕವಿತೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು.
ಕವಿಗಳು ಅಂಚೆ ಮೂಲಕ ಅರ್ಜಿ ಸಲ್ಲಿಸಿ
ಕಳೆದ ಎರಡು ವರ್ಷಗಳಿಂದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದವರು ತಮ್ಮ ಸ್ವ ವಿವರ ಮತ್ತು ಕವನ ಸಂಕಲನಗಳೊoದಿಗೆ ಅರ್ಜಿಗಳನ್ನು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಿಗೆ ನೇರವಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸೆಪ್ಟಂಬರ್ 12 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9902242703, 6360351727 ಹಾಗೂ ಕವಿಗಳಿಗೆ ಕಾರ್ಯಕ್ರಮಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ದಸರಾ ಕವಿಗೋಷ್ಠಿ ಉಪ ಸಮಿತಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications