• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ನಡುವೆ ಮೈಸೂರು ದಸರಾ: ಅಧಿಕಾರಿಗಳೊಂದಿಗೆ ಇಂದು ಸಿಎಂ ಸಭೆ

|

ಬೆಂಗಳೂರು, ಅಕ್ಟೋಬರ್ 11: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಮೈಸೂರು ದಸರಾ ಆಚರಣೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮೈಸೂರು ಜಿಲ್ಲಾ ಅಧಿಕಾರಿಗಳ ಜೊತೆ ಚರ್ಚಿಸಿದರು.

ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನಾಡಹಬ್ಬ ದಸರಾ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಜಯದೇವದ ಡಾ. ಸಿ.ಎನ್. ಮಂಜುನಾಥ್

ಮೈಸೂರು ದಸರಾ ಆಚರಣೆಯ ಮುಂಜಾಗ್ರತಾ ಕ್ರಮಗಳ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ ಆಯುಕ್ತ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ.ಅನಿಲ್ ಕುಮಾರ್ ಭಾಗವಹಿಸಿದ್ದರು.

ಅಕ್ಟೋಬರ್ 17 ರಂದು ಬೆಳಗ್ಗೆ 7:45 ರಿಂದ 8:15 ರೊಳಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದ್ದು, ಕೊರೊನಾ ವಾರಿಯರ್ಸ್ ಗಳ ಆಯ್ಕೆಯನ್ನು ಆಯಾ ಇಲಾಖೆಯ ಮುಖ್ಯಸ್ಥರಿಗೆ ವಹಿಸಲಾಗಿದೆ.

ಮೈಸೂರು ದಸರಾದಲ್ಲಿ ಕಾಣುತ್ತಿರುವುದೀಗ ಕೊರೊನಾ ಭಯ

ಅರಮನೆಯ ಆವರಣದಲ್ಲಿ 9 ದಿನಗಳ ಕಾರ್ಯಕ್ರಮ ಇರಲಿದ್ದು, 9 ದಿನಗಳ ಕಾಲ ರಾಷ್ಟ್ರೀಯ, ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಿಂದ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಆದರೆ ಈ ಬಾರಿ ಒಂದು ದಿನಕ್ಕೆ ಒಂದೇ ಕಾರ್ಯಕ್ರಮ ಇರಲಿದೆ ಎಂದು ತಿಳಿದು ಬಂದಿದೆ.

ಈ ಬಾರಿಯ ದಸರಾ ಮಹೋತ್ಸವದಲ್ಲಿ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸುವ ಉದ್ದೇಶದಿಂದ ಜಯದೇವ ಆಸ್ಪತ್ರೆ ನಿರ್ದೇಶಕ, ಹೃದ್ರೋಗ ತಜ್ಞ ಡಾ.ಮಂಜುನಾಥ್ ಅವರನ್ನು ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಡಾ.ಮಂಜುನಾಥ್ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದರು.

   ಮನೆ ಮುಂದೆ ಗಾಂಜಾ ಗಿಡ, ಖತರ್ನಾಕ್ ಕಳ್ಳರು | Oneindia Kannada

   English summary
   Chief Minister BS Yediyurappa discussed with Mysore district officials about the Mysuru Dasara ritual and preemptive measures in the wake of the coronavirus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X