• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅತ್ಯಾಚಾರ ಪ್ರಕರಣದಲ್ಲಿ ಬಾಲಾಪರಾಧಿ ಭಾಗಿ; ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 28: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಹಾಗೂ ಐಜಿಪಿ ಪ್ರವೀಣ್​ ಸೂದ್ ಶನಿವಾರ ಸುದ್ದಿಗೋಷ್ಠಿ ನಡೆಸಿದರು.

"ಬಂಧಿತ ಆರೋಪಿಗಳು ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ."

"ಅತ್ಯಾಚಾರ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು," ಎಂದು ಮಾಹಿತಿ ನೀಡಿದ್ದಾರೆ.

"ಅತ್ಯಾಚಾರ ಪ್ರಕರಣದಲ್ಲಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು," ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

"ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7 ಹಾಗೂ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ," ಎಂದು ಅವರು ಹೇಳಿದರು.

"ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಇದ್ದರೂ, ಈ ಹಿಂದಿನ ಪ್ರಕರಣಗಳಂತೆ ಇದು ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ," ಆಗಲಿದೆ ಎಂದರು.

 Mysuru Gang Rape Case: 1 Juvenile Criminal Involved, Rs 5 Lakh Reward To Police

"6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದು, ಇವರೆಲ್ಲರೂ ಕೆಲಸಕ್ಕೆಂದು ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ."

"ಇದುವರೆಗೂ ನಮಗೆ ಅತ್ಯಾಚಾರ ಸಂತ್ರಸ್ಥೆಯಿಂದ ಒಂದೂ ಮಾಹಿತಿ ಸಿಕ್ಕಿಲ್ಲ. ಸಂತ್ರಸ್ತೆಯ ಸ್ನೇಹಿತನಿಂದ ಸ್ವಲ್ಪ ಮಾಹಿತಿ ಸಿಕ್ಕಿತು. ಅದರ ಆಧಾರದ ಮೇಲೆ ಐದು ಶಂಕಿತ ಆರೋಪಿಗ ಬಂಧನವಾಗಿದೆ. ಹೈಕೋರ್ಟ್ ಆದೇಶದಂತೆ ಜಾಸ್ತಿ ಮಾಹಿತಿ ನೀಡಲಾಗಲ್ಲ," ಎಂದು ಹೇಳಿದರು.

"ಆರೋಪಿಗಳನ್ನು ಬಂಧಿಸಿದ ಇಡೀ ಪೊಲೀಸ್ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ," ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಪೊಲೀಸರ ಬಗ್ಗೆ ವಿಶ್ವಾಸವಿತ್ತು: ಗೃಹ ಸಚಿವ
"ಮೈಸೂರಿನ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಯಶಸ್ವಿ ಕಾರ್ಯಾಚರಣೆ ಮಾಡಿ, ಐವರನ್ನು ವಶಕ್ಕೆ ಪಡೆದಿದ್ದಾರೆ. ನಾನು ಸರ್ಕಾರದ ಪರವಾಗಿ ಪೊಲೀಸ್ ಇಲಾಖೆಯನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ," ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

"ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಾನು ಆರೋಪಿಗಳ ಶೀಘ್ರ ಬಂಧನಕ್ಕೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದಿವಿ. ಆರೋಪಿಗಳನ್ನು ಶೀಘ್ರ ಬಂಧಿಸುತ್ತಾರೆ ಎಂದಬ ವಿಶ್ವಾಸ ನಮಗೆ ಇತ್ತು. ಪೊಲೀಸ್ ಇಲಾಖೆ ಇಂಥ ವಿಕೃತ ಮನಸ್ಸಿನ ವ್ಯಕ್ತಿಗಳಿಗೆ ಒಳ್ಳೆಯ ಮೆಸೇಜ್ ಪಾಸ್ ಮಾಡಿದೆ," ಎಂದರು.

   ನಿಮ್ ಮಕ್ಳಿಗೆಲ್ಲಾ ಒಳ್ಳೆದಾಗಲ್ಲಾ ಎಂದು ಪೊಲೀಸರ ಮೇಲೆ ರಮೇಶ್ ಕುಮಾರ್ ಫುಲ್ ಗರಂ | Oneindia Kannada

   "ಮೈಸೂರಿನಲ್ಲಿ ಅತ್ಯಾಚಾರ ಘಟನೆ ನಡೆದಾಗ ಆತಂಕ ಮನೆ ಮಾಡಿತ್ತು. ಪೊಲೀಸರು ಸವಾಲು ಎದುರಿಸಿ ಆರೋಪಿಗಳ ಬಂಧನ ಮಾಡಿದ್ದಾರೆ. ನಾನು ಮೈಸೂರಲ್ಲಿ ಸಭೆಗಳನ್ನೇ ಮಾಡುತ್ತಿದ್ದರೆ, ಪೊಲೀಸರು ತನಿಖೆ ಮಾಡಲು ಆಗುತ್ತಿರಲಿಲ್ಲ."

   "ಅತ್ಯಾಚಾರ ಪ್ರಕರಣ ಮರುಕಳಿಸದಂತೆ ವಿಶೇಷ ಬಂದೋಬಸ್ತ್ ಕಲ್ಪಿಸಲಾಗುತ್ತದೆ. ರಾತ್ರಿ 7ರ ಬಳಿಕ ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ರಕ್ಷಣೆ ಕೊಡಲು ಸೂಚನೆ ನೀಡಲಾಗಿದೆ. ಬೆಟ್ಟದ ಸುತ್ತಮುತ್ತ ಗಸ್ತು ಹೆಚ್ಚಿಸಲು ಸೂಚಿಸಲಾಗಿದೆ," ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

   English summary
   DG and IGP Praveen Sood said the preliminary investigation into the existence of a juvenile criminal involved in the Mysuru rape case.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X