ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಮರೀಗೌಡರಿಗೆ ನಿರೀಕ್ಷಣಾ ಜಾಮೀನು ನಕಾರ

By Madhusoodhan
|
Google Oneindia Kannada News

ಮೈಸೂರು, ಜುಲೈ, 12: ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಅವರಿಗೆ ಮೈಸೂರು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿದೆ.

ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಏಕವಚನದಲ್ಲಿ ಅವರನ್ನು ನಿಂದಿಸಿದ ಆರೋಪವನ್ನು ಮರೀಗೌಡ ಎದುರಿಸುತ್ತಿದ್ದಾರೆ. ಬಂಧನ ಭೀತಿ ಎದುರಿಸುತ್ತಿದ್ದ ಮರಿಗೌಡ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು.[ಡಿಸಿ ಕೆಲಸಕ್ಕೆ ಅಡ್ಡಿಪಡಿಸಿದ ಮರೀಗೌಡರಿಗೆ ಬಂಧನ ಭೀತಿ]

mysuru

ಮಂಗಳವಾರ ಮರೀಗೌಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೈಗೆ ಎತ್ತಿಕೊಂಡ ನ್ಯಾಯಾಲಯ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಮೂಲಕ ಮರೀಗೌಡ ಬಂಧನಕ್ಕೆ ವೇದಿಕೆ ಸಿದ್ಧವಾದಂತೆ ಆಗಿದೆ.[ಜಿಲ್ಲಾಧಿಕಾರಿಗೆ ಧಮ್ಕಿ, ಸಿದ್ದರಾಮಯ್ಯ ಮೌನವೇಕೆ?]

ನಜರಬಾದ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಮರೀಗೌಡ ಅವರು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 7ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದರು.

ಏನಾಗಿತ್ತು:
ಜುಲೈ 3ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದರು. ಶಿಷ್ಟಾಚಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಸರ್ಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡಿದ್ದರು.

ಆಗ ಅಲ್ಲಿಗೆ ಆಗಮಿಸಿದ್ದ ಕೆ.ಮರೀಗೌಡ ಅವರು ಯಾದಗಿರಿ ಉಪ ವಿಭಾಗಾಧಿಕಾರಿಯಾಗಿ ಬಡ್ತಿ ಹೊಂದಿ, ವರ್ಗಾವಣೆಯಾಗಿರುವ ನವೀನ್‌ ಜೋಸೆಫ್‌ ಅವರನ್ನು ಏಕೆ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದರು. ನಂತರ ಅತಿಥಿಗೃಹದಿಂದ ಹೊರಟ ಜಿಲ್ಲಾಧಿಕಾರಿ ಸಿ.ಸಿಖಾ ಅವರನ್ನು ಏಕವಚನದಲ್ಲಿ ಮರೀಗೌಡ ಅವರು ನಿಂದಿಸಿದ್ದರು. ಮರೀಗೌಡ ಅವರ ಬೆಂಬಲಿಗರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ, ಕಾರು ಅಡ್ಡಹಾಕಿದ್ದರು. ಈ ಬಗ್ಗೆ ಸಿಖಾ ಅವರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

English summary
Mysuru: Mysuru district sessions court has rejected Congress leader Marigowda bail petition on Tuesday, July 12. Marigowda has been booked under various provisions of IPC, including deterring a public servant.Deputy Commissioner C.Shikha filed complaint against Mari Gowda in Nazarbad police station Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X