• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಂತರಿಕ ಕಚ್ಚಾಟದ ಬಗ್ಗೆ ಸಿದ್ದರಾಮಯ್ಯಗೆ ಚೆನ್ನಾಗಿ ಅರಿವಿದೆ: ಡಿಸಿಎಂ

By ಮೈಸೂರು ಪ್ರತಿನಿಧಿ
|

ಮೈಸೂರು, ಮೇ 31: ಬಿಜೆಪಿ ಪಕ್ಷದ ಆಂತರಿಕ ಕಚ್ಚಾಟದಿಂದ ಸರ್ಕಾರ ಬೀಳುತ್ತದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಸಿ.ಎನ್ ಅಶ್ವಥ್ ನಾರಾಯಣ್, ಆಂತರಿಕ ಕಚ್ಚಾಟ ಏನು ಎನ್ನುವುದು ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಪಕ್ಷದಲ್ಲಿ ನಡೆದ ಆಂತರಿಕ ಕಚ್ಚಾಟದಿಂದ ಯಾವ ಸರ್ಕಾರಕ್ಕೆ ತೊಂದರೆಯಾಗಿದೆ ಎಂಬುದೂ ಗೊತ್ತಿದೆ ಎಂದು ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

ಕಾಂಗ್ರೆಸ್‌ ಶಾಸಕರನ್ನು ಸೆಳೆಯುವ ಜಾರಕಿಹೊಳಿ ಯತ್ನಕ್ಕೆ ಸ್ನೇಹಿತನ ಅಡ್ಡಿ

ಬಿಜೆಪಿ ಪಕ್ಷದಲ್ಲಿ ಲಕ್ಷ್ಮಣ ರೇಖೆ ದಾಟುವವರು ಯಾರೂ ಇಲ್ಲ, ನಮ್ಮಲ್ಲಿ ಯಾವುದೇ ಕಿತ್ತಾಟ ಇಲ್ಲ. ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಇನ್ನೂ ಮೂರೂವರೆ ವರ್ಷ ಸ್ಥಿರ ಆಡಳಿತ ನೀಡಲಿದೆ ಎಂದು ಡಿಸಿಎಂ ತಿಳಿಸಿದರು.

ಬಿಜೆಪಿ ಶಾಸಕರ ಪ್ರತ್ಯೇಕ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಈ ಸಭೆ ಮಾಡಿದ್ದ ತಪ್ಪು. ಕೆಲವರಿಗೆ ಸಣ್ಣ ಪುಟ್ಟ ಅಪೇಕ್ಷೆಗಳು ಇರುತ್ತವೆ, ಅಪೇಕ್ಷೆ ಪಡುವುದು ತಪ್ಪಲ್ಲ. ಆದರೆ ಅದನ್ನು ಕೇಳುವ ರೀತಿ ಸರಿಯಾಗಿರಬೇಕು ಎಂದು ಪ್ರತ್ಯೇಕ ಸಭೆಯನ್ನು ಖಂಡಿಸಿದರು.

ಶಾಸಕರು ನೇರವಾಗಿ ಮುಖ್ಯಮಂತ್ರಿ ಜೊತೆ ಕುಳಿತು ಮಾತನಾಡಬೇಕು. ತಮ್ಮ ಸಮಸ್ಯೆಗಳಿದ್ದರೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ಪಕ್ಷಕ್ಕೆ ಮುಜುಗರ ತರುವ ಕೆಲಸ ಯಾರೂ ಮಾಡಬಾರದು ಎಂದು ಮೈಸೂರಿನಲ್ಲಿ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಹೇಳಿದರು.

English summary
DCM Ashwath Narayana Responded to the allegations of former CM Siddaramaiah that the State government will fall of BJP internal quarrel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X