ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ ಹಿನ್ನೆಲೆ: ಮೈಸೂರಲ್ಲಿ ವಾಹನ ಸಂಚಾರದ ಮೇಲೆ ನಿರ್ಬಂಧ

|
Google Oneindia Kannada News

ಮೈಸೂರು,ಅಕ್ಟೋಬರ್.18: 2020ರ ದಸರಾ ನಾಡಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ವಾಹನ ಸಂಚಾರ ಹೆಚ್ಚಾಗುವ ಹಿನ್ನೆಲೆ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ನಗರ ಪೊಲೀಸ್ ಆಯುಕ್ತರು ವಾಹನ ಸಂಚಾರದ ಮೇಲೆ ಕೆಲವು ನಿರ್ಬಂಧಗಳನ್ನು ಹೇರಿ ಆದೇಶ ಹೊರಡಿಸಿರುತ್ತಾರೆ.

ಅಕ್ಟೋಬರ್ 17 ರಿಂದ 26 ರವರೆಗೆ ಪ್ರತಿ ದಿನ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 9.30 ಗಂಟೆಯವರೆಗೆ ನಗರದ ಪ್ರಮುಖ ಸ್ಥಳಗಳಲ್ಲಿ ಹಾಗೂ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಹಾಗೂ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.

ಮೈಸೂರಿನ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವುಮೈಸೂರಿನ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು

ಅರಮನೆ ಸುತ್ತಲಿನ ರಸ್ತೆಗಳಲ್ಲಿ, ನ್ಯೂ ಸಯ್ಯಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ವಿಶ್ವೇಶ್ವರಯ್ಯ ವೃತ್ತ, ನೆಹರು ವೃತ್ತದಿಂದ ಬಿ.ಎನ್.ರಸ್ತೆ ಜಂಕ್ಷನ್ ವರೆಗೆ, ಬನುಮಯ್ಯ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆ ಜಂಕ್ಷನ್‌ನಿಂದ ಬನುಮಯ್ಯ ಚೌಕದ ವರೆಗೆ ಹಾಗೂ ತ್ಯಾಗರಾಜ ರಸ್ತೆಯಲ್ಲಿ ಎನ್. ಮಾಧುರಾವ್ ವೃತ್ತದಿಂದ ಚಾಮರಾಜ ಜೋಡಿ ರಸ್ತೆ ಜಂಕ್ಷನ್‌ವರೆಗೆ ಪ್ರತಿ ದಿನ ಮಧ್ಯಾಹ್ನ 4 ಗಂಟೆಯಿAದ ರಾತ್ರಿ 9.30 ಗಂಟೆಯವರೆಗೆ ಏಕಮುಖ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ.

Mysuru Dasara: Traffic diversion and alternative route

ಅರಮನೆ ಸುತ್ತಲಿನ ರಸ್ತೆಗಳಾದ ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ - ಕುಸ್ತಿ ಅಖಾಡ ಜಂಕ್ಷನ್ - ಬಿ.ಎನ್.ರಸ್ತೆ - ಜಯಚಾಮರಾಜ ಒಡೆಯರ್ ವೃತ್ತ - ಆಲ್ಬರ್ಟ್ ವಿಕ್ಟರ್ ರಸ್ತೆ - ಚಾಮರಾಜ ಒಡೆಯರ್ ವೃತ್ತ - ಚಾಮರಾಜ ಒಡೆಯರ್ ವೃತ್ತ - ಅಲ್ಬರ್ಟ್ ವಿಕ್ಟರ್ ರಸ್ತೆ-ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ-ನ್ಯೂ ಸಯ್ಯಾಜಿರಾವ್ ರಸ್ತೆ-ಬಸವೇಶ್ವರ ವೃತ್ತ - ಚಾಮರಾಜ ಜೋಡಿ ರಸ್ತೆ - ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ ಈ ರಸ್ತೆಗಳಲ್ಲಿ ಅರಮನೆಯನ್ನು ಮದ್ಯಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ಮಾತ್ರ ವಾಹನಗಳು ಸಂಚಿಸಲು ಅವಕಾಶ ವಿರುತ್ತದೆ.

