ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಣಸೂರು ಉಪ ಚುನಾವಣೆ: ಜಿಲ್ಲಾಡಳಿತದ ತಯಾರಿ ಹೇಗಿದೆ?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 22: ಹುಣಸೂರು ಉಪ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಉಪ ಚುನಾವಣೆಯಲ್ಲಿ ಒಟ್ಟು 21 ನಾಮಪತ್ರ ಸಲ್ಲಿಕೆಯಾಗಿತ್ತು, ಅದರಲ್ಲಿ 11 ನಾಮಪತ್ರಗಳನ್ನು ವಾಪಸ್ ಪಡೆಯಲಾಗಿದ್ದು, ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರಾಗಿ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕರಾಗಿ ಅಮರ್ ಖುಷ್ವ ಹಾಗೂ ವೆಚ್ಚ ವೀಕ್ಷಕರಾಗಿ ಉಪಿಂದರ್ ಬಿರ್ ಸಿಂಗ್ ನೇಮಕವಾಗಿದ್ದಾರೆ.

ಹುಣಸೂರು ಚುನಾವಣೆ: ಸಿದ್ದರಾಮಯ್ಯ ಮತ್ತು ಶ್ರೀರಾಮುಲು ನಡುವೆ ಬಿಗ್ ಫೈಟ್ಹುಣಸೂರು ಚುನಾವಣೆ: ಸಿದ್ದರಾಮಯ್ಯ ಮತ್ತು ಶ್ರೀರಾಮುಲು ನಡುವೆ ಬಿಗ್ ಫೈಟ್

ಹುಣಸೂರು ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 274 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದ್ದು, 1,14,580 ಪುರುಷರು, 1,13,388 ಮಹಿಳಾ ಮತದಾರರು ಹಾಗೂ ಇತರೆ 6 ಮತದಾರರು ಸೇರಿದಂತೆ ಸೇರಿ ಒಟ್ಟು 2,27,974 ಮತದಾರರಿದ್ದಾರೆ.

Mysuru District Administration Preparing For By Elections In Hunsur

ಒಟ್ಟಾರೆ ಮತದಾರರ ಪೈಕಿ 2,235 ಮಂದಿ ವಿಶೇಷ ಚೇತನ ಮತದಾರರಿದ್ದಾರೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಹುಣಸೂರಿನ ಡಿ. ದೇವರಾಜು ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

English summary
The Mysuru District administration has made all preparations for the free and fair by election in Hunsur,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X