Kabini Dam: ಕಬಿನಿ, ನುಗು ಜಲಾಶಯ ಭರ್ತಿ: ಜಿಲ್ಲಾಧಿಕಾರಿ ಭೇಟಿ

ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಮೈಸೂರು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೇಟಿ ನೀಡಿದ ವೇಳೆ ಮಾತನಾಡಿದ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

Mysuru DC Inspects Kabini and Nugu Dam Amid Heavy Rainfall

ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ನಂಜನಗೂಡಿಗೂ ಭೇಟಿ

ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು ಅಲ್ಲಿಗೂ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹಳ್ಳಿಕೇರಿ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂಜನಗೂಡು ತಾಲ್ಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕ ಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರದ ಹಳ್ಳದಕೇರಿ ಬಡಾವಣೆಯಲ್ಲಿ ಸಾರ್ವಜನಿಕರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಪ್ರವಾಹ ಎಚ್ಚರಿಕೆ

ಕೇರಳದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯದ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಬಿನಿ ಜಲಾಶಯದಿಂದ 60,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸುವಂತೆ ಕೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+