ಮೈಸೂರಿನ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವುಮೈಸೂರಿನ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು

ವಾಹನ ದಟ್ಟಣೆ ಹೆಚ್ಚಾಗುವ ಹಿನ್ನೆಲೆ ನಗರದ ಹಲವು ಕಡೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಅಕ್ಟೋಬರ್ 17 ರಿಂದ 26 ರವರೆಗೆ ಪ್ರತಿ ದಿನ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 9.30 ರವರೆಗೆ ಅಂಬಾವಿಲಾಸ ಅರಮನೆ ಸುತ್ತ ಮುತ್ತಲೂ ಅಂದ್ರೆ ಟೌನ್‌ಹಾಲ್, ದೊಡ್ಡಕರೆ ಮೈದಾನ, ವರಹಾದ್ವಾರದ ಸುತ್ತಲೂ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲ.

Mysuru Dasara: Traffic diversion and alternative route

ಸಯ್ಯಾಜಿರಾವ್ ರಸ್ತೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆಯಲ್ಲಿ ಬಿ.ರಾಚಯ್ಯ ವೃತ್ತದಿಂದ ಬಿ.ಎನ್ ರಸ್ತೆ ಜಂಕ್ಷನ್ ವರೆಗೆ, ಬಿ.ಎನ್ ರಸ್ತೆಯಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಿಂದ ಜಯಚಾಮರಾಜೇಂದ್ರ ವೃತ್ತದವರೆಗೆ, ಆಲ್ಬರ್ಟ್ ವಿಕ್ಟರ್ ರಸ್ತೆಯಲ್ಲಿ ಜಯಚಾಮರಾಜೇಂದ್ರ ವೃತ್ತದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದವರೆಗೆ, ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ.

ಐತಿಹಾಸಿಕ ಮೈಸೂರು ದಸರಾ ನಡೆದು ಬಂದ ಹಾದಿ...ಐತಿಹಾಸಿಕ ಮೈಸೂರು ದಸರಾ ನಡೆದು ಬಂದ ಹಾದಿ...

ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಅರಮನೆಯ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿಸ್ಥಳ ಸೇರಿದಂತೆ, ಡಾ.ರಾಜ್‌ಕುಮಾರ್ ವೃತ್ತದಿಂದ ಟಿ.ಎನ್. ನರಸಿಂಹಮೂರ್ತಿ ವೃತ್ತದವರೆಗೆ, ವಸ್ತು ಪ್ರದರ್ಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‌ನಿಂದ ಶಾಲಿವಾಹನ ರಸ್ತೆ ಜಂಕ್ಷನ್‌ವರೆಗೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆಯಲ್ಲಿ ಶಾಲಿವಾಹನ ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರದರ್ಶನದ ಪೂರ್ವ ದ್ವಾರದವರೆಗೆ, ಮಾನಸರ ರಸ್ತೆಯಲ್ಲಿ ವಾಣಿವಿಲಾಸ ರಸ್ತೆ ಜಂಕ್ಷನ್‌ನಿಂದ ಲೋಕರಂಜನ್‌ರಸ್ತೆ ಜಂಕ್ಷನ್ ವರೆಗೆ.

ಖಾಸಗಿ ದರ್ಬಾರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿದ ಬದಲಾವಣೆ ಏನು ಗೊತ್ತಾ?ಖಾಸಗಿ ದರ್ಬಾರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿದ ಬದಲಾವಣೆ ಏನು ಗೊತ್ತಾ?

ಮಲೈಮಹದೇಶ್ವರ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‌ನಿಂದ ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ, ಸರ್ಕಾರಿ ಭವನದ ರಸ್ತೆಯಲ್ಲಿ ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್‌ನಿಂದ ದಕ್ಷಿಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ವೃತ್ತದವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಆದೇಶದಲ್ಲಿ ತಿಳಿಸಿರುತ್ತಾರೆ.(ಮಾಹಿತಿ ಕೃಪೆ: ವಾರ್ತಾ ಇಲಾಖೆ)

English summary
Mysuru Dasara: Traffic police have announced diversion in traffic and alternative routes till next week said city police commissioner Dr Chandragupta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X