Mysuru Dasra: ನಾಡಹಬ್ಬಕ್ಕೆ ಮುಹೂರ್ತ ನಿಗದಿ; ಈ ಬಾರಿ ಅದ್ದೂರಿ ಆಚರಣೆಗೆ ನಿರ್ಧಾರ

ನಾಡಹಬ್ಬ ದಸರಾಗೆ ಮುಹೂರ್ತ ನಿಗದಿಯಾಗಿದೆ. ಈ ಬಾರಿ ಅದ್ದೂರಿಯಾಗಿ ಮೈಸೂರು ದಸರಾ ಆಚರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದ್ದೂರಿಯ ಜೊತೆಗೆ ಅರ್ಥಪೂರ್ಣವಾಗಿ ದಸರಾ ಆಚರಿಸಲಾಗುವುದು ಎಂದರು. ನಾಡಹಬ್ಬ ಮೈಸೂರು ದಸರಾ - 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಸರಾ ಆಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Mysuru Dasara will begins form October 3rd and 12th jambu savari

ಕಳೆದ ವರ್ಷ ಬರಗಾಲವಿದ್ದ ಕಾರಣ ಅದ್ದೂರಿಯಾಗಿ ದಸರಾ ಆಚರಣೆ ಮಾಡಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಹಬ್ಬ ಯಾವಾಗ?

ಅದ್ದೂರಿ ದಸರಾ ಆಚರಣೆಗೆ ಈ ಬಾರಿ ಅಗತ್ಯ ಅನುದಾನ ನೀಡಲಾಗುತ್ತದೆ. ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಇರಬೇಕು ಎಂದು ಸೂಚನೆ ಕೊಡಲಾಗಿದೆ. ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.

ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ಆಗಸ್ಟ್‌ 21 ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್‌ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದರು.

ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್‌ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್‌, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ದತೆಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+