ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

|
Google Oneindia Kannada News

ಬೆಂಗಳೂರು, ಜೂನ್ 06; ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿದೆ.

Recommended Video

Mysuru ಜಿಲ್ಲಾಧಿಕಾರಿ Rohini Sindhuri ಯನ್ನು ವರ್ಗಾವಣೆ ಮಾಡಿದ ಸರ್ಕಾರ | Oneindia Kannada

ಶನಿವಾರ ತಡರಾತ್ರಿ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕಗೊಂಡಿದ್ದಾರೆ.

ಉಸ್ತುವಾರಿ ಸಚಿವರ ವೈಫಲ್ಯವೇ, ರೋಹಿಣಿ vs ಶಿಲ್ಪಾನಾಗ್ ಜಟಾಪಟಿಗೆ ಕಾರಣ!? ಉಸ್ತುವಾರಿ ಸಚಿವರ ವೈಫಲ್ಯವೇ, ರೋಹಿಣಿ vs ಶಿಲ್ಪಾನಾಗ್ ಜಟಾಪಟಿಗೆ ಕಾರಣ!?

ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವ ಮೊದಲು ರೋಹಿಣಿ ಇದೇ ಇಲಾಖೆಯ ಆಯುಕ್ತರಾಗಿದ್ದರು.

ರೋಹಿಣಿ ಸಿಂಧೂರಿ v/s ಶಿಲ್ಪಾನಾಗ್‌; ದಿನದ ಪ್ರಮುಖ ಬೆಳವಣಿಗೆಗಳು ರೋಹಿಣಿ ಸಿಂಧೂರಿ v/s ಶಿಲ್ಪಾನಾಗ್‌; ದಿನದ ಪ್ರಮುಖ ಬೆಳವಣಿಗೆಗಳು

Mysuru DC Rohini Sindhuri And Commissioner Shilpa Nag Transferred

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್‌ರನ್ನು ನಿರ್ದೇಶಕರು (ಇ-ಆಡಳಿತ) ಆರ್‌ಡಿ&ಪಿಆರ್, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ.

ಮೈಸೂರು: ಶಿಲ್ಪಾನಾಗ್ ಆರೋಪಕ್ಕೆ ರೋಹಿಣಿ ಸಿಂಧೂರಿ ಮೊದಲ ಬಾರಿ ಪ್ರತಿಕ್ರಿಯೆಮೈಸೂರು: ಶಿಲ್ಪಾನಾಗ್ ಆರೋಪಕ್ಕೆ ರೋಹಿಣಿ ಸಿಂಧೂರಿ ಮೊದಲ ಬಾರಿ ಪ್ರತಿಕ್ರಿಯೆ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿಯಾಗಿದ್ದ ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಡಾ. ಬಗಾದಿ ಗೌತಮ್ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತಾಗಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 4ನೇ ಬಾರಿಗೆ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. 2020ರ ಸೆಪ್ಟೆಂಬರ್‌ನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದ್ದಾಗ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ನೇಮಕ ಮಾಡಲಾಗಿತ್ತು.

ಈಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ ಸರ್ಕಾರಕ್ಕೆ ತಲೆನೋವಾಗಿತ್ತು. ಆದ್ದರಿಂದ ಇಬ್ಬರನ್ನು ಸಹ ವರ್ಗಾವಣೆ ಮಾಡಲಾಗಿದೆ. ಹಾಗೂ ಪಾಲಿಕೆ ಆಯುಕ್ತರ ನಡುವೆ ಸ್ಪೋಟಗೊಂಡಿದ್ದ ವೈಷಮ್ಯ ಶುಕ್ರವಾರ ಮತ್ತಷ್ಟು ತೀವ್ರಗೊಂಡಿತು. ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಪೈಪೋಟಿಯಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ದಿನವಿಡಿ ಹಲವು ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು

English summary
Mysuru deputy commissioner Rohini Sindhuri and Mysuru city corporation commissioner Shilpa Nag transferred. Dr. Bagadi Gautham new DC of Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X