Get Updates
Get notified of breaking news, exclusive insights, and must-see stories!

ಕನ್ನಡ ಪುಸ್ತಕ ಪ್ರಿಯರಿಗಾಗಿ ಈ ಸುದ್ದಿ: ದಸರಾ ಕನ್ನಡ ಪುಸ್ತಕ ಮಾರಾಟ ಮೇಳದ ಸಂಪೂರ್ಣ ವಿವರ ಇಲ್ಲಿದೆ

ಮೈಸೂರು, ಸೆಪ್ಟೆಂಬರ್‌ 26: ನಾಡ ಹಬ್ಬ ಮೈಸೂರು ದಸರಾ 2024ಕ್ಕೆ ದಿನ ಗಣನೆ ಆರಂಭವಾಗಿದೆ. ದಸರಾಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳು ಕೂಡ ಭರದಿಂದ ಸಾಗುತ್ತಿದೆ. ದಸರಾ ಹಿನ್ನೆಲೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಮೈಸೂರು ದಸರಾ ಉತ್ಸವ ಸಮಿತಿ, ಸಂಯುಕ್ತಶ್ರಯದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 11 ರವರೆಗೆ 'ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ- 2024' ನ್ನು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು ಭಾಗವಹಿಸಬಹುದಾಗಿದೆ. ಮಳಿಗೆಯೊಂದಕ್ಕೆ ಒಂದು ಲಕ್ಷ ರೂಪಾಯಿ ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಹೆಸರಿನಲ್ಲಿ ಸಲ್ಲಿಸಬೇಕಾಗಿದೆ.

Mysuru Dasara Kannada Book Sale Mela Will Be Held From October 3 To October 11

ಪುಸ್ತಕ ಮಾರಾಟ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಬೆಂಗಳೂರಿನ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ https://kpp.karnataka.gov.in ವೆಬ್‌ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್ 30 ರೊಳಗೆ ಬೆಂಗಳೂರಿನ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಿಗೆ ಅಂಚೆಯ ಮೂಲಕ ಹಾಗೂ ಇಮೇಲ್ [email protected] ನ ಮೂಲಕ ಸಲ್ಲಿಸಬಹುದಾಗಿದ್ದು, ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಹಂಚಿಕೆ ಮಾಡಲಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ದೂ.ಸಂ:080-22484516/22107704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಕಲಾ ಪ್ರದರ್ಶನಕ್ಕೆ ನೀವೂ ಕಲಾಕೃತಿ ಕಳಿಸಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಂಬoಧ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಆವರಣದಲ್ಲಿ ಅಕ್ಟೋಬರ್ 04 ರಿಂದ 07 ರವರೆಗೆ ನಡೆಯುವ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನಕ್ಕೆ ಕಲಾವಿದರಿಂದ ಕಲಾಕೃತಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ತಮ್ಮ ಕಲಾಕೃತಿಗಳನ್ನು ಕಳಿಸಬಹುದಾಗಿದೆ.

ಕಲಾಪ್ರದರ್ಶನದಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಛಾಯಾಚಿತ್ರ, ಅನ್ವಯ ಕಲೆ ವಿಭಾಗಗಳಲ್ಲಿ ವೃತ್ತಿಪರ ಹಾಗೂ ಹವ್ಯಾಸಿ ವಿಭಾಗಗಳನ್ನು ಮಾಡಲಾಗಿದ್ದು, ಕಲಾಕೃತಿಗಳನ್ನು ಸೆಪ್ಟೆಂಬರ್ 30 ರೊಳಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳಿಗೆ ಬಹುಮಾನ ಇರಲಿದೆ. ಕಲಾಕೃತಿಗಳನ್ನು ಸಲ್ಲಿಸುವ ಕಲಾವಿದರು ಸಂಪೂರ್ಣ ವಿವರವನ್ನು ಸ್ವಯಂ ದೃಢೀಕರಣದೊಂದಿಗೆ ಉಪಸಮಿತಿಗೆ ತಲುಪಿಸಬೇಕು.

ಅರ್ಜಿ ನಮೂನೆಯನ್ನು https://cavamysore.karnataka.gov.in ಅಥವಾ https://mysore.nic.in ವೆಬ್ಸೈಟ್ ಮೂಲಕ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿಯ ಚಂದ್ರಶೇಖರ ಎ.ಪಿ ಅವರ ಮೊ.ಸಂ:9844595568 ಮತ್ತು ರವಿಮೂರ್ತಿ.ಕೆ ಅವರ ಮೊ.ಸಂ: 9844082579 ಅನ್ನು ಸಂರ್ಪಕಿಸಬಹುದು ಎಂದು ಮೈಸೂರು ದಸರಾ ಮಹೋತ್ಸವದ ಲಲಿತಕಲೆ ಮತ್ತು ಕರಕುಶಲ ಉಪಸಮಿತಿಯ ಕಾರ್ಯಾಧ್ಯಕ್ಷರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+