ಮೈಸೂರು: ಗಡಿ ಭಾಗದ ಜನರ ಅಭಿವೃದ್ಧಿಗಾಗಿ ಜಿಲ್ಲಾಡಳಿತ ತೆಗೆದುಕೊಂಡ ನಿರ್ಧಾರಗಳು, ಇಲ್ಲಿದೆ ವಿವರ
ಮೈಸೂರು, ಡಿಸೆಂಬರ್, 14: ಗಡಿ ಭಾಗದ ಸಮಗ್ರ ಅಭಿವೃದ್ದಿ ನಮ್ಮ ಹೊಣೆಯಾಗಿದೆ. ಮೂಲಭೂತ ಸೌಕರ್ಯಗಳ ಕೊರತೆಯಿಂದ ಗಡಿಭಾಗದ ಜನರು ಬೇರೆಡೆ ಹೋಗಿ ಜೀವನ ಕಟ್ಟಿಕೊಳ್ಳಲು ಮನಸು ಮಾಡಬಾರದು. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳು ಸಮರ್ಪಕವಾಗಿ ಅವರಿಗೆ ತಲುಪಿವೆಯೇ ಎಂಬ ಬಗ್ಗೆ ತಿಂಗಳಿಗೆ ಒಮ್ಮೆಯಾದರೂ ಹೋಗಿ ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮೈಸೂರಿನಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳು ಗಡಿ ಭಾಗದ ಜನರ ಅಭಿವೃದ್ದಿಗೆ ಹಾಕಿಕೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಯನ್ನು ಹಮ್ಮಿಕೊಂಡಿದ್ದರು. ಸಭೆಯಲ್ಲಿ ಮಾತನಾಡಿದ ಅವರು, ಗಡಿ ಭಾಗದ ಜನರ ಪ್ರಾದೇಶಿಕ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ವಿಶೇಷವಾಗಿ 8 ವಿಶ್ವವಿದ್ಯಾಲಯಗಳ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ. ಗಡಿ ಭಾಗದ 63 ತಾಲೂಕುಗಳ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಮಾಡಲಾಗುತಿದೆ. ಅಸಮತೋಲನ ಕಂಡುಬರುವ ಕಡೆ ಪ್ರಾಧಿಕಾರ ಹಾಗೂ ಸರ್ಕಾರದ ಮೂಲಕ ಗಡಿ ಜನರ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಗಡಿಭಾಗದ ಕನ್ನಡ ಶಾಲೆಗಳಿಗೆ ಶಾಲಾ ಕಟ್ಟಡ, ಪಾಠ, ಪೀಠೋಪಕರಣ, ಕಾಂಪೌಂಡ್, ಗೋಡೆ ನಿರ್ಮಾಣ, ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಆರ್ಥಿಕ ಇತಿಮಿತಿಯೊಳಗೆ ಅನುದಾನವನ್ನು ಒದಗಿಸಲಾಗುವುದು ಎಂದರು.

ಸಂಸ್ಕೃತಿ, ಪ್ರಗತಿ ಒಂದೇ ನಾಣ್ಯದ ಎರಡು ಮುಖ
ಸಂಸ್ಕೃತಿ ಮತ್ತು ಪ್ರಗತಿ ಏಕಕಾಲಕ್ಕೆ ಸಾಗಬೇಕು. ಅವೆರಡೂ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಹಾಗಾಗಿ ಖಾಸಗಿ ಸಂಸ್ಥೆಗಳ ಸಾಂಸ್ಕೃತಿಕ ಭವನಗಳಿಗೆ ಅನುದಾನ ನೀಡಲಾಗುವುದು. ಗಡಿಭಾಗದ ಕನ್ನಡಿಗರ ಅಸ್ಮಿತೆ, ವಿಕಾಸಗೊಳ್ಳಲು ಗಡಿಭಾಗದ ವ್ಯಾಪ್ತಿಗೊಳಪಡುವ 19 ಜಿಲ್ಲೆ 63 ತಾಲೂಕುಗಳ 980 ಹಳ್ಳಿಗಳು ನೆರೆಯ 6 ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿವೆ. ಈ ಭಾಗಗಳ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಪ್ರಾಧಿಕಾರ ಬದ್ಧವಾಗಿದೆ ಎಂದರು.

ಮೂಲಸೌಕರ್ಯ ಕಲ್ಪಿಸಲು ಕ್ರಮ
ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕಿನ ಕೆಲ ಹಳ್ಳಿಗಳು ಗಡಿ ಭಾಗದಲ್ಲಿವೆ. ಈ ಪ್ರದೇಶಗಳ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಚ್.ಡಿ ಕೋಟೆ ನಾಲ್ಕು ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ಸ್ಥಿತಿಗತಿ, ಆರೋಗ್ಯ ಸ್ಥಿತಿಗತಿ, ಅನ್ಯ ಭಾಷೆಯ ಶಾಲೆಗಳಿಗೆ ಮಕ್ಕಳು ಹೋಗುತಿದ್ದಾರೆಯೇ ಎಂಬ ವರದಿಯನ್ನು ತರಿಸಿಕೊಳ್ಳಲಾಗುವುದು. ಉದ್ಯೋಗ ಅರಸಿ ಬೇರೆಡೆಗೆ ಹೋದರೆ ತೊಂದರೆಯಿಲ್ಲ. ಉದ್ಯೋಗವಿಲ್ಲದೆ ಉದ್ಯೋಗಕ್ಕಾಗಿ ಬೇರೆಡೆಗೆ ಹೋಗಬಾರದು. ಆ ಭಾಗದ ಗಿರಿಜನರ ಅಭಿವೃದ್ದಿಗಾಗಿ ಸರ್ಕಾರಿ ಶಾಲೆಗಳು, ಆಶ್ರಮ ಶಾಲೆಗಳು, ಗಿರಿಜನ ಶಾಲೆಗಳ ಅಭಿವೃದ್ದಿ ಮಾಡಲಾಗುತ್ತಿದೆ. ಹಾಗೂ ಕೌಶಲಾಭಿವೃದ್ದಿ ತರಬೇತಿಗಳನ್ನು ನೀಡುವುದರ ಮೂಲಕ ತರಬೇತುಗೊಳಿಸಲಾಗುತ್ತಿದೆ ಎಂದರು.

ಕನ್ನಡ ಭವನಗಳ ಸ್ಥಾಪನೆಗೆ ನಿರ್ಧಾರ
ಸಾಂಸ್ಕೃತಿಕ ಚಟುವಟಿಕೆ ಭಾಗವಾಗಿ ರಂಗಾಯಣದ ನಾಟಕಗಳನ್ನೂ ಈ ಭಾಗದಲ್ಲಿ ಪ್ರಸ್ತುತ ಪಡಿಸಲಾಗುವುದು. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿಗಳಲ್ಲಿ ಸಾಂಸ್ಕೃತಿಕ ನಿಧಿ ಸ್ಥಾಪನೆ ಮಾಡಿ ಗಡಿ ಜನರ ಸಾಂಸ್ಕೃತಿಕ ಕಲೆಗಳನ್ನು ಉಳಿಸಲು ಪ್ರಯತ್ನಿಸಬೇಕು. ಕರ್ನಾಟಕ ಸರ್ಕಾರ ಈಗಾಗಲೇ ಹೊರರಾಜ್ಯಗಳ ಗಡಿ ಭಾಗಗಳಾದ ಗೋವಾ, ಕಾಸರಗೋಡು ಹಾಗೂ ಅಕ್ಕಲ ಕೋಟೆಗಳಲ್ಲಿ ಕನ್ನಡ ಭವನಗಳನ್ನು ನಿರ್ಮಿಸಲು ಉದ್ದೇಶಿಸಿದೆ ಎಂದರು.

ಸ್ವಾಗತ ಕಮಾನುಗಳನ್ನ ನಿರ್ಮಿಸಲಾಗುತ್ತದೆ
ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಗಿರಿಜನರ ಉತ್ಸವಗಳನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಗಿರಿಜನ ಕಲಾವಿದರಿಗೆ ಅವಕಾಶ ಹಾಗೂ ಸಂಭಾವನೆ ಸಿಗುವಂತೆ ನೋಡಿಕೊಳ್ಳಬೇಕು. ರಾಜ್ಯದ ಗಡಿ ಭಾಗಗಳಲ್ಲಿ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗುತ್ತದೆ. ಅದರಿಂದ ಹೊರರಾಜ್ಯಗಳಿಂದ ಬರುವವರಿಗೆ ನಮ್ಮ ರಾಜ್ಯದ ವಿಶಿಷ್ಟತೆ ತಿಳಿಯುತ್ತದೆ. ಇದಕ್ಕೆ ಪ್ರಾಧಿಕಾರ ಹಾಗೂ ನರೇಗಾದಿಂದ ಹಣ ಭರಿಸಲಾಗುವುದು. ಬೇರೆ ರಾಜ್ಯದವರು ನಿರ್ಮಿಸಿದಂತೆ ವೈಭವಯುತವಾಗಿ ಸ್ವಾಗತ ಕಮಾನುಗಳಿರಲಿ ಎಂದು ಸೂಚಿಸಿದರು.

ಸಾಕ್ಷ್ಯಚಿತ್ರ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ
ನಂತರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಜಿಲ್ಲಾಮಟ್ಟದ ಅಧಿಕಾರಿಗಳು ಎರಡೂ ತಾಲೂಕುಗಳ ಗಡಿ ಭಾಗದ ಸಮಸ್ಯೆಗಳಿಗೆ ಹೆಚ್ಚಿನ ಒತ್ತು ಕೊಡಬೇಕು. ಅವರ ಸಂಸ್ಕೃತಿ, ಭಾಷೆ ಉಳಿಸಲು ಅವರಿಗೆ ಬೇರೆ ಕಡೆ ಇದ್ದರೆ ಚನ್ನಾಗಿತ್ತು ಎಂಬ ಭಾವನೆ ಬರದಂತೆ ನೋಡಿಕೊಳ್ಳಬೇಕು. ಗಿರಿಜನರ ಹಾವಭಾವ, ಊಟದ ಪದ್ದತಿ, ಜೀವನ ಶೈಲಿ ಸೇರಿದಂತೆ ಮುಂತಾದವುಗಳನ್ನು ದಾಖಲಿಸಿ, ಸಾಕ್ಷ್ಯಚಿತ್ರ ಮಾಡುವತ್ತ ಗಮನಹರಿಸಬೇಕಾಗಿದೆ. ವಿಮಾನ ನಿಲ್ದಾಣಗಳಲ್ಲಿ ಗಣ್ಯರನ್ನು ಸ್ವಾಗತಿಸಿವಾಗ ಯಕ್ಷಗಾನದಂತಹ ಕಲೆಗಳೊಂದಿಗೆ ಗಿರಿಜನರ ನೃತ್ಯಗಳನ್ನು ಏರ್ಪಡಿಸಲು ಪ್ರಾಧಿಕಾರ ಮುಂದಾಗಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮ ಮಾತನಾಡಿ, ಈ ಭಾಗದಲ್ಲಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಕುಡಿಯುವ ನೀರು, ರಸ್ತೆ, ಚರಂಡಿ, ನರೇಗಾ ಕಾಮಗಾರಿಗಳು, ಸೋಲಾರ್ ಲ್ಯಾಂಪ್, ಘನತ್ಯಾಜ್ಯ ನಿರ್ವಹಣಾ ಘಟಕ, ಸ್ಮಶಾನ ಅಭಿವೃದ್ಧಿ ಸೇರಿದಂತೆ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಉಪವಿಭಾಗಾಧಿಕಾರಿಗಳಾದ ರುಚಿ ಜಿಂದಾಲ್, ಕಮಲಾಬಾಯಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